​ನಿಮ್ಮ ಅಭಿವೃದ್ಧಿ ಮಾದರಿ ಕೆಲ ಬಂಡವಾಳಶಾಹಿಗಳಿಗಷ್ಟೇ ಸೀಮಿತ: ಕೇಂದ್ರದ ವಿರುದ್ಧ ಖರ್ಗೆ ಕಿಡಿ

Date:

ದೇಶದಲ್ಲಿ ತೀವ್ರವಾಗುತ್ತಿರುವ ಆರ್ಥಿಕ ಅಸಮಾನತೆಯ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

‘ವಿಶ್ವ ಅಸಮಾನತೆ ವರದಿ-2026’ರ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಮಾತನಾಡಿರುವ ಅವರು, “ನಿಮ್ಮ ಅಭಿವೃದ್ಧಿ ಮಾದರಿಯು ಕೇವಲ ಆಯ್ದ ಬಂಡವಾಳಶಾಹಿಗಳಿಗಷ್ಟೇ ಮೀಸಲಾಗಿದೆ,” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

​ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿದ ಖರ್ಗೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಎಂದಿಗೂ ಸಮಾನತೆಯ ಬಗ್ಗೆ ನಿಜವಾದ ಕಾಳಜಿ ಹೊಂದಿಲ್ಲ. ಶ್ರೀಮಂತರನ್ನು ಮತ್ತಷ್ಟು ಶ್ರೀಮಂತರನ್ನಾಗಿ ಮಾಡುವುದು ಮತ್ತು ಬಡವರನ್ನು ಮತ್ತಷ್ಟು ಬಡವರನ್ನಾಗಿ ಮಾಡುವುದೇ ಅವರ ಮನಸ್ಥಿತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

World Inequality Lab ಪ್ರಕಟಿಸಿರುವ 2026ರ ವರದಿಯನ್ನು ಉಲ್ಲೇಖಿಸಿ ಖರ್ಗೆ ಅವರು ಕೇಂದ್ರದ ಆರ್ಥಿಕ ನೀತಿಗಳನ್ನು ಕಟುವಾಗಿ ಟೀಕಿಸಿದರು.

ಅವರು ನೀಡಿದ ಮಾಹಿತಿಯ ಪ್ರಕಾರ, ​ಭಾರತದ ಒಟ್ಟು ಸಂಪತ್ತಿನ ಸುಮಾರು ಶೇ. 40ರಷ್ಟು ಭಾಗವು ಕೇವಲ ಮೇಲ್‌ಸ್ತರದ ಶೇ. 1ರಷ್ಟು ಜನರ ಕೈಯಲ್ಲಿ ಕೇಂದ್ರೀಕೃತವಾಗಿದೆ. ​ದೇಶದ ಕೌಟುಂಬಿಕ ಆಸ್ತಿಯಲ್ಲಿ ಮೂರನೇ ಎರಡರಷ್ಟು ಭಾಗ, ಅಂದರೆ ಶೇ. 65ರಷ್ಟು ಆಸ್ತಿಯು ಮೇಲ್‌ಸ್ತರದ ಶೇ. 10ರಷ್ಟು ಜನರ ಪಾಲಾಗಿದೆ. ​ಆದಾಯದ ಹಂಚಿಕೆಯಲ್ಲಿಯೂ ಭಾರೀ ತಾರತಮ್ಯವಿದ್ದು, ರಾಷ್ಟ್ರೀಯ ಆದಾಯದ ಶೇ. 58ರಷ್ಟು ಪಾಲನ್ನು ಮೇಲ್‌ಸ್ತರದ ಶೇ. 10ರಷ್ಟು ಜನರು ಕಬಳಿಸುತ್ತಿದ್ದಾರೆ. ​ಆದರೆ, ದೇಶದ ತಳಮಟ್ಟದ ಶೇ. 50ರಷ್ಟು ಜನರಿಗೆ ಸಿಗುತ್ತಿರುವುದು ರಾಷ್ಟ್ರೀಯ ಆದಾಯದ ಕೇವಲ ಶೇ. 15ರಷ್ಟು ಪಾಲು ಮಾತ್ರ.

ಹಾಗೆಯೇ ತಮ್ಮ ಭಾಷಣದ ತುಣುಕನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಖರ್ಗೆ, “ನಿಮ್ಮ ಬೆಳವಣಿಗೆಯ ಮಾದರಿಯು ಕೇವಲ ನಿಮ್ಮ ನೆಚ್ಚಿನ, ಆಯ್ದ ಬಂಡವಾಳಶಾಹಿಗಳಿಗೆ ಸೇವೆ ಸಲ್ಲಿಸುತ್ತಿದೆ. ಕಷ್ಟಪಟ್ಟು ದುಡಿಯುವ ಜನರ ಹೋರಾಟದ ಬಗ್ಗೆ ನಿಮಗೆ ಕಿಂಚಿತ್ತೂ ಚಿಂತೆ ಇಲ್ಲ. ಇದೇನಾ ನಿಮ್ಮ ‘ವಿಕಸಿತ ಭಾರತ’ದ ದೃಷ್ಟಿಕೋನ?” ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...