ಕಸ್ಟಡಿ ಸಾವು: ಮೃತನ ಕುಟುಂಬಕ್ಕೆ ₹18.44 ಲಕ್ಷ ಪಾವತಿಸಲು ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶ

Date:

ಪೊಲೀಸ್ ವಶದಲ್ಲಿದ್ದಾಗ ಸಂಭವಿಸುವ ಅಸ್ವಾಭಾವಿಕ ಸಾವು, ಅದು ಆತ್ಮಹತ್ಯೆಯಾಗಿದ್ದರೂ ಸಹ, ಸರ್ಕಾರದ ಹೊಣೆಗಾರಿಕೆಯಿಂದ ಹೊರತಾಗಿಲ್ಲ ಎಂದು ದೆಹಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. 2018ರಲ್ಲಿ ಕರಾವಲ್ ನಗರ ಪೊಲೀಸ್ ಠಾಣೆಯ ವಶದಲ್ಲಿದ್ದಾಗ ಮೃತಪಟ್ಟ 19 ವರ್ಷದ ಯುವಕನ ತಂದೆಗೆ 18.44 ಲಕ್ಷ ರೂ. ಪರಿಹಾರ ನೀಡುವಂತೆ ದೆಹಲಿ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

- Advertisement -

ನ್ಯಾಯಮೂರ್ತಿ ಸಚಿನ್ ದತ್ತಾ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದ್ದು, “ಪೊಲೀಸ್ ಕಸ್ಟಡಿಯಲ್ಲಿರುವ ವ್ಯಕ್ತಿಗೂ ಸಂವಿಧಾನದ 21ನೇ ವಿಧಿ (ಜೀವಿಸುವ ಹಕ್ಕು) ಅನ್ವಯಿಸುತ್ತದೆ. ವಶದಲ್ಲಿರುವಾಗ ಆಗುವ ಯಾವುದೇ ಸಾವು ಕೇವಲ ವೈಯಕ್ತಿಕ ದುರಂತವಲ್ಲ; ಅದು ಕಾನೂನು ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುತ್ತದೆ. ಇದು ರಕ್ಷಣೆ ಮಾಡಬೇಕಾದವರ ಕರ್ತವ್ಯಲೋಪವನ್ನು ಎತ್ತಿ ತೋರಿಸುತ್ತದೆ” ಎಂದು ಕಟುವಾಗಿ ನುಡಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಜನವರಿ 15, 2018ರಂದು ಎಫ್‌ಐಆರ್‌ ಒಂದರ ವಿಚಾರಣೆಗೆ ಸಂಬಂಧಿಸಿದಂತೆ ದೀಪಕ್ (19) ಎಂಬ ಯುವಕನನ್ನು ಕರಾವಲ್ ನಗರ ಪೊಲೀಸರು ವಶಕ್ಕೆ ಪಡೆದಿದ್ದರು. ಮರುದಿನ ಆತನನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಆತ ಅದಾಗಲೇ ಮೃತಪಟ್ಟಿದ್ದ ಎಂದು ವೈದ್ಯರು ಘೋಷಿಸಿದ್ದರು. ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಕರೆ ಮಾಡಿ ತಿಳಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲೂ ನೇಣುಬಿಗಿದುಕೊಂಡಿದ್ದರಿಂದ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂಬುದು ದೃಢಪಟ್ಟಿತ್ತು.

ಇದನ್ನು ಓದಿದ್ದೀರಾ? ಶ್ವೇತಭವನವೇ ಟ್ರಂಪ್‌ನ ಬಂಡವಾಳ ಕಚೇರಿ: ಅಧ್ಯಕ್ಷನಾದ ಒಂದೇ ವರ್ಷದಲ್ಲಿ ₹21 ಸಾವಿರ ಕೋಟಿ ಆದಾಯ

ಆದರೆ, ದೀಪಕ್‌ನ ದತ್ತು ತಂದೆ ಶ್ಯಾಮ್ ಸುಂದರ್ ಅವರು ಈ ಬಗ್ಗೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ‘ನಾನು ಠಾಣೆಗೆ ಹೋದಾಗ ನನ್ನನ್ನೂ ಕೆಲವು ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ, ನಮ್ಮಿಬ್ಬರ ಮೇಲೂ ಹಲ್ಲೆ ನಡೆಸಲಾಗಿತ್ತು. ಮಗನನ್ನು ಬಿಡಲು ಪೊಲೀಸರು ಹಣಕ್ಕೆ ಬೇಡಿಕೆಯಿಟ್ಟಿದ್ದರು’ ಎಂದು ಅವರು ಆರೋಪಿಸಿದ್ದರು. ಕಸ್ಟಡಿಯಲ್ಲಿ ಅಸ್ವಾಭಾವಿಕ ಸಾವು ಸಂಭವಿಸಿರುವುದರಿಂದ ಸರ್ಕಾರ ಪರಿಹಾರ ನೀಡಬೇಕು ಎಂದು ಅವರು ವಾದಿಸಿದ್ದರು. ದೆಹಲಿ ಸರ್ಕಾರ ಈ ಅರ್ಜಿಯನ್ನು ವಿರೋಧಿಸಿತ್ತಾದರೂ, ನ್ಯಾಯಾಲಯ ಅದನ್ನು ತಳ್ಳಿಹಾಕಿತು.

ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದ ನ್ಯಾಯಾಲಯವು, ‘ಮಲ್ಟಿಪ್ಲೈಯರ್’ (multiplier) ವಿಧಾನದ ಮೂಲಕ(ಮೃತರು/ಗಾಯಗೊಂಡವರ ವಯಸ್ಸಿಗೆ ಅನುಗುಣವಾಗಿ ಭವಿಷ್ಯದ ಆದಾಯ ನಷ್ಟವನ್ನು ಲೆಕ್ಕ ಹಾಕಲು ಬಳಸುವ ನಿಶ್ಚಿತ ಸಂಖ್ಯೆ) ನಿಖರವಾದ ಪರಿಹಾರದ ಮೊತ್ತವನ್ನು ನಿಗದಿಪಡಿಸಿದೆ. ಮೃತ ಯುವಕನ ಮಾಸಿಕ ಆದಾಯವನ್ನು 12,000 ರೂ. ಎಂದು ಅಂದಾಜಿಸಿ, ಭವಿಷ್ಯದ ಗಳಿಕೆಯ ಶೇಕಡಾ 40ರಷ್ಟು ಮೊತ್ತವನ್ನು ಸೇರ್ಪಡೆಗೊಳಿಸಿ 18ರ ಗುಣಕವನ್ನು ಅನ್ವಯಿಸಲಾಗಿದೆ. ಅಂತ್ಯಕ್ರಿಯೆ ಹಾಗೂ ಇತರೆ ನಷ್ಟಗಳನ್ನು ಸೇರಿಸಿ ಒಟ್ಟು 18.44 ಲಕ್ಷ ರೂ. ಪರಿಹಾರವನ್ನು ಮುಂದಿನ ಎಂಟು ವಾರಗಳ ಒಳಗೆ ಪಾವತಿಸುವಂತೆ ದೆಹಲಿ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...