ನಂಬರ್ ಹಂಚಿಕೊಳ್ಳದೆಯೂ WhatsApp ಚಾಟ್ ಮಾಡಬಹುದು; ಬರಲಿದೆ ಹೊಸ ಫೀಚರ್!

Date:

ಇನ್ನು ಮುಂದೆ ಕೋಟ್ಯಂತರ WhatsApp ಬಳಕೆದಾರರು ತಮ್ಮ ವೈಯಕ್ತಿಕ ಫೋನ್ ನಂಬರ್‌ನ್ನು ಇತರರೊಂದಿಗೆ ಹಂಚಿಕೊಳ್ಳದೆಯೂ ಚಾಟ್ ಮಾಡುವ ಸೌಲಭ್ಯವನ್ನು ಪಡೆಯಲಿದ್ದಾರೆ. ಈ ಮಹತ್ವದ ಅಪ್‌ಡೇಟ್ ಬಗ್ಗೆ ಮೆಟಾ ಒಡೆತನದ ವಾಟ್ಸಾಪ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ.

- Advertisement -

ಬಳಕೆದಾರರ ಫೋನ್ ಸಂಖ್ಯೆಯ ಗೌಪ್ಯತೆಯನ್ನು ರಕ್ಷಿಸುವ ಉದ್ದೇಶದಿಂದ ಈ ಹೊಸ ವೈಶಿಷ್ಟ್ಯವನ್ನು ತರಲಾಗುತ್ತಿದೆ. ಇನ್ನು ಮುಂದೆ ಬಳಕೆದಾರರು ತಮ್ಮದೇ ಆದ ವಿಶಿಷ್ಟವಾದ ‘ಯೂಸರ್ ನೇಮ್‌’ (Unique Username) ಅನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಯೂಸರ್ ನೇಮ್ ಅನ್ನು ಹಂಚಿಕೊಳ್ಳುವ ಮೂಲಕ ಇತರರೊಂದಿಗೆ ಸಂವಹನ ನಡೆಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಹೊಸ ಅಪ್‌ಡೇಟ್‌ನಿಂದಾಗಿ, ನೀವು ದೊಡ್ಡ ಗ್ರೂಪ್‌ಗಳಿಗೆ ಸೇರುವಾಗ ಅಥವಾ ಹೊಸ ವ್ಯಕ್ತಿಗಳು ಅಥವಾ ಸಂಸ್ಥೆಗಳೊಂದಿಗೆ ಮೊದಲ ಬಾರಿಗೆ ಮೆಸೇಜ್ ಮಾಡುವಾಗ ನಿಮ್ಮ ಫೋನ್ ಸಂಖ್ಯೆ ಆಟೋಮ್ಯಾಟಿಕ್ ಆಗಿ ಇತರರಿಗೆ ಕಾಣುವುದಿಲ್ಲ. ಇದರಿಂದ ಬಳಕೆದಾರರ ವೈಯಕ್ತಿಕ ಫೋನ್ ಸಂಖ್ಯೆ ಹೆಚ್ಚು ಸುರಕ್ಷಿತವಾಗಿರುತ್ತದೆ.

ಮೆಟಾ ಕಂಪನಿಯು ಸ್ಪಷ್ಟಪಡಿಸಿರುವಂತೆ, ವಾಟ್ಸಾಪ್‌ನಲ್ಲಿ ಯಾವುದೇ ‘ಡೈರೆಕ್ಟರಿ’ ಅಥವಾ ಸರ್ಚ್ ಆಯ್ಕೆ ಇರುವುದಿಲ್ಲ. ಯಾರಾದರೂ ನಿಮ್ಮನ್ನು ಸಂಪರ್ಕಿಸಬೇಕೆಂದರೆ, ಅವರು ನಿಮ್ಮ ನಿಖರವಾದ ಯೂಸರ್ ನೇಮ್ ಅನ್ನು ತಿಳಿದಿರಲೇಬೇಕು. ಪ್ರಪಂಚದಾದ್ಯಂತ ಮೂರು ಬಿಲಿಯನ್‌ಗೂ ಹೆಚ್ಚು ಬಳಕೆದಾರರಿರುವುದರಿಂದ, ಎಲ್ಲರಿಗೂ ತಮ್ಮ ಮೊದಲ ಆಯ್ಕೆಯ ಹೆಸರು ಸಿಗುವುದು ಕಷ್ಟವಾಗಬಹುದು. ಹೀಗಾಗಿ, ಮುಂದಿನ ಕೆಲವು ತಿಂಗಳುಗಳಲ್ಲಿ ಈ ಸೌಲಭ್ಯವನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು ಎಂದು ಕಂಪನಿ ತಿಳಿಸಿದೆ. ಆಯಾ ದೇಶಗಳಲ್ಲಿ ಈ ಆಯ್ಕೆ ಲಭ್ಯವಾದಾಗ ಬಳಕೆದಾರರಿಗೆ ಸೂಚನೆ ನೀಡಲಾಗುವುದು ಎಂದು ಮೆಟಾ ತಿಳಿಸಿದೆ.

ಇದನ್ನೂ ಓದಿ: ಪ್ರಜಾಸತ್ತೆಯ ಮೇಲೆ ಧರ್ಮಸತ್ತೆಯ ಹಿಡಿತ: ಅಕಾಲ್ ತಖ್ತ್ ಮುಂದೆ ತಲೆಬಾಗಿದ ಪಂಜಾಬ್ ಸರ್ಕಾರ

ಈ ಹೊಸ ಸೌಲಭ್ಯದಲ್ಲಿ ಕ್ರಿಯೇಟರ್‌ಗಳು, ಸಣ್ಣ ಉದ್ಯಮಿಗಳು ಮತ್ತು ವಿವಿಧ ಸಂಸ್ಥೆಗಳಿಗೆ ಹೆಚ್ಚಿನ ಲಾಭವಾಗಲಿದೆ. ಅವರು ಈಗಾಗಲೇ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್‌ನಲ್ಲಿ ಬಳಸುತ್ತಿರುವ ತಮ್ಮ ಯೂಸರ್ ನೇಮ್‌ಗಳನ್ನೇ ವಾಟ್ಸಾಪ್‌ಗೂ ಪಡೆಯಲು ಅವಕಾಶ ನೀಡಲಾಗುವುದು ಎಂದು ಮೆಟಾ ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...