ಎಐ ಶೃಂಗಸಭೆಯಲ್ಲಿ ಅರೆ ಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ಅಧ್ಯಕ್ಷ ಬಂಧನ

Date:

ಕಳೆದ ವಾರ ನವದೆಹಲಿಯಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ-2026’ರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಆರೋಪದ ಮೇಲೆ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

- Advertisement -

ಎಐ ಶೃಂಗಸಭೆಯಲ್ಲಿ ಭಾರತ-ಅಮೆರಿಕ ಒಪ್ಪಂದವನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಶುಕ್ರವಾರವಷ್ಟೇ ಪ್ರತಿಭಟನೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

​ಶೃಂಗಸಭೆಯ ಪ್ರತಿಭಟನೆಯ ವೇಳೆ ಮಾತನಾಡಿದ್ದ ಉದಯ್ ಭಾನು ಚಿಬ್, ದೇಶದ ಯುವಕರು ಇನ್ನು ಮುಂದೆ ಮೌನವಾಗಿರುವುದಿಲ್ಲ ಎಂದು ಎಚ್ಚರಿಸಿದ್ದರು. ‘ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ’ ಎಂಬುದು ಕೇವಲ ಘೋಷಣೆಯಲ್ಲ, ಬದಲಿಗೆ ಕೋಟ್ಯಂತರ ನಿರುದ್ಯೋಗಿ ಯುವಕರ ಆಕ್ರೋಶದ ಧ್ವನಿಯಾಗಿದೆ. ಅಮೆರಿಕದೊಂದಿಗಿನ ಈ ವ್ಯಾಪಾರ ಒಪ್ಪಂದವು ನಮ್ಮ ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಗಳಿಗೆ ಬಗೆದ ದ್ರೋಹವಾಗಿದ್ದು, ಇದರಿಂದ ಕೇವಲ ಅಮೆರಿಕಕ್ಕೆ ಮಾತ್ರ ಲಾಭವಾಗಲಿದೆ. ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು, ನಾವು ಯುವಕರ ಧ್ವನಿಯನ್ನು ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದ್ದರು.

​”ತಮ್ಮ ಪಕ್ಷವು ಎಐ ಶೃಂಗಸಭೆಗೆ ವಿರೋಧವಾಗಿಲ್ಲ, ಆದರೆ ಭಾರತದ ಹಿತಾಸಕ್ತಿಗಳೊಂದಿಗೆ ಮಾಡಿಕೊಳ್ಳುವ ಯಾವುದೇ ರಾಜಿಯನ್ನು ತಾವು ದೃಢವಾಗಿ ವಿರೋಧಿಸುವುದಾಗಿ ಅವರು ಸ್ಪಷ್ಟಪಡಿಸಿದ್ದರು. ದೇಶದ ರೈತರ ಹಿತಾಸಕ್ತಿಗಳನ್ನು ಕಡೆಗಣಿಸಿದಾಗ, ದೇಶವಿರೋಧಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕಿದಾಗ ಮತ್ತು ಯುವಕರನ್ನು ನಿರುದ್ಯೋಗಿಗಳನ್ನಾಗಿ ಇರಿಸಿ ದ್ವೇಷದ ರಾಜಕಾರಣಕ್ಕೆ ತಳ್ಳಿದಾಗ, ನಾವು ಮೌನವಾಗಿರಬೇಕೇ? ಈ ದೇಶ 140 ಕೋಟಿ ನಾಗರಿಕರಿಗೆ ಸೇರಿದ್ದು. ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ ಎಂದ ಮಾತ್ರಕ್ಕೆ ಸಾರ್ವಜನಿಕರು ಮೌನವಾಗಿರಬೇಕು ಎಂದರ್ಥವಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಉದಯ್‌ ಅವರು ವಾಗ್ದಾಳಿ ನಡೆಸಿದ್ದರು.

ಇದನ್ನು ಓದಿದ್ದೀರಾ? ಶೋಯೆಬ್ ಖಾನ್ | ಬಿಹಾರದ ಕುಗ್ರಾಮದಿಂದ ಯುಎಇ ವಿಶ್ವಕಪ್ ತಂಡದವರೆಗೆ ರೋಚಕ ಪಯಣ

​ಈ ಮಧ್ಯೆ, ಉದಯ್ ಭಾನು ಚಿಬ್ ಬಂಧನವನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದ್ದು, ಹಿರಿಯ ನಾಯಕ ಭೂಪೇಶ್ ಬಘೇಲ್ ಅವರು ಕೇಂದ್ರ ಸರ್ಕಾರವನ್ನು ‘ಸರ್ವಾಧಿಕಾರಿ ಧೋರಣೆ” ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಈ ಕುರಿತು ಸುದೀರ್ಘ ಪೋಸ್ಟ್ ಹಾಕಿರುವ ಬಘೇಲ್, ದೆಹಲಿ ಪೊಲೀಸರ ಈ ಕ್ರಮವನ್ನು ಕಾನೂನುಬಾಹಿರ ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯುವಜನರು ಧ್ವನಿ ಎತ್ತುವುದು, ಪ್ರಶ್ನೆಗಳನ್ನು ಕೇಳುವುದು ಮತ್ತು ಪ್ರತಿಭಟಿಸುವುದು ಅಪರಾಧವಲ್ಲ, ಅದು ಪ್ರಜಾಪ್ರಭುತ್ವದ ಪ್ರಬಲ ಅಸ್ತ್ರ ಎಂಬುದನ್ನು ಈ ಸರ್ವಾಧಿಕಾರಿ ಸರ್ಕಾರ ಮರೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ನಮ್ಮ ಯುವ ಕಾಂಗ್ರೆಸ್ ಕಾರ್ಯಕರ್ತರು ಯಾವುದೇ ಹಿಂಸಾಚಾರ ಅಥವಾ ಪ್ರಚೋದನೆಯಿಲ್ಲದೆ, ಪ್ರಧಾನಮಂತ್ರಿಯವರ ರಾಜಿ ಒಪ್ಪಂದಗಳನ್ನು ಹಾಗೂ ಯುವಜನರ ಹೇಳಲಾಗದ ಸಂಕಟವನ್ನು ಶಾಂತಿಯುತವಾಗಿ ಮುಂದಿಟ್ಟಿದ್ದಾರೆ ಎಂದು ಬಘೇಲ್ ಸಮರ್ಥಿಸಿಕೊಂಡಿದ್ದಾರೆ. ಇದೊಂದು ದಿಟ್ಟ, ನ್ಯಾಯಸಮ್ಮತ ಹಾಗೂ ಪ್ರಜಾಸತ್ತಾತ್ಮಕ ಹೆಜ್ಜೆಯಾಗಿದ್ದು, ಇದನ್ನು ಹತ್ತಿಕ್ಕಲು ಸರ್ಕಾರ ಪೊಲೀಸ್ ದಬ್ಬಾಳಿಕೆಯ ಮೊರೆ ಹೋಗುತ್ತಿದೆ. ಈ ಕ್ರಮವು ಕೇವಲ ಕಾನೂನುಬಾಹಿರವಷ್ಟೇ ಅಲ್ಲ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ. ಉದಯ್ ಭಾನು ಚಿಬ್ ಹಾಗೂ ಬಂಧಿತ ಎಲ್ಲಾ ಕಾರ್ಯಕರ್ತರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಅವರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...