2ಬಿ ಮೀಸಲಾತಿ ರದ್ದು; ಕಾನೂನು ಹೋರಾಟಕ್ಕೆ ಸಜ್ಜಾದ ಕರ್ನಾಟಕದ ಮುಸ್ಲಿಂ ಮುಖಂಡರು

Date:

  • ಮುಸ್ಲಿಮರು ಮತ್ತು ಲಿಂಗಾಯತ-ಒಕ್ಕಲಿಗ ಸಮುದಾಯದ ಮಧ್ಯೆ ವೈಷಮ್ಯ ಹುಟ್ಟಿಸಲು ಬಿಜೆಪಿ ಯತ್ನ
  • ಬೆಂಗಳೂರಿನಲ್ಲಿ ನಡೆದ ಮುಸ್ಲಿಂ ಮುಖಂಡರ ಸಭೆಯಲ್ಲಿ ತೀರ್ಮಾನ

ಹಿಂದುಳಿದ ವರ್ಗದಲ್ಲಿ ಮುಸ್ಲಿಮರಿಗೆ ಸಂವಿಧಾನಬದ್ಧವಾಗಿ ನೀಡಿರುವ ಶೇಕಡಾ 4ರ ಮೀಸಲಾತಿಯನ್ನು ಏಕಾಏಕಿ ರದ್ದು ಮಾಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಮುಸ್ಲಿಂ ದ್ವೇಷವನ್ನು ಬಹಿರಂಗಪಡಿಸಿದ್ದಾರೆ. ರಾಜ್ಯ ಸರ್ಕಾರ ಈ ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕದ ನಾನಾ ಮುಸ್ಲಿಂ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ.

ಕರ್ನಾಟಕ ಮುಸ್ಲಿಂ ಯೂನಿಟಿ ಹೆಸರಿನಲ್ಲಿ ಬೆಂಗಳೂರಿನಲ್ಲಿ ಇಂದು ಸಂಜೆ ಸಭೆ ನಡೆಸಿದ ಮುಖಂಡರು, ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ ಕಳೆದ 60 ವರ್ಷಗಳಲ್ಲಿ ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ. ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ ಶೇಕಡಾ 4 ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ. ಇದನ್ನು ಏಕಾಏಕಿ ರದ್ದು ಪಡಿಸಿರುವುದು ಸಂವಿಧಾನವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಹಿರಿಯ ಪತ್ರಕರ್ತ, ಕರ್ನಾಟಕ ಮುಸ್ಲಿಂ ಯೂನಿಟಿಯ ಸಲಹೆಗಾರ ಬಿ ಎಂ ಹನೀಫ್, ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಮುಸ್ಲಿಮರು ಮತ್ತು ಲಿಂಗಾಯತ-ಒಕ್ಕಲಿಗ ಸಮುದಾಯದ ಮಧ್ಯೆ ವೈಷಮ್ಯ ಹುಟ್ಟಿಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ. ಈ ಮೂಲಕ ರಾಜಕೀಯ ದುರ್ಲಾಭ ಪಡೆಯಲು ಮುಖ್ಯಮಂತ್ರಿ ಬೊಮ್ಮಾಯಿ ಸಂಚು ಹೂಡಿದ್ದಾರೆ. ಈ ಸಂಚಿಗೆ ಮುಸ್ಲಿಮರು ಬಲಿಯಾಗಬಾರದು. ಸಂಯಮದಿಂದ ವರ್ತಿಸಬೇಕು. ಯಾವುದೇ ಬೀದಿ ಹೋರಾಟಕ್ಕೆ ಇಳಿಯದೆ ಈ ಕ್ರಮದ ವಿರುದ್ಧ ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಬೇಕು. ಕರ್ನಾಟಕ ಮುಸ್ಲಿಂ ಯೂನಿಟಿ ಕಾನೂನು ತಜ್ಞರ ಜೊತೆಗೆ ಈಗಾಗಲೆ ಸಮಾಲೋಚನೆ ನಡೆಸುತ್ತಿದ್ದು ಕಾನೂನು ಹೋರಾಟವನ್ನು ಕೈಗೆತ್ತಿಕೊಳ್ಳಲಿದೆ” ಎಂದು ತಿಳಿಸಿದ್ದಾರೆ.

“ಜಯಪ್ರಕಾಶ್ ಹೆಗ್ಡೆ ನೇತೃತ್ವದ ರಾಜ್ಯ ಹಿಂದುಳಿದ ವರ್ಗಗಳ ಶಿಫಾರಸ್ಸಿನ ಅನ್ವಯ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಅವರನ್ನು ಮುಂದುವರಿದ ವರ್ಗ ಎಂದು ಪರಿಗಣಿಸಿ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (EWS) ಸೇರಿಸಿ ಮೀಸಲಾತಿ ಕೊಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ. ಜಯಪ್ರಾಶ್‌ ಹೆಗ್ಡೆ ಆಯೋಗವು ಈ ಕುರಿತು ಯಾವ ಸಮೀಕ್ಷೆಯನ್ನೂ ಮಾಡದೆ ಹೇಗೆ ನಿರ್ಧಾರ ಕೈಗೊಂಡಿದೆ? ಜಯಪ್ರಕಾಶ್‌ ಹೆಗ್ಡೆ ಆಯೋಗವು ರಹಸ್ಯ ಸಮೀಕ್ಷೆ ಏನಾದರೂ ಮಾಡಿದೆಯೆ? ಹಾಗಿದ್ದರೆ ಆ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಕರ್ನಾಟಕ ಮುಸ್ಲಿಂ ಯೂನಿಟಿಯು ಒತ್ತಾಯಿಸಿದೆ” ಎಂದು ತಿಳಿಸಿದ್ದಾರೆ.

ಮುಸ್ಲಿಮರ ಮೀಸಲಾತಿಯನ್ನು ಸಂವಿಧಾನಬದ್ಧವಾಗಿ ರಕ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗುವುದು. ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ಸಲಹೆಯನ್ನೂ ಪಡೆದು ಮುಂದುವರಿಯಲಾಗುವುದು. ಸಮುದಾಯ ಯಾವುದೇ ಭಾವಾವೇಶಕ್ಕೆ ಒಳಗಾಗದೆ ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಲು ಯತ್ನಿಸಬೇಕು ಎಂದು ಮುಸ್ಲಿಂ ಯೂನಿಟಿ ಮನವಿ ಮಾಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆ್ಯಪ್‌ನಲ್ಲಿ ಎರಡು ನಂಬರ್ ಅಕೌಂಟ್ ಬಳಸುವ ಆಯ್ಕೆ ಪರಿಚಯಿಸಿದ ವಾಟ್ಸಾಪ್

ನಂಬರ್‌ ಒನ್‌ ಜನಪ್ರಿಯ ಮಾಧ್ಯಮ ವಾಟ್ಸಾಪ್ ಎರಡು ಅಕೌಂಟ್ ಬಳಸುವ ಆಯ್ಕೆಯನ್ನು...

ಪೊಲೀಸರು ದಲಿತರ ಹಿತಾಸಕ್ತಿಗೆ ವಿರುದ್ಧವಿದ್ದಾರೆ: ಮಾಜಿ ಐಎಎಸ್‌ ಅಧಿಕಾರಿ ಆರೋಪ

ತಿರುನಲ್ವೇಲಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ)...

ಜಮ್ಮು-ಕಾಶ್ಮೀರ | ಕಂದಕಕ್ಕೆ ಉರುಳಿದ ಬಸ್‌; 36 ಮಂದಿ ದುರ್ಮರಣ

ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು...

ಮ್ಯಾನುಯಲ್ ಸ್ಕ್ಯಾವೆಂಜಿಂಗ್ | ಕೊಳಚೆ ಸ್ವಚ್ಛಗೊಳಿಸಲು ಗುಂಡಿಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಸಾವು

ಕೈಯಲ್ಲಿ ಮಲ ಬಾಚುವಿಕೆ, ಮಲದ ಗುಂಡಿಗಳಿಗೆ ಪೌರ ಕಾರ್ಮಿಕರನ್ನು ಇಳಿಸುವುದನ್ನು ಕಾನೂನಾತ್ಮಕವಾಗಿ...