ʼಇಂಡಿಯನ್ ಯೂತ್ ಕಾಕ್ರೋಚಸ್ʼ ಅಭಿಯಾನ ಆರಂಭಿಸಿದ ಯೂತ್ ಕಾಂಗ್ರೆಸ್!

Date:

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಪರೀಕ್ಷೆ ಪೇಪರ್ ಲೀಕ್ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಭಾರತೀಯ ಯೂತ್ ಕಾಂಗ್ರೆಸ್ (IYC) ನಿನ್ನೆ (ಮೇ.26)ಯಿಂದ ರಾಷ್ಟ್ರವ್ಯಾಪಿ ‘ಇಂಡಿಯನ್ ಯೂತ್ ಕಾಕ್ರೋಚಸ್’ (Indian Youth Cockroaches) ಎಂಬ ವಿನೂತನ ಅಭಿಯಾನಕ್ಕೆ ಚಾಲನೆ ನೀಡಿದೆ. ಡಿಜಿಟಲ್ ಲೋಕದಲ್ಲಿ ಭಾರಿ ವೈರಲ್ ಆಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಅಭಿಯಾನದ ಜನಪ್ರಿಯತೆಯ ಬೆನ್ನಲ್ಲೇ ಕಾಂಗ್ರೆಸ್ ಈ ಹೆಜ್ಜೆ ಇಟ್ಟಿದೆ.

- Advertisement -

ಯೂತ್ ಕಾಂಗ್ರೆಸ್ ಉಸ್ತುವಾರಿ ಮನೀಶ್ ಶರ್ಮಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ನೇತೃತ್ವದಲ್ಲಿ ಈ ಅಭಿಯಾನ ಲಾಂಚ್ ಆಗಿದೆ. ಹಕ್ಕುಗಳಿಗಾಗಿ ಹೋರಾಡುವ ಯುವಕರನ್ನು ಮೂದಲಿಸಲು ಬಳಸಲಾಗಿದ್ದ ‘ಜಿರಳೆ’ (Cockroaches) ಎಂಬ ಪದವನ್ನೇ ತಿರುಗೇಟು ನೀಡಲು ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಯೂತ್ ಕಾಂಗ್ರೆಸ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ನಿರುದ್ಯೋಗದ ಕಾರಣದಿಂದ ಹೋರಾಟಗಾರರು ಮತ್ತು ಪತ್ರಕರ್ತರಾಗುವ ಯುವಕರನ್ನು ‘ಜಿರಳೆಗಳು’ ಹಾಗೂ ‘ಪರಾವಲಂಬಿಗಳು’ ಎಂದು ಕರೆದ ಬೆನ್ನಲ್ಲೇ, ಅಭಿಜಿತ್ ದಿಪ್ಕೆ CJP ಅಭಿಯಾನ ಆರಂಭಿಸಿದ್ದರು. ಇದೀಗ ಇದನ್ನೇ ಯೂತ್ ಕಾಂಗ್ರೆಸ್ ಬೀದಿ ಹೋರಾಟದ ರೂಪಕ್ಕೆ ತಂದಿದೆ.

ಇದನ್ನೂ ಓದಿ: ಇಂಧನ ದರ ಏರಿಕೆ ಎಫೆಕ್ಟ್: ದೇಶೀಯ ವಿಮಾನ ಹಾರಾಟ ಕಡಿತಗೊಳಿಸಿದ ಏರ್ ಇಂಡಿಯಾ!

“ದೇಶದಲ್ಲಿ ಉದ್ಯೋಗ, ನ್ಯಾಯ ಮತ್ತು ಉತ್ತರದಾಯಿತ್ವವನ್ನು ಕೇಳುವ ಯುವಕರು ಅಧಿಕಾರದಲ್ಲಿರುವವರ ಕಣ್ಣಿಗೆ ಜಿರಳೆಗಳಂತೆ ಕಂಡರೆ, ಹೌದು, ನಾವು ಅದನ್ನು ಹೆಮ್ಮೆಯಿಂದ ಒಪ್ಪಿಕೊಳ್ಳುತ್ತೇವೆ. ಈ ‘ಭಾರತೀಯ ಯುವ ಜಿರಳೆಗಳು’ ಎಫ್‌ಐಆರ್, ಜೈಲು ಅಥವಾ ಬೆದರಿಕೆಗಳಿಗೆ ಹೆದರಿ ಸುಮ್ಮನಿರುವುದಿಲ್ಲ,” ಎಂದು ಮನೀಶ್ ಶರ್ಮಾ ಗುಡುಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...