‘ಮನುಸ್ಮೃತಿ’ ಪ್ರತಿ ಸುಟ್ಟು ಆರ್‌ಎಸ್‌ಎಸ್ ಕಚೇರಿ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

Date:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಸಮಾವೇಶದ ಸ್ಥಳದಲ್ಲಿ ‘ಶುದ್ಧೀಕರಣ’ ಪೂಜೆ ನಡೆಸಿದ್ದನ್ನು ಖಂಡಿಸಿ, ಭಾರತೀಯ ಯುವ ಕಾಂಗ್ರೆಸ್ (IYC) ಕಾರ್ಯಕರ್ತರು ಭಾನುವಾರ ದೆಹಲಿಯ ಝಂಡೇವಾಲನ್‌ನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಚೇರಿಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯ ಸಂದರ್ಭದಲ್ಲಿ ಜಾತಿ ತಾರತಮ್ಯ ಮತ್ತು ಆರ್‌ಎಸ್‌ಎಸ್ ಸಿದ್ಧಾಂತದ ವಿರುದ್ಧ ಘೋಷಣೆಗಳನ್ನು ಕೂಗಿದ ಯುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ‘ಮನುಸ್ಮೃತಿ’ ಪುಸ್ತಕದ ಪ್ರತಿಗಳನ್ನು ಸುಟ್ಟು ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ವೃತ್ತಿಪರ ಸಂಸ್ಥೆಯೊಳಗೆ ವ್ಯವಸ್ಥಿತವಾಗಿ ನುಸುಳುತ್ತಿರುವ ಆರ್‌ಎಸ್‌ಎಸ್‌: ಕಾಂಗ್ರೆಸ್

ಆಗಸ್ಟ್ 8ರಂದು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದರು. ಖರ್ಗೆ ಅವರ ಭಾಷಣ ಮುಗಿದ ಎರಡು ದಿನಗಳ ನಂತರ, ‘ಶ್ರೀ ರಾಮ್ ಸೇನಾ’ ಸೇರಿದಂತೆ ಕೆಲವು ಸಂಘಟನೆಗಳ ಕಾರ್ಯಕರ್ತರು ಆ ಮೈದಾನದಲ್ಲಿ ‘ಶುದ್ಧೀಕರಣ’ ಹವನ ನಡೆಸಿದ್ದರು. ಖರ್ಗೆ ಅವರು ದಲಿತ ಸಮುದಾಯಕ್ಕೆ ಸೇರಿದವರೆಂಬ ಕಾರಣಕ್ಕಾಗಿಯೇ ಈ ‘ಶುದ್ಧೀಕರಣ’ ನಡೆಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಗಂಭೀರವಾಗಿ ಆರೋಪಿಸಿದ್ದಾರೆ.

ಶನಿವಾರವಷ್ಟೇ ಪತ್ರಿಕಾಗೋಷ್ಠಿ ನಡೆಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಈ ಕೃತ್ಯವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ (SC/ST Act) ಅಪರಾಧವಾಗಿದ್ದು, ಘಟನೆಗೆ ಕಾರಣರಾದವರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದರು.

ಇನ್ನು ಈ ಘಟನೆಯನ್ನು ಖಂಡಿಸಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಆರ್‌ಎಸ್‌ಎಸ್ ಕೇಂದ್ರ ಕಚೇರಿಯತ್ತ ಮೆರವಣಿಗೆ ನಡೆಸಿದರು. ದೇಶವು ‘ಮನುಸ್ಮೃತಿ’ಯಿಂದಲ್ಲ, ಸಂವಿಧಾನದ ಪ್ರಕಾರ ಆಡಳಿತ ನಡೆಸಲ್ಪಡಬೇಕು ಎಂದು ಪ್ರತಿಪಾದಿಸಿದರು. ಆರ್‌ಎಸ್‌ಎಸ್ ಕಚೇರಿಯತ್ತ ಮುನ್ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಮತ್ತು ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ತಳ್ಳಾಟ-ತೂಪಾಟ ನಡೆಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...