ಮಮತಾ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದ ಪೋಸ್ಟ್‌ಗೆ ‘X’ ನಿರ್ಬಂಧ; ಖಾತೆ ನಿರ್ಬಂಧವಾದರೂ ಅಚ್ಚರಿಯಿಲ್ಲ ಎಂದ ದೀಪ್ಕೆ

Date:

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಧನ್ಯವಾದ ತಿಳಿಸಿ ಹಾಕಿದ್ದ ಪೋಸ್ಟ್‌ಗೆ X (ಟ್ವಿಟರ್) ನಿರ್ಬಂಧ ವಿಧಿಸಿದ ಬೆನ್ನಲ್ಲೇ, ಅ.10ರೊಳಗೆ ತಮ್ಮ ಖಾತೆಯನ್ನೇ ಸ್ಥಗಿತಗೊಳಿಸಿದರೂ ಅಚ್ಚರಿಯಿಲ್ಲ ಎಂದು ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.

- Advertisement -

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ತಮ್ಮ ಖಾತೆಯನ್ನು ಸರ್ಕಾರವೇ ಸ್ಥಗಿತಗೊಳಿಸಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. “ಕಾಕ್‌ರೋಚ್‌ ಚಳವಳಿಗೆ ಬೆಂಬಲ ನೀಡಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಅವರೇ, ಧನ್ಯವಾದಗಳು. ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲ ಭಾರತೀಯರೂ ಒಗ್ಗೂಡಬೇಕು” ಎಂದು ಪೋಸ್ಟ್‌ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಹಾಗೂ ಜಂಟಿ ಕಾರ್ಯದರ್ಶಿ ಡೆರೆಕ್ ಒ’ಬ್ರಿಯಾನ್ ಅವರು ದೀಪ್ಕೆ ಅವರ ಪೋಸ್ಟ್‌ ಅನ್ನು ಹಂಚಿಕೊಂಡಿದ್ದರು. ಬಳಿಕ ಆ ಪೋಸ್ಟ್‌ಗೆ ಎಕ್ಸ್‌ ನಿರ್ಬಂಧ ವಿಧಿಸಿದ್ದು, ಅದನ್ನು ವೀಕ್ಷಿಸಲು ಪ್ರಯತ್ನಿಸಿದಾಗ, “ಸ್ಥಳೀಯ ನಿಯಮಗಳ ಕಾರಣದಿಂದ ಈ ವಿಷಯವನ್ನು ಎಕ್ಸ್‌ನಲ್ಲಿ ನಿರ್ಬಂಧಿಸಲಾಗಿದೆ” ಎಂಬ ಸಂದೇಶ ಕಾಣಿಸಿಕೊಂಡಿದೆ.

ಪೋಸ್ಟ್‌ಗೆ ನಿರ್ಬಂಧ ವಿಧಿಸಿರುವುದಕ್ಕೆ ಪ್ರತಿಕ್ರಿಯಿಸಿದ ಡೆರೆಕ್ ಒ’ಬ್ರಿಯಾನ್, ಮಮತಾ ಬ್ಯಾನರ್ಜಿ ಅವರು ಕಾಕ್‌ರೋಚ್‌ ಚಳವಳಿಗೆ ಬಲವಾಗಿ ಬೆಂಬಲ ಸೂಚಿಸಿದ್ದಾರೆ. ಇದಕ್ಕೆ ಧನ್ಯವಾದ ತಿಳಿಸಿದ್ದ ದೀಪ್ಕೆ ಅವರ ಪೋಸ್ಟ್‌ ಅನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಆತಂಕಗೊಂಡಿರುವ ಸರ್ಕಾರದ ಪ್ರಭಾವದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಡೆರೆಕ್ ಒ’ಬ್ರಿಯಾನ್ ಅವರ ಪೋಸ್ಟ್‌ ಅನ್ನು ಹಂಚಿಕೊಂಡ ದೀಪ್ಕೆ, “ಅ.10ರೊಳಗೆ ಸರ್ಕಾರ ನನ್ನ ಎಕ್ಸ್‌ ಖಾತೆಯನ್ನೇ ಸ್ಥಗಿತಗೊಳಿಸಿದರೂ ಅಚ್ಚರಿಯಿಲ್ಲ” ಎಂದು ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಮಮತಾ ಬ್ಯಾನರ್ಜಿ ಶುಕ್ರವಾರ ಬೆಂಬಲ ಸೂಚಿಸಿದ್ದರು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ (ಎಸ್‌ಐಆರ್‌) ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸಿಜೆಪಿ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಂಡು ದೆಹಲಿಯಿಂದ ಹಿಂದಿರುಗಿದ ಬಳಿಕ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಕಾಕ್‌ರೋಚ್ ಜನತಾ ಪಾರ್ಟಿ ಹಾಗೂ ಯುವಜನರು, ವಿದ್ಯಾರ್ಥಿಗಳ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ” ಎಂದು ತಿಳಿಸಿದ್ದರು.

ನೀಟ್‌ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಿದ್ದ ಪ್ರತಿಭಟನೆಗೂ ಮಮತಾ ಬೆಂಬಲ ಸೂಚಿಸಿದ್ದರು.

ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಒಂದು ದಿನದ ಹಿಂದೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತ್ತು. ಮುಂಬೈ ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದರೂ, ಸಾವಿರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಗ್ಯಾನೇಶ್ ರಾಜೀನಾಮೆ ನೀಡದಿದ್ದರೆ ಅ. 10ರಂದು ದೆಹಲಿ ಚಲೋ: ಸಿಜೆಪಿಯ ಅಭಿಜೀತ್ ದೀಪ್ಕೆ ಎಚ್ಚರಿಕೆ

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ್ದ ಅಭಿಜೀತ್ ದೀಪ್ಕೆ, ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡದಿದ್ದರೆ ಅ.10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಮತ್ತೊಂದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದರು. ಈ ಪ್ರತಿಭಟನೆ ಶಾಂತಿಯುತವಾಗಿರಲಿದೆ ಎಂದು ತಿಳಿಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳನ್ನು ಬಯಸುವ ನಾಗರಿಕರು ಹೋರಾಟದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

ಪೋಸ್ಟ್ ನಿರ್ಬಂಧ ಮತ್ತು ಖಾತೆ ಸ್ಥಗಿತದ ನಡುವೆ ವ್ಯತ್ಯಾಸವಿದೆ. ಪೋಸ್ಟ್ ನಿರ್ಬಂಧ ಎಂದರೆ ನಿರ್ದಿಷ್ಟ ವಿಷಯವನ್ನು ಮಾತ್ರ ತೆಗೆದುಹಾಕುವುದು ಅಥವಾ ನಿರ್ದಿಷ್ಟ ಪ್ರದೇಶದಲ್ಲಿ ಅದರ ವೀಕ್ಷಣೆಯನ್ನು ತಡೆಯುವುದು. ಖಾತೆ ಸ್ಥಗಿತ ಎಂದರೆ ಬಳಕೆದಾರರ ಸಂಪೂರ್ಣ ಖಾತೆಯನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಬಳಸಲಾಗದಂತೆ ಮಾಡುವುದು. ಇದು ಸಾಮಾಜಿಕ ಮಾಧ್ಯಮ ವೇದಿಕೆಯ ಬಳಕೆದಾರ ನಿಯಮಗಳ ಉಲ್ಲಂಘನೆಯಿಂದ ಅಥವಾ ಕಾನೂನುಬದ್ಧ ಆದೇಶದ ಪರಿಣಾಮವಾಗಿ ಸಂಭವಿಸಬಹುದು. ಇನ್ನು ಸ್ಥಳೀಯ ನಿರ್ಬಂಧದಡಿ ಒಂದು ದೇಶದಲ್ಲಿ ಮಾತ್ರ ಪೋಸ್ಟ್ ವೀಕ್ಷಣೆಯನ್ನು ತಡೆಯಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ...