ನೀವು ಪ್ರಧಾನಿಯಾಗಿದ್ದೇ ವಿದೇಶಿ ನೆರವಿನಿಂದ: ಪಿಎಂ ಮೋದಿಗೆ ಬಹಿರಂಗ ಚರ್ಚೆಯ ಸವಾಲೆಸೆದ ರಾಹುಲ್ ಗಾಂಧಿ

Date:

ವಿರೋಧ ಪಕ್ಷಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ‘ವಿದೇಶಿ ಸಹಾಯ’ ಮತ್ತು ‘ಹಸ್ತಕ್ಷೇಪ’ದ ಆರೋಪಗಳಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ತಿರುಗೇಟು ನೀಡಿದ್ದಾರೆ. “ನೀವು ಪ್ರಧಾನಿಯಾಗಿದ್ದೇ ಮತ್ತು ಅಧಿಕಾರದಲ್ಲಿ ಮುಂದುವರಿಯುತ್ತಿರುವುದೇ ವಿದೇಶಿ ನೆರವಿನಿಂದ” ಎಂದು ನೇರ ಆರೋಪ ಮಾಡಿದ್ದಾರೆ.

- Advertisement -

ಅಷ್ಟೇ ಅಲ್ಲದೆ, ಈ ವಿಷಯದ ಕುರಿತು ದೇಶದ ಜನರ ಸಮ್ಮುಖದಲ್ಲಿ ಯಾವುದೇ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಬರುವಂತೆ ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಪ್ರಧಾನಿ ಮೋದಿಯವರು ಇತ್ತೀಚಿನ ಸಾರ್ವಜನಿಕ ಭಾಷಣಗಳಲ್ಲಿ, “ಪ್ರತಿಪಕ್ಷಗಳು ದೇಶದ ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ವಿದೇಶಿ ಸಂಸ್ಥೆಗಳು, ಶಕ್ತಿಗಳ ನೆರವು ಪಡೆಯುತ್ತಿವೆ” ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣ ‘X’ (ಟ್ವಿಟರ್) ಮೂಲಕ ಕಠಿಣವಾಗಿ ಉತ್ತರಿಸಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರ ವಿರುದ್ಧವೇ ಗಂಭೀರ ಆರೋಪಗಳನ್ನು ಸಾಲು ಸಾಲಾಗಿ ಇಟ್ಟಿದ್ದಾರೆ.

Advertisements

ಇದನ್ನೂ ಓದಿ: ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ ಜನಾಂದೋಲನವಾಗಬೇಕು…

“ಮೋದಿ ಅವರೇ, ಈ ದೇಶಕ್ಕೆ ಸುಳ್ಳು ಹೇಳುವುದನ್ನು ನಿಲ್ಲಿಸಿ. ನೀವು ಪ್ರಧಾನಿಯಾದದ್ದು ವಿದೇಶಿ ಸಹಾಯದಿಂದ, ನೀವು ಪ್ರಧಾನಿಯಾಗಿ ಮುಂದುವರಿದಿರುವುದೂ ವಿದೇಶಿ ಸಹಾಯದಿಂದಲೇ. ನಿಮ್ಮ ಆರ್ಥಿಕ ವ್ಯವಸ್ಥೆಯು ಸಂಪೂರ್ಣವಾಗಿ ವಿದೇಶಿಯರ ನಿಯಂತ್ರಣದಲ್ಲಿದೆ, ಅವರ ಬೆಂಬಲವನ್ನು ಹೊಂದಿದೆ. ವಿದೇಶಿ ಸಾಮಾಜಿಕ ಜಾಲತಾಣಗಳು ನಿಮಗೆ ಸಂಪೂರ್ಣ ಬೆಂಬಲ ನೀಡುತ್ತಿವೆ” ಎಂದು ದೂರಿದ್ದಾರೆ.

“ಈ ವಿಷಯದ ಕುರಿತು ಮುಕ್ತ ಚರ್ಚೆಗೆ ನಾನು ನಿಮಗೆ ಸವಾಲು ಹಾಕುತ್ತಿದ್ದೇನೆ. ಯಾವುದೇ ವೇದಿಕೆ, ಯಾವುದೇ ಸಮಯ – ಧೈರ್ಯವಿದ್ದರೆ ಬನ್ನಿ. ಆದರೆ ನೀವು ಇದಕ್ಕೆ ಧೈರ್ಯ ಮಾಡಲಾರಿರಿ. ಏಕೆಂದರೆ, ನಿಮ್ಮ ಬಗ್ಗೆ ನನಗೆ ತಿಳಿದಿರುವ ವಿಷಯ ಗೊತ್ತಾದರೆ ನೀವು ತೀವ್ರವಾಗಿ ಹೆದರುವುದು ಖಚಿತ” ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡದಲ್ಲೇ KATಗೆ ಅರ್ಜಿ ಸಲ್ಲಿಸಬಹುದು; ಇಂಗ್ಲಿಷ್ ಕಡ್ಡಾಯವಲ್ಲ ಎಂದ ಹೈಕೋರ್ಟ್

ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (KAT) ಕನ್ನಡದಲ್ಲಿಯೂ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ...

ವಿಜಯಪುರ | ಕಂದಗಲ್ ರಂಗಮಂದಿರದಲ್ಲಿ ಮಕ್ಕಳಿಂದ ಕನ್ನಡ ಗೀತೆಗಳ ಆಕರ್ಷಕ ನೃತ್ಯ ಪ್ರದರ್ಶನ

ವಿಜಯಪುರದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ...

‘ನೀಟ್-ಪಿಜಿ ಪ್ರಶ್ನೆಪತ್ರಿಕೆ, ಕೀ ಉತ್ತರ ಏಕೆ ನೀಡುತ್ತಿಲ್ಲ’: ಎನ್‌ಬಿಇಎಂಎಸ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನೆ

'ನೀಟ್-ಪಿಜಿ' (NEET-PG) ಪರೀಕ್ಷೆಯ ಮೂಲ ಪ್ರಶ್ನೆಪತ್ರಿಕೆಗಳು ಹಾಗೂ ಕೀ ಉತ್ತರಗಳನ್ನು ಅಭ್ಯರ್ಥಿಗಳಿಗೆ...

ಹೈದರಾಬಾದ್ | ಅಂಡಾಣು ದಂಧೆ ಜಾಲ ಭೇದಿಸಿದ ಪೊಲೀಸರು!

ಹೈದರಾಬಾದ್ ನಗರದ ವಿವಿಧೆಡೆ ದಾಳಿ ನಡೆಸಿದ ಪೊಲೀಸರು, ಬೃಹತ್ ಅಂತರರಾಜ್ಯ ಅಂಡಾಣು...