ಮಾನನಷ್ಟ ಪ್ರಕರಣದಲ್ಲಿ ಯೂಟ್ಯೂಬರ್ ಧ್ರುವ್‌ ರಾಠಿಗೆ ದೆಹಲಿ ಕೋರ್ಟ್ ಸಮನ್ಸ್

Date:

ಬಿಜೆಪಿ ನಾಯಕನೊಬ್ಬರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಧ್ರುವ್‌ ರಾಠಿ ಅವರಿಗೆ ದೆಹಲಿ ಕೋರ್ಟ್ ಸಮನ್ಸ್ ನೀಡಿದೆ.

- Advertisement -

ಮುಂಬೈ ಬಿಜೆಪಿ ಘಟಕದ ವಕ್ತಾರರಾದ ಸುರೇಶ್ ಕರ್ಮಿಶಿ ನಕುವಾ ಅವರು ರಾಠಿ ಅವರ ಯೂಟ್ಯೂಬ್‌ ಚಾನಲ್‌ನ ಒಂದು ವಿಡಿಯೋ ‘ಹಿಂಸಾತ್ಮಕ ಹಾಗೂ ನಿಂದನೀಯ’ವಾಗಿದೆ ಎಂದು ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜುಲೈ 19ರಂದು ಸಾಕೇತ್‌ ಕೋರ್ಟ್‌ನ ಜಿಲ್ಲಾ ನ್ಯಾಯಾಧೀಶರಾದ ಗುಂಜನ್‌ ಗುಪ್ತಾ ಅವರು ಸಮನ್ಸ್ ನೀಡಿದ್ದಾರೆ.

ಸುರೇಶ್ ಕರ್ಮಿಶಿ ನಕುವಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 6 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಯಲ್ಲಿ ಹಾಜರಾಗಬೇಕೆಂದು ಧ್ರುವ್‌ ರಾಠಿ ಅವರಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

ರಾಠಿ ಅವರು ತಮ್ಮ ವಿಡಿಯೋದಲ್ಲಿ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇವರ ವಿಡಿಯೋಗಳು ಹಿಂಸಾತ್ಮಕ ಹಾಗೂ ನಿಂದನೀಯ ಟ್ರೋಲ್‌ಗಳಾಗಿವೆ ಎಂದು ನಕುವಾ ಆರೋಪಿಸಿದ್ದಾರೆ.

ರಾಠಿ ಮಾಡಿರುವ ಆರೋಪದ ವಿಡಿಯೋದಲ್ಲಿ ಯಾವುದೇ ಸ್ಪಷ್ಟ ಉದ್ದೇಶವಿಲ್ಲ.ತಮ್ಮ ಘನತೆಯನ್ನು ಹಾಳು ಮಾಡುವ ಉದ್ದೇಶ ಮಾತ್ರ ಹೊಂದಿದೆ ಎಂದು ನಕುವಾ ತಿಳಿಸಿದ್ದಾರೆ.

ತಮ್ಮ ವಿರುದ್ಧ ಮಾಡಲಾದ ವಿಡಿಯೋ ಕುತಂತ್ರದಿಂದ ದೂಷಿಸಿ ರಚಿಸಲಾದ ವಿಡಿಯೋವಾಗಿದೆ. ತಮ್ಮ ಘನತೆಯನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವ ಸ್ಪಷ್ಟ ಉದ್ದೇಶವನ್ನು ಹೊಂದಿದೆ. ವಿಡಿಯೋ ಸೃಷ್ಟಿಸಿರುವವರು ಸಮಾಜದಲ್ಲಿ ತಾವು ಸಂಪಾದಿಸಿರುವ ಗೌರವವನ್ನು ಹಾಳು ಮಾಡುವುದಾಗಿದೆ. ಇದು ತಮ್ಮ ವೈಯುಕ್ತಿಕ ಹಾಗೂ ವೃತ್ತಿ ಬದುಕಿನ ಜೀವನದ ಮೇಲೆ ದೂರಗಾಮಿ ಹಾಗೂ ಗಂಭೀರ ಪರಿಣಾಮಗಳನ್ನು ಉಂಟುಮಾಡಲಿದೆ ಎಂದು ನಕುವಾ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...