ನೀವು ಸೋಶಿಯಲ್ ಮೀಡಿಯಾ ಪೋಸ್ಟ್‌ಗಳ ಅಳಿಸಬಹುದೆ ಹೊರತು ನಮ್ಮನ್ನಲ್ಲ: ಅಭಿಜೀತ್ ದೀಪ್ಕೆ

Date:

ನೀವು ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳನ್ನು ಅಳಿಸಿಹಾಕಬಹುದು. ಆದರೆ ನಮ್ಮ ಧ್ವನಿಗಳನ್ನು ಅಡಗಿಸಲಾಗದು, ನಮ್ಮನ್ನು ಅಳಿಸಲಾಗದು ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿರುವ ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.

- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆಗಾಗಿ ದೀಪ್ಕೆ ಅಮೆರಿಕದಿಂದ ಇಂದು ದೆಹಲಿಗೆ ಆಗಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಇದನ್ನು ಓದಿದ್ದೀರಾ? ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರಕ್ಕೆ ಯತ್ನ: ದುಷ್ಕರ್ಮಿಗಳು ಪೊಲೀಸ್ ವಶಕ್ಕೆ

“ಸರ್ಕಾರವು ನಮ್ಮ ಸಮಸ್ಯೆಯನ್ನು ಪರಿಹರಿಸುವ ಬದಲಾಗಿ ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಚಳವಳಿಯನ್ನು ಗುರಿಯಾಗಿಸಿಕೊಂಡಿದೆ. ನನ್ನ ಸ್ನೇಹಿತರೇ, ಇದು ದೀರ್ಘ ಹೋರಾಟ. ನಾವು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಲು ಆರಂಭಿಸಿ ಒಂದು ತಿಂಗಳಾಗಿದೆ. ಆದರೆ ಈ ವ್ಯಕ್ತಿಗಳಿಗೆ ಎಷ್ಟು ನಾಚಿಕೆ ಇಲ್ಲ ಎಂದರೆ, ಕ್ರಮ ತೆಗೆದುಕೊಳ್ಳುವ ಬದಲು ನಮ್ಮ ಖಾತೆಗಳನ್ನು ಹ್ಯಾಕ್ ಮಾಡುವುದು, ನಮ್ಮ ಪೋಸ್ಟ್‌ಗಳನ್ನು ಅಳಿಸುವಂತಹ ಕೆಲಸ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

“ವಿಮಾನ ಇಳಿದಾಗ ನನ್ನ ಸ್ವಾತಂತ್ರ್ಯದ ಕೊನೆಯ ಕ್ಷಣಗಳನ್ನು ಅನುಭವಿಸುತ್ತಿರುವಂತೆ ಭಾಸವಾಯಿತು. ನಾನು ನನ್ನ ಸ್ವಾತಂತ್ರ್ಯವನ್ನು ತ್ಯಾಗ ಮಾಡಲು ಸಂಪೂರ್ಣವಾಗಿ ಸಿದ್ಧನಾಗಿದ್ದೆ. ಅನೇಕರು ನಾನು ಜೈಲು ಶಿಕ್ಷೆಯ ಭಯದಿಂದ ರಾಜಿ ಮಾಡಿಕೊಂಡಿದ್ದೇನೆ, ಮಾರಾಟವಾಗಿದ್ದೇನೆ ಎಂದು ಟೀಕಿಸಿದರು. ಆದರೆ ಈ ದೇಶದ ಯುವಕರು ಮತ್ತು ವಿದ್ಯಾರ್ಥಿಗಳು ತಮ್ಮನ್ನು ತಾವು ಮಾರಿಕೊಂಡಿಲ್ಲ” ಎಂದೂ ಹೇಳಿದ್ದಾರೆ.

ಸಿಜೆಪಿ ಪ್ರತಿಭಟನೆಯಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು ಮತ್ತು ಯುವ ವೃತ್ತಿಪರರು ಸೇರಿದಂತೆ ಅಧಿಕ ಸಂಖ್ಯೆಯಲ್ಲಿ ಯುವಜನರು ಭಾಗಿಯಾಗಿದ್ದಾರೆ. ಹಲವು ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪ್ರತಿಭಟನೆಗೆ ಭಾಗಿಯಾಗಿದ್ದಾರೆ. ಅನೇಕ ಮಂದಿ ಜಿರಳೆ ಮುಖವಾಡವನ್ನು ಧರಿಸಿರುವುದು ಕಂಡುಬಂದಿದೆ. ಹೂವುಗಳು ಮತ್ತು ರಾಷ್ಟ್ರಧ್ವಜವನ್ನೂ ಪ್ರತಿಭಟನಾಕಾರರು ಹಿಡಿದಿರುವುದು ವಿಡಿಯೋಗಳಲ್ಲಿ ಕಾಣಬಹುದು.

ಮುನ್ನೆಚ್ಚರಿಕೆ ಕ್ರಮವಾಗಿ ನವದೆಹಲಿ ಮತ್ತು ಇತರ ಗಡಿ ಪ್ರದೇಶಗಳಲ್ಲಿ ಒಟ್ಟಾಗಿ 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...