ಯುವತಿಯೊಬ್ಬರನ್ನು ಪೊಲೀಸ್ ಅಧಿಕಾರಿಯೊಬ್ಬ ವಂಚಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಪೊಲೀಸರಿಗೆ ದೂರು ನೀಡಿದ್ದು, ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ.
ಸಹಾಯಕ ಪೊಲೀಸ್ ಆಯುಕ್ತ (ಎಎಸ್‌ಪಿ) ಆಗಿ ಸೇವೆ ಸಲ್ಲಿಸುತ್ತಿದ್ದ ಮೊಹಮ್ಮದ್ ಮೊಹ್ಸಿನ್ ಖಾನ್, ಕಾನ್ಪುರ ಐಐಟಿಯಲ್ಲಿ ಪಿಎಚ್‌ಡಿ ಮಾಡುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
“ಯುವತಿ ಐಐಟಿಯಲ್ಲಿದ್ದಾಗ ಮೊಹ್ಸಿನ್ ಅವರು ತಮ್ಮ ಪತ್ನಿಗೆ ವಿಚ್ಛೇದನ ನೀಡಿ, ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ದೈಹಿಕ ಸಂಬಂಧ ಬೆಳೆಸಿದ್ದರು. ಆದರೆ, ಈಗ ನನ್ನನ್ನು ವಿವಾಹವಾಗದೆ ವಂಚಿಸಿದ್ದಾರೆ” ಎಂದು ಆರೋಪಿಸಿರುವ ಯುವತಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಸಂತ್ರಸ್ತ ಯುವತಿ ಕಲ್ಯಾಣಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಡಿಸಿಪಿ (ಟ್ರಾಫಿಕ್) ಅರ್ಚನಾ ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ. ಆರೋಪಿ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆದರೆ, ಇನ್ನೂ ಆತನನ್ನು ಬಂಧಿಸಿಲ್ಲವೆಂದು ಉಪ ಪೊಲೀಸ್ ಆಯುಕ್ತೆ ಅಂಕಿತಾ ಶರ್ಮಾ ತಿಳಿಸಿದ್ದಾರೆ.