ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದ ಯುವಕನಿಗೆ ದೆಹಲಿ ಸಚಿವನಿಂದ ಕಪಾಳ ಮೋಕ್ಷ

Date:

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ಘಟನೆಯು ಇದೀಗ ಆಡಳಿತಾರೂಢ ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವಿನ ತೀವ್ರ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದೆ. ಭ್ರಷ್ಟಾಚಾರವನ್ನು ಪ್ರಶ್ನಿಸಿದ ಯುವಕನ ಮೇಲೆ ಸಚಿವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಎಎಪಿ, ಈ ಘಟನೆಯನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡು ಬಿಜೆಪಿ ಸರ್ಕಾರದ ‘ಅಧಿಕಾರದ ದರ್ಪ’ವನ್ನು ತೀವ್ರವಾಗಿ ಗುರಿಯಾಗಿಸಿದೆ.

- Advertisement -

​ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಸಚಿವರು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಎಎಪಿ ನಾಯಕರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಆರಂಭಿಸಿದ್ದಾರೆ. ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಚಿವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದ್ದು, ಕಳಪೆ ಕಾಮಗಾರಿ ನಡೆದಿರುವ ವಿವಾದಿತ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡುವುದಾಗಿ ಘೋಷಿಸುವ ಮೂಲಕ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

​ಹಲ್ಲೆಗೊಳಗಾದ ಯುವಕ ಸ್ಥಳೀಯ ಎಎಪಿ ಶಾಸಕ ಜರ್ನೈಲ್ ಸಿಂಗ್ ಅವರ ಬೆಂಬಲಿಗನಾಗಿದ್ದು, ಕಳಪೆ ಕಾಮಗಾರಿಯನ್ನು ಪ್ರಶ್ನಿಸಿದ್ದಕ್ಕಾಗಿಯೇ ಆತನ ಮೇಲೆ ದರ್ಪ ತೋರಲಾಗಿದೆ ಎಂಬುದು ಎಎಪಿಯ ಪ್ರಮುಖ ಆರೋಪ. ಪೊಲೀಸರ ಸಮ್ಮುಖದಲ್ಲೇ ಈ ಘಟನೆ ನಡೆದಿದ್ದು, ಸಚಿವರ ಬೆಂಬಲಿಗರು ಯುವಕನಿಗೆ ಜೀವಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪಗಳು ಬಿಜೆಪಿ ಸರ್ಕಾರವನ್ನು ಮುಜುಗರಕ್ಕೀಡುಮಾಡಿವೆ. ಈ ದಬ್ಬಾಳಿಕೆಯ ಕುರಿತು ಈಗಾಗಲೇ ಎಫ್‌ಐಆರ್ ಕೂಡ ದಾಖಲಾಗಿದೆ ಎಂದು ಯುವಕ ತಿಳಿಸಿದ್ದಾನೆ.

​ ಸೌರಭ್ ಭಾರದ್ವಾಜ್ ಅವರು ಸಚಿವರ ನಡೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ‘ನಾಚಿಕೆಗೇಡು ಹಾಗೂ ಹೇಡಿತನದ ಕೃತ್ಯ’ ಎಂದು ಜರಿದಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಬಂದು ಸಾಮಾನ್ಯ ಯುವಕನ ಮೇಲೆ ಕೈಮಾಡುವ ಮೂಲಕ ಸಚಿವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಅವರು ಟೀಕಿಸಿದ್ದಾರೆ. ಇದರ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೂಡ, “ಇದುವೇನಾ ಯುವಜನತೆಯ ಜೊತೆಗಿನ ಸರ್ಕಾರದ ಸಂಪರ್ಕ ಅಭಿಯಾನ?” ಎಂದು ಲೇವಡಿ ಮಾಡಿದೆ.

​ತಮ್ಮ ವಿರುದ್ಧದ ವಿಪಕ್ಷಗಳ ಟೀಕಾಪ್ರಹಾರ ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸಚಿವ ಪರ್ವೇಶ್ ವರ್ಮಾ, ಎಕ್ಸ್ ಮೂಲಕ ಸ್ಪಷ್ಟನೆ ನೀಡುವ ಯತ್ನ ಮಾಡಿದ್ದಾರೆ. ‘ಅಲ್ಲಿ ನಡೆದ ಘಟನೆ ನಡೆಯಬಾರದಾಗಿತ್ತು’ ಎಂದು ಪರೋಕ್ಷವಾಗಿ ತಪ್ಪೊಪ್ಪಿಕೊಂಡಿರುವ ಅವರು, ಎಎಪಿ ಶಾಸಕರು ಎಂಜಿನಿಯರ್‌ಗಳಿಗೆ ಕಮಿಷನ್ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಶಾಸಕರ ಬೆಂಬಲಿಗರು ತಮ್ಮ ಕುಟುಂಬವನ್ನು ನಿಂದಿಸಿದ್ದರಿಂದ ಸಹಜವಾಗಿ ಕೋಪಗೊಂಡು ಈ ರೀತಿ ವರ್ತಿಸಬೇಕಾಯಿತು ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

​ಯುವಕನ ಮೇಲಿನ ಹಲ್ಲೆಯನ್ನು ‘ಸಾಮಾನ್ಯರ ಪ್ರಶ್ನಿಸುವ ದನಿಯ ಮೇಲಿನ ದಬ್ಬಾಳಿಕೆ’ ಎಂದು ಬಿಂಬಿಸುವಲ್ಲಿ ವಿಪಕ್ಷಗಳು ಯಶಸ್ವಿಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಈ ಕಪಾಳಮೋಕ್ಷ ಸರ್ಕಾರಕ್ಕೆ ಮತ್ತಷ್ಟು ತಲೆನೋವಾಗಿ ಪರಿಣಮಿಸುವ ಸಾಧ್ಯತೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಕೆನಡಾದಲ್ಲಿ ಬೆಳ್ಳಿ ಪದಕ ಗೆದ್ದ ವಿಜಯಪುರದ ಸಚಿನ್ ತುಕಾರಾಮ್ ಸಾಲೊಂಕೆ

ಕೆನಡಾದ ವಿನ್ನಿಪೆಗ್‌ನಲ್ಲಿ ನಡೆದ ಪ್ರತಿಷ್ಠಿತ 2026 ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...