ಗೃಹರಕ್ಷಕ ದಳ ನೇಮಕಾತಿ ವೇಳೆ ಮೂರ್ಛೆ ಹೋದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Date:

ಗೃಹರಕ್ಷಕ ದಳ ನೇಮಕಾತಿ ಅಭಿಯಾನದಲ್ಲಿ ಭಾಗವಹಿಸಿದ್ದ ಯುವತಿ ಮೇಲೆ ಆ್ಯಂಬುಲೆನ್ಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

- Advertisement -

ಗಯಾದ ಬಿಹಾರ್‌ ಮಿಲಿಟರಿ ಪೊಲೀಸ್‌ ಮೈದಾನದಲ್ಲಿ ಗೃಹರಕ್ಷಕ ದಳ ನೇಮಕಾತಿಯ ಅಭಿಯಾನ ನಡೆಯುತ್ತಿತ್ತು. ಅಭಿಯಾನದಲ್ಲಿ ದೈಹಿಕ ಪರೀಕ್ಷೆ ನಡೆಯುವ ವೇಳೆ 26 ವರ್ಷದ ಯುವತಿ ಮೂರ್ಛೆ ಹೋಗಿದ್ದು, ಕುಸಿದು ಬಿದ್ದಿದ್ದಾರೆ. ಆಕೆಯನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳಿಸಲಾಗಿದೆ. ಮಾರ್ಗಮಧ್ಯೆ, ಆ್ಯಂಬುಲೆನ್ಸ್‌ನಲ್ಲಿ ಆಕೆಯ ಮೇಲೆ ಚಾಲಕ ಮತ್ತು ತಂತ್ರಜ್ಞರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜುಲೈ 24ರಂದು ಘಟನೆ ನಡೆದಿದೆ. ಮಹಿಳೆ ಪ್ರಜ್ಞಾಹೀನಳಾಗಿದ್ದಾಗ ಯುವತಿ ಮೇಲೆ ಮೂರ್ನಾಲ್ಕು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತ ಯುವತಿ ಗಯಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂಬುದನ್ನು ವೈದ್ಯರು ಕೂಡ ಖಚಿತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಆ್ಯಂಬುಲೆನ್ಸ್‌ ಚಾಲಕ ಮತ್ತು ತಂತ್ರಜ್ಞರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ತನಿಖೆ ನಡೆಸುತ್ತಿದೆ. ಆ್ಯಂಬುಲೆನ್ಸ್‌ ಚಾಲಕ ವಿನಯ್‌ ಕುಮಾರ್‌ ಮತ್ತು ಟೆಕ್ನಿಷಿಯನ್‌ ಅಜಿತ್‌ ಕುಮಾರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಬಗ್ಗೆ ಲೋಕ ಜನಶಕ್ತಿ ಪಕ್ಷದ ಸಂಸದ ಚಿರಾಗ್‌ ಪಾಸ್ವಾನ್‌ ಕಳವಳ ವ್ಯಕ್ತಪಡಿಸಿದ್ದು, ಬಿಹಾರ ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಟೀಕೆ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...