ಮಹಿಳೆಯರ ಹೆಸರಿನಲ್ಲಿ ರಾಜಕೀಯ: ಕೇಂದ್ರದ ಕ್ಷೇತ್ರ ಮರುವಿಂಗಡಣೆ ಮಸೂದೆ ವಿರುದ್ಧ ಠಾಕ್ರೆ ವಾಗ್ದಾಳಿ

Date:

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಗಳ ವಿರುದ್ಧ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ (ನವೆಂಬರ್ 29) ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮಹಿಳಾ ಮೀಸಲಾತಿ ಜಾರಿಗೆ ತಮ್ಮ ಸಂಪೂರ್ಣ ಬೆಂಬಲವಿದ್ದರೂ, ಸರ್ಕಾರವು ಕ್ಷೇತ್ರ ಮರುವಿಂಗಡಣೆ ಮಸೂದೆಯ ಮೂಲಕ ಮಹಿಳೆಯರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಮತ್ತು ಅವರನ್ನು ದಾರಿತಪ್ಪಿಸುತ್ತಿದೆ ಎಂದು ಠಾಕ್ರೆ ಆರೋಪಿಸಿದ್ದಾರೆ. ಅಲ್ಲದೆ, ಕ್ಷೇತ್ರ ಮರುವಿಂಗಡಣೆಗಾಗಿ ರಚಿಸಲಾಗಿರುವ ಸಮಿತಿಯ ಸ್ವರೂಪ ಮತ್ತು ಪಾರದರ್ಶಕತೆಯ ಬಗ್ಗೆಯೂ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ಅಹಿಂದ, ದಲಿತ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, “ನಾನು ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸುತ್ತೇನೆ, ಕೇವಲ ಅದರ ಜಾರಿಗಾಗಿ ನೀವು ಪ್ರತ್ಯೇಕ ಮಸೂದೆ ತಂದರೆ ಈಗಲೇ ಬೆಂಬಲಿಸಲು ಸಿದ್ಧನಿದ್ದೇನೆ. ಆದರೆ, ಮಹಿಳೆಯರ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಅವರನ್ನು ಮೂರ್ಖರನ್ನಾಗಿಸುತ್ತಿದ್ದೀರಿ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗಾಗಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಸದಸ್ಯರನ್ನು ಒಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಬಿಜೆಪಿ ಸರ್ಕಾರವೇ ನೇಮಿಸಿದ ವ್ಯಕ್ತಿಗಳಾಗಿದ್ದಾರೆ ಎಂದು ಠಾಕ್ರೆ ಆರೋಪಿಸಿದ್ದಾರೆ. ಈ ಸಮಿತಿಯಲ್ಲಿ ನ್ಯಾಯಾಂಗ ಅಥವಾ ವಿರೋಧ ಪಕ್ಷಗಳ ಪ್ರತಿನಿಧಿಗಳಿಲ್ಲದಿರುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಈ ಪ್ರಸ್ತಾವಿತ ಯೋಜನೆಯು ಉತ್ತರ ಪ್ರದೇಶದಂತಹ ರಾಜ್ಯಗಳ ಪ್ರಾತಿನಿಧ್ಯವನ್ನು ಹೆಚ್ಚಿಸಿ, ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತದ ರಾಜ್ಯಗಳ ರಾಜಕೀಯ ಶಕ್ತಿಯನ್ನು ಕುಂದಿಸಲಿದೆ ಎಂದು ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ.

ತಮಗೂ ಈ ಮಸೂದೆಯನ್ನು ಬೆಂಬಲಿಸುವಂತೆ ಕರೆಗಳು ಮತ್ತು ಆಫರ್‌ಗಳು ಬಂದಿದ್ದವು, ಆದರೆ ತಮಗೆ ಮಹಾರಾಷ್ಟ್ರದ ಹಿತಾಸಕ್ತಿಯೇ ಮುಖ್ಯ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಮಸೂದೆಗೆ ಬೆಂಬಲ ಸೂಚಿಸಿರುವ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಮತ್ತು ಡಿಎಂಕೆ ನಾಯಕ ಎಂ. ಕೆ. ಸ್ಟ್ಯಾಲಿನ್ ಅವರು ದೇಶ ಮತ್ತು ತಮ್ಮ ರಾಜ್ಯಗಳ ಹಿತದೃಷ್ಟಿಯಿಂದ ತಮ್ಮ ನಿರ್ಧಾರವನ್ನು ಪುನರ್ವಿಮರ್ಶಿಸಬೇಕು ಎಂದು ಠಾಕ್ರೆ ಮನವಿ ಮಾಡಿದ್ದಾರೆ.

ನವೆಂಬರ್ 30 ರಿಂದ ಡಿಸೆಂಬರ್ 3ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸದಸ್ಯ ಬಲವನ್ನು 850ಕ್ಕೆ ಏರಿಸುವ ಸಂವಿಧಾನ (132ನೇ ತಿದ್ದುಪಡಿ) ಮಸೂದೆ 2026 ಸೇರಿದಂತೆ ಪ್ರಮುಖ ಮಸೂದೆಗಳನ್ನು ಸರ್ಕಾರ ಮಂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ, ಸದನದಲ್ಲಿ ಮಸೂದೆಯ ವಿರುದ್ಧವಾಗಿ ಮತ ಚಲಾಯಿಸುವಂತೆ ಮತ್ತು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುವಂತೆ ಶಿವಸೇನೆ (ಯುಬಿಟಿ) ಪಕ್ಷದ ಎಲ್ಲ 9 ಲೋಕಸಭಾ ಸಂಸದರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ...

ಹಾವೇರಿ |ಕಬ್ಬಿನ ರಿಕವರಿಯಲ್ಲಿ ಮೋಸ ತಡೆಗಟ್ಟಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಂದ ತನಿಖೆಗೆ ಆಗ್ರಹ

ಹಾವೇರಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳು ಸಕ್ಕರೆ ಪ್ರಮಾಣದ ಪರೀಕ್ಷೆ ಮಾಡುವ...