ಎರಡು ವರ್ಷಗಳಿಂದ ಶೂನ್ಯ ನೇಮಕಾತಿ; NCERTಯಲ್ಲಿ 50%ಗೂ ಹೆಚ್ಚು ಹುದ್ದೆಗಳು ಖಾಲಿ

Date:

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (NCERT) ನೇಮಕಾತಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆಗಳು ಖಾಲಿಯಾಗಿವೆ. ಈ ಸಂಸ್ಥೆಯು ಸತತ ಎರಡು ವರ್ಷಗಳಿಂದ ಯಾವುದೇ ನೇಮಕಾತಿಯನ್ನೇ ನಡೆಸಿಲ್ಲ ಎಂದು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಮಾಹಿತಿ ನೀಡಿದೆ.

- Advertisement -

ಪಶ್ಚಿಮ ಬಂಗಾಳದ AITC ಸಂಸದ ಸಮಿರುಲ್ ಇಸ್ಲಾಂ ಅವರು ಕೇಳಿದ್ದ ಪ್ರಶ್ನೆಗೆ ಶಿಕ್ಷಣ ಸಚಿವಾಲಯವು ಉತ್ತರಿಸಿದೆ. ಎನ್‌ಸಿಇಆರ್‌ಟಿಯಲ್ಲಿ ಭಾರೀ ಪ್ರಮಾಣದ ಸಿಬ್ಬಂದಿಗಳ ಕೊರತೆ ಇದೆ ಎಂಬುದನ್ನು ಒಪ್ಪಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

NCERT ಮತ್ತು ಅದರ ಘಟಕ ಸಂಸ್ಥೆಗಳಲ್ಲಿ ಒಟ್ಟು 2,844 ಹುದ್ದೆಗಳನ್ನು ಮುಂಜೂರು ಮಾಡಲಾಗಿತ್ತು. ಆದರೆ, ಕೇವಲ 1,219 ಹುದ್ದೆಗಳು ಮಾತ್ರ ಭರ್ತಿಯಾಗಿವೆ. ಉಳಿದ 1,625 ಹುದ್ದೆಗಳು ಅಂದರೆ, 55% ಹುದ್ದೆಗಳು ನೇಮಕಾತಿಯಾಗದೆ ಖಾಲಿ ಉಳಿದಿವೆ.

NCERT ಅಡಿಯಲ್ಲಿ ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳು, ಭೋಪಾಲ್‌ನಲ್ಲಿರುವ ಪಂಡಿತ್ ಸುಂದರ್‌ಲಾಲ್ ಶರ್ಮಾ ಕೇಂದ್ರ ವೃತ್ತಿಪರ ಶಿಕ್ಷಣ ಸಂಸ್ಥೆ, ಕೇಂದ್ರೀಯ ಶಿಕ್ಷಕರ ಶಿಕ್ಷಣ ಸಂಸ್ಥೆ ಹಾಗೂ ಕೇಂದ್ರೀಯ ಶೈಕ್ಷಣಿಕ ತಂತ್ರಜ್ಞಾನ ಸಂಸ್ಥೆ ಸೇರಿವೆ. ಈ ಎಲ್ಲ ಸಂಸ್ಥೆಗಳಲ್ಲಿ ಒಟ್ಟು 1,625 ಹುದ್ದೆಗಳು ಖಾಲಿ ಉಳಿದಿವೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

ಗಮನಾರ್ಹವಾಗಿ ಗ್ರೂಪ್ ಬಿ ಮತ್ತು ಸಿ ಹುದ್ದೆಗಳು ಹೆಚ್ಚಾಗಿ ಖಾಲಿ ಇವೆ. ಬೋಧಕ ಸಿಬ್ಬಂದಿಗಳ ಕೊರತೆಯೂ ಗಮನಾರ್ಹವಾಗಿದೆ. ಬೋಧಕೇತರ ಹುದ್ದೆಗಳಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ.

image 81

ಗ್ರೂಪ್ ಸಿ ಹುದ್ದೆಗಳು ಅತ್ಯಧಿಕ ಖಾಲಿ ಹುದ್ದೆಗಳಿವೆ. ಈ ವಿಭಾಗದಲ್ಲಿ ಪ್ರತಿ ನಾಲ್ಕು ಹುದ್ದೆಗಳಲ್ಲಿ ಸುಮಾರು ಮೂರು ಹುದ್ದೆಗಳು ಖಾಲಿ ಇವೆ. ಗ್ರೂಪ್ ಬಿ ಹುದ್ದೆಗಳು ಇದೇ ಮಾದರಿಯನ್ನು ತೋರಿಸುತ್ತವೆ. ಆದರೆ, ಗ್ರೂಪ್ ಎ ಹುದ್ದೆಗಳಲ್ಲಿ ಖಾಲಿ ಹುದ್ದೆಗಳಲ್ಲಿ ಸಂಖ್ಯೆ ಕೊಂಚ ಕಡಿಮೆ ಇದೆ.

2020–21 ಮತ್ತು 2021–22ರ ಅವಧಿಯಲ್ಲಿ NCERT ಯಾವುದೇ ನೇಮಕಾತಿಯನ್ನು ನಡೆಸಿಲ್ಲ ಎಂದು ಡೇಟಾ ತೋರಿಸುತ್ತದೆ. ಕಳೆದ ಐದು ವರ್ಷಗಳಲ್ಲಿ, NCERT ಅಡಿಯಲ್ಲಿ 229 ಬೋಧಕ ಸಿಬ್ಬಂದಿ ಮತ್ತು 216 ಬೋಧಕೇತರ ಸಿಬ್ಬಂದಿಯನ್ನು ನೇಮಿಸಿಕೊಂಡಿದೆ. 2022–23ರಲ್ಲಿ, ಕೇವಲ ಒಬ್ಬ ಬೋಧಕೇತರ ಸಿಬ್ಬಂದಿಯನ್ನು ಮಾತ್ರ ನೇಮಿಸಿಕೊಳ್ಳಲಾಗಿದೆ.

ಈ ಲೇಖನ ಓದಿದ್ದೀರಾ?: ದಾರುಣವಾಗಿದೆ ಬಾಲ ನ್ಯಾಯ ವ್ಯವಸ್ಥೆ; ನ್ಯಾಯಕ್ಕಾಗಿ ಕಾಯುತ್ತಿದ್ದಾರೆ 50,000 ಬಾಲಾಪರಾಧಿಗಳು

ದೈನಂದಿನ ಕೆಲಸವನ್ನು ನಿರ್ವಹಿಸಲು, NCERT ಗುತ್ತಿಗೆ ಆಧಾರದ ಸಿಬ್ಬಂದಿಗಳನ್ನು ಹೆಚ್ಚಾಗಿ ಅವಲಂಬಿಸಿದೆ. 2022–23ರಲ್ಲಿ, ಸಂಸ್ಥೆಯು 760 ಗುತ್ತಿಗೆ ನೌಕರರನ್ನು ಒಳಗೊಂಡಿತ್ತು. 2024–25ರಲ್ಲಿ ಗುತ್ತಿಗೆ ಸಿಬ್ಬಂದಿಗಳ ಸಂಖ್ಯೆ ಸುಮಾರು 655 ರಷ್ಟಿತ್ತು ಎಂದು ಸಚಿವಾಲಯದ ಮಾಹಿತಿ ವಿವರಿಸಿದೆ.

ಶಿಕ್ಷಣ ರಾಜ್ಯ ಸಚಿವ ಜಯಂತ್ ಚೌಧರಿ ಸಂಸತ್ತಿನಲ್ಲಿ ನೇಮಕಾತಿ ನಿರಂತರ ಪ್ರಕ್ರಿಯೆ ಎಂದು ಹೇಳಿದ್ದಾರೆ. ಸಂಬಂಧಿತ ನೇಮಕಾತಿ ನಿಯಮಗಳ ನಿಬಂಧನೆಗಳ ಪ್ರಕಾರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...