ನೀವು ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಭಾಷಣ ಹೊಗಳಿದ ‘ಸಾಮ್ನಾ’ ಪತ್ರಿಕೆ

Date:

ಲೋಕಸಭೆಯಲ್ಲಿ ಜುಲೈ 1ರಂದು ರಾಹುಲ್‌ ಗಾಂಧಿ ಮಾಡಿದ ಭಾಷಣವನ್ನು ಉದ್ಧವ್‌ ಠಾಕ್ರೆ ಬಣದ ಶಿವಸೇನೆಯ ಮುಖವಾಣಿ ‘ಸಾಮ್ನಾ’ ಹೊಗಳಿದ್ದು, ನೀವು ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದೆ.

- Advertisement -

ರಾಹುಲ್‌ ಗಾಂಧಿ ಅವರ ಭಾಷಣದಂತೆ ಮುಂದಿನ ದಿನಗಳಲ್ಲಿ ಸರ್ವಾಧಿಕಾರಿಗಳು ಪತನಗೊಳ್ಳಲಿದ್ದಾರೆ. ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿಯ ನಾಯಕರು ಇಂತಹ ಸನ್ನಿವೇಷವನ್ನು ಎದುರಿಸಿಲ್ಲ. ರಾಹುಲ್‌ ಗಾಂಧಿ ಅವರು ಮೋದಿಯ ದೈವತ್ವದ ಸಿಂಧೂರವನ್ನು ಕಳಚಿದ್ದಾರೆ. ಇದಕ್ಕಾಗಿ ವಿಪಕ್ಷದ ನಾಯಕನನ್ನು ಎಷ್ಟು ಅಭಿನಂದಿಸಿದರೂ ಸಾಲದು ಎಂದು ಸಾಮ್ನಾ ಮುಖವಾಣಿಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಂಸತ್ತಿನಲ್ಲಿ ರಾಹುಲ್‌ ಗಾಂಧಿ ಹೇಳಿದಂತೆ ಬಿಜೆಪಿಯು ಹಿಂದುತ್ವದ ಏಕಸ್ವಾಮ್ಯವನ್ನು ಹೊಂದಿಲ್ಲ. ಈ ಮಾತು ಕಳೆದ 10 ವರ್ಷಗಳಲ್ಲಿಯೇ ಸಂಸತ್ತಿನಲ್ಲಿ ಬಿರುಗಾಳಿ ಎಬ್ಬಿಸಿದೆ. ಅಮಿತ್‌ ಶಾ ಕೂಡ ಲೋಕಸಭೆ ಸ್ಪೀಕರ್ ಅವರಿಂದ ರಕ್ಷಣೆ ಕೇಳಿದ್ದಾರೆ ಎಂದು ಸಾಮ್ನಾದಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಚುನಾವಣೆಗಳಿಗಾಗಿ ಹಿಂದುತ್ವದ ಹೆಸರಿನಲ್ಲಿ ಕೆಲವರು ಗಲಭೆಗಳನ್ನು ಸೃಷ್ಟಿಸಿ ಕೋಮುವಾದದ ವಿಷಬೀಜವನ್ನು ಬಿತ್ತಿದರು. ನಿಜವಾದ ಹಿಂದುತ್ವ ಶಾಂತಿ, ಸ್ವಾತಂತ್ರ್ಯ, ಸತ್ಯವನ್ನು ನಿರ್ಬಯವಾಗಿ ಬೆಂಬಲಿಸುತ್ತದೆ. ಇದರಿಂದ ಕೋಪಗೊಂಡ ಮೋದಿ ವಿರೋಧ ಪಕ್ಷದ ನಾಯಕನ ಮೇಲೆ ‘ಹಿಂದುತ್ವಕ್ಕೆ ಅವಮಾನ’ ಎಂದು ಆರೋಪಿಸಿದರು.

ಇಲ್ಲಿಯವರೆಗೂ ಮೋದಿ – ಅಮಿತ್‌ ಶಾ ಅವರು ಬಹುಮತದ ಮೂಲಕ ತಮ್ಮ ಪಾದವನ್ನು ಸಂಸತ್ತಿನ ಕೆಳಗಿಡಲು ಪ್ರಯತ್ನಿಸಿದ್ದರು. ಆದರೀಗ ರಾಹುಲ್‌ ಗಾಂಧಿ ನೇತೃತ್ವದ ಬಿಲಿಷ್ಠ ವಿಪಕ್ಷ ಸಂಸತ್ತಿನಲ್ಲಿ ಹೊರಹೊಮ್ಮಿದೆ. ಇಂತಹ ಕಡಿವಾಣವಿಲ್ಲದ ಜನರನ್ನು ನಿಯಂತ್ರಿಸಲಾಗಿದೆ. ಬಿಜೆಪಿಯವರು ಹಿಂದುತ್ವ ಹಾಗೂ ಧರ್ಮದ ಹೆಸರಿನಲ್ಲಿ ಕಳೆದ 10 ವರ್ಷಗಳಿಂದ ಚುನಾವಣೆಯನ್ನು ಎದುರಿಸುತ್ತಿದ್ದರು. ಆದರೆ ಅವರಿಗೆ ಈಗ ಕನ್ನಡಿಯಲ್ಲಿ ನಿಜವಾದ ಮುಖವನ್ನು ತೋರಿಸಲಾಗಿದೆ ಎಂದು ಸಾಮ್ನಾದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.

ನಾನು ದೇವರಿಂದ ನೇರವಾಗಿ ಸೃಷ್ಟಿಯಾದವನು ಎಂದು ಹೇಳಿದ ಮೋದಿಯವರು ಸಂಸತ್ತಿನಲ್ಲಿ ಅಪಹಾಸ್ಯಕ್ಕೊಳಗಾದರು. ಬಿಜೆಪಿ ನಾಯಕರ ಬಂಡವಾಳವನ್ನು ರಾಹುಲ್‌ ಗಾಂಧಿ ಬಿಚ್ಚಿಟ್ಟಿದ್ದಾರೆ. ಇದಾದ ನಂತರ ಮೋದಿ-ಶಾ ಅವರು ಸ್ಪೀಕರ್‌ ರಕ್ಷಣೆ ಕೇಳಿದ್ದಾರೆ. ಈ ಸಂದೇಶವು ಇ.ಡಿ. ಸಿಬಿಐ ಹಾಗೂ ಇತರೆ ಸಂಸ್ಥೆಗಳಿಗೆ ತಲುಪಿರುತ್ತದೆ ಎಂದು ಸಾಮ್ನಾದಲ್ಲಿ ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...