ತಮಿಳುನಾಡಿನಲ್ಲಿ ಮಳೆ ಅಬ್ಬರ; ಕರ್ನಾಟಕದ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌: ಹವಾಮಾನ ಇಲಾಖೆ

Date:

Advertisements

ಬಂಗಾಳಕೊಲ್ಲಿಯಲ್ಲಿ ನಿರಂತರವಾಗಿ ವಾಯುಭಾರ ಕುಸಿತವಾಗುತ್ತಿದ್ದು, ಒಂದಾದ ನಂತರ ಮತ್ತೊಂದು ಚಂಡಮಾರುತಗಳು ರೂಪಗೊಳ್ಳುತ್ತಿವೆ. ಇತ್ತೀಚೆಗೆ ಫೆಂಗಲ್‌ ಚಂಡಮಾರುತವು ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಅವಾಂತರ ಸೃಷ್ಟಿಸಿತ್ತು. ಇದೀಗ, ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಗುರುವಾರ, ತಮಿಳುನಾಡಿನಲ್ಲಿ ಮಳೆಯಾಗುತ್ತಿದೆ. ಹೆಚ್ಚು ಮಳೆ ಸುರಿಯುವ ಆತಂಕವಿದ್ದು, ಅಲ್ಲಿನ 22 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲಿ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೈ, ಕರೂರ್, ವೆಲ್ಲೂರು, ರಾಣಿಪೇಟ್, ತಿರುಪತ್ತೂರ್ ಮತ್ತು ತೂತುಕುಡಿ ಹಾಗೂ ಅರಿಯಲೂರ್ ಸೇರಿದಂತೆ 22 ಜಿಲ್ಲೆಗಳಲ್ಲಿ 1ರಿಂದ 5ನೇ ತರಗತಿವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ತಿರುವಣ್ಣಾಮಲೈನಲ್ಲಿ ಶಾಲೆಗಳು ಮಾತ್ರವಲ್ಲದೆ, ಕಾಲೇಜುಗಳಿಗೂ ರಜೆ ನೀಡಲಾಗಿದೆ. ವೆಲ್ಲೂರಿನ ತಿರುವಳ್ಳುವರ್ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.

ಗುರುವಾರ ಬೆಳಗ್ಗೆಯಿಂದಲೇ ತಮಿಳುನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಈಗಾಗಲೇ, ಕಾರೈಕಲ್‌ನಲ್ಲಿ 8 ಸೆಂ,ಮೀ. ಮಳೆಯಾಗಿದ್ದರೆ, ಆದಿರಾಮಪಟ್ಟಿಣಂ, ವೃದ್ಧಾಚಲಂ, ನಾಗಪಟ್ಟಿಣಂ, ತಿರುವರೂರ್, ಕಡಲೂರು, ಪೂನಮಲ್ಲಿ, ಚೆನ್ನೈನಲ್ಲಿ 5-7 ಸೆ.ಮೀ ಮಳೆ ಸುರಿದಿದೆ.

Advertisements

ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿಯೂ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ 9 ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಮಳೆಯಾಗುವ ಸಾಧ್ಯತೆ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X