‘ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ’: ಮಸೂದೆ ವಿಳಂಬದ ಬಗ್ಗೆ ಪಂಜಾಬ್, ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಎಚ್ಚರಿಕೆ

Date:

ವಿಧಾನಸಭೆ ಅಂಗೀಕರಿಸಿದ ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಪಂಜಾಬ್ ಮತ್ತು ತಮಿಳುನಾಡು ರಾಜ್ಯಪಾಲರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

- Advertisement -

“ನೀವು ಬೆಂಕಿಯೊಂದಿಗೆ ಆಟವಾಡುತ್ತಿದ್ದೀರಿ” ಎಂದು ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ರಾಜ್ಯ ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳನ್ನು ಅಂಗೀಕರಿಸುವಲ್ಲಿ ವಿಳಂಬ ಮಾಡುತ್ತಿರುವ ರಾಜ್ಯಪಾಲರ ವಿರುದ್ಧ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

“ಸ್ಥಾಪಿತ ಸಂಪ್ರದಾಯಗಳು ಮತ್ತು ರೀತಿನೀತಿಗಳ” ಮೇಲೆ ಸರ್ಕಾರದ ಆಡಳಿತ ನಡೆಯುತ್ತಿದೆ ಎಂದು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ, ಪಂಜಾಬ್ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಬಿಕ್ಕಟ್ಟಿನ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ.

“ಪಂಜಾಬ್‌ನಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ನಮಗೆ ಬೇಸರವಿದೆ. ಇದು ಗಂಭೀರ ಮತ್ತು ಕಳವಳಕಾರಿ ವಿಷಯ” ಎಂದು ಇಂದಿನ ವಿಚಾರಣೆ ವೇಳೆ ಕೋರ್ಟ್ ಹೇಳಿದೆ.

ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಏಕೆ ಮುಂದೂಡಲಿಲ್ಲ ಎಂದು ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರವನ್ನು ಪ್ರಶ್ನಿಸಿದೆ. ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಕೈಯಲ್ಲಿ ಪ್ರಜಾಪ್ರಭುತ್ವ ಕೆಲಸ ಮಾಡಬೇಕಿದೆ ಎಂದು ತಿಳಿಸಿದ ಪೀಠ, ವಿಧೇಯಕಗಳಿಗೆ ಅಂಗೀಕಾರ ನೀಡುವ ರಾಜ್ಯಪಾಲರ ಅಧಿಕಾರದ ಕುರಿತು ಕಾನೂನು ಇತ್ಯರ್ಥಕ್ಕೆ ತ್ವರಿತ ಆದೇಶ ಹೊರಡಿಸುವುದಾಗಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ವಿಚಾರಣೆಗಳಿಗೆ ವಿಶೇಷ ಪೀಠ ರಚಿಸಿ: ಸುಪ್ರೀಂ ನಿರ್ದೇಶನ

ತಮಿಳುನಾಡು ಸರ್ಕಾರದ ಇದೇ ರೀತಿಯ ಮನವಿಯನ್ನು ಸುಪ್ರೀಂ ಪೀಠವೂ ಆಲಿಸಿತು. ವಿಚಾರಣೆಯ ಸಂದರ್ಭದಲ್ಲಿ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಈ “ರೋಗ” (ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ವೈಷಮ್ಯ) “ಪಂಜಾಬ್‌ನಿಂದ ತಮಿಳುನಾಡಿಗೆ ಹರಡುತ್ತಿದೆ” ಮತ್ತು ಇದನ್ನು “ಪರಿಹರಿಸುವ ಅಗತ್ಯವಿದೆ” ಎಂದು ಹೇಳಿದರು.

ಅಲ್ಲದೆ ಇದು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಹರಡುವ ರೋಗವಾಗಿದೆ ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು.

ನವೆಂಬರ್ 6 ರಂದು ಸುಪ್ರೀಂ ಕೋರ್ಟ್ ರಾಜ್ಯಪಾಲರು ಮಸೂದೆಗಳನ್ನು ಅಂಗೀಕರಿಸುವಲ್ಲಿನ ವಿಳಂಬದ ಬಗ್ಗೆ ಕಳವಳ ವ್ಯಕ್ತಪಡಿಸಿತು ಮತ್ತು ಆಯಾ ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳನ್ನು ರಾಜ್ಯಪಾಲರು ಅಂಕಿತ ಹಾಕಬೇಕು ಎಂದು ತಿಳಿಸಿತ್ತು.

ಆಯಾ ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ರಾಜ್ಯಪಾಲರು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ವಿಧೇಯಕಗಳನ್ನು ಅನುಮೋದಿಸುವಲ್ಲಿ ವಿಳಂಬ ಮಾಡಿದ್ದರ ವಿರುದ್ಧ ಪಂಜಾಬ್ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ತನ್ನ ಕಳವಳ ವ್ಯಕ್ತಪಡಿಸಿದೆ.

ಈ ವಿಚಾರದಲ್ಲಿ ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ ಅವರ ಸಹಾಯವನ್ನೂ ಕೋರ್ಟ್ ಕೋರಿದೆ.

ಪ್ರಸ್ತುತ ಎಎಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪಂಜಾಬ್ ವಿಧಾನಸಭೆ ಅಂಗೀಕರಿಸಿದ 27 ಮಸೂದೆಗಳಲ್ಲಿ 22 ಮಸೂದೆಗಳಿಗೆ ಪಂಜಾಬ್ ರಾಜ್ಯಪಾಲ ಪುರೋಹಿತ್ ಒಪ್ಪಿಗೆ ನೀಡಿದ್ದಾರೆ.

ಪುರೋಹಿತ್ ಮತ್ತು ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಸರ್ಕಾರದ ನಡುವಿನ ಇತ್ತೀಚಿನ ವೈಷಮ್ಯವು ಅಕ್ಟೋಬರ್ 20 ರಂದು ನಾಲ್ಕನೇ ಬಜೆಟ್ ಅಧಿವೇಶನದ ವಿಶೇಷ ಅಧಿವೇಶನದಲ್ಲಿ ರಾಜ್ಯವು ಮಂಡಿಸಲು ಪ್ರಸ್ತಾಪಿಸಲಾದ ಮೂರು ಹಣಕಾಸು ಮಸೂದೆಗಳಿಗೆ ಸಂಬಂಧಿಸಿದೆ.

ಅಕ್ಟೋಬರ್ 19 ರಂದು ಪಂಜಾಬ್ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ರಾಜ್ಯಪಾಲರು ಮೂರು ಹಣದ ಮಸೂದೆಗಳಿಗೆ ತಮ್ಮ ಅನುಮೋದನೆಯನ್ನು ತಡೆಹಿಡಿದಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸ್ಟೆಲ್‌ನಿಂದ ಪರಾರಿ ಪ್ರಯತ್ನ: ವಿದ್ಯುತ್ ತಂತಿ ತಗುಲಿ 11ರ ಬಾಲಕಿ ದುರ್ಮರಣ

ಸರ್ಕಾರಿ ಶಾಲಾ ಆವರಣದಲ್ಲಿರುವ ಬಾಲಕಿಯರ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡು ಹೊರಗೆ ಹೋಗಲು...

‘ರೀಲ್ಸ್ ಮಾಡುವವರಿಗೆ ಪತ್ರಕರ್ತರ ರಕ್ಷಣೆ ಅನ್ವಯಿಸದು’: ಸುಪ್ರೀಂ ಕೋರ್ಟ್‌ಗೆ ದೆಹಲಿ ಪೊಲೀಸ್ ಅಫಿಡವಿಟ್‌!

 ಪ್ರತಿಭಟನೆಗಳನ್ನು ವರದಿ ಮಾಡಲು ಪತ್ರಕರ್ತರಿಗೆ ಯಾವುದೇ ಅಡ್ಡಿಯಾಗದಂತೆ ಸುಪ್ರೀಂ ಕೋರ್ಟ್ ನೀಡಿರುವ...

ದೆಹಲಿ ತಾಪಮಾನ 11 ಡಿಗ್ರಿಗೆ ಇಳಿಕೆ: ಚಳಿಯ ಜೊತೆಗೆ ಹೆಚ್ಚಿದ ವಾಯುಮಾಲಿನ್ಯ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಮುಂಜಾನೆ, ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.3...