ಉದ್ರೇಕಕಾರಿ ಭಾಷಣ ಆರೋಪ: ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಬಂಧನ

Date:

ಉದ್ರೇಕಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರ ಮತ್ತು ಗುಜರಾತ್ ಪೊಲೀಸರು ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಅವರನ್ನು ಮುಂಬೈನಲ್ಲಿ ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಮುಫ್ತಿ ಸಲ್ಮಾನ್ ಅವರನ್ನು ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ಅವರನ್ನು ಬಂಧಿಸಿಡಲಾಗಿತ್ತು. ಈ ಮಾಹಿತಿ ಅರಿತ ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನೂರಾರು ಬೆಂಬಲಿಗರು ಠಾಣೆಯ ಹೊರಗೆ ಜಮಾಯಿಸಿದ್ದರು.

ಈ ವೇಳೆ ಮೌಲ್ವಿಗಳು ಪೊಲೀಸ್ ಠಾಣೆಯ ಒಳಗಿನಿಂದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಪ್ರತಿಭಟನೆ ಮಾಡದಂತೆ ಕೇಳಿಕೊಂಡರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನೇನೂ ಕ್ರಿಮಿನಲ್ ಅಲ್ಲ. ಅಥವಾ ಅಪರಾಧ ಎಸಗಿದ್ದಕ್ಕಾಗಿ ನನ್ನನ್ನು ಇಲ್ಲಿಗೆ ಕರೆತರಲಾಗಿಲ್ಲ. ಅವರು ಅಗತ್ಯವಿರುವ ತನಿಖೆಯನ್ನು ಮಾಡುತ್ತಿದ್ದಾರೆ ಮತ್ತು ನಾನು ಸಹ ಅವರಿಗೆ ಸಹಕರಿಸುತ್ತಿದ್ದೇನೆ. ನಾನು ತಪ್ಪು ಮಾಡಿದ್ದರೆ ಬಂಧಿಸಲಿ. ಯಾರೂ ಕೂಡ ಪ್ರಚೋದನೆಗೊಳಗಾಗಡಬೇಡಿ. ಶಾಂತಿ ಕಾಪಾಡಿ” ಎಂದು ಮುಫ್ತಿ ಸಲ್ಮಾನ್ ಅಝ್ಹರಿ ಹೇಳಿದ್ದಾರೆ.

ಏನಿದು ಪ್ರಕರಣ?

ಕೆಲ ದಿನಗಳ ಹಿಂದೆ ಗುಜರಾತ್ ನ ಜುನಾಗಢದಲ್ಲಿ ದ್ವೇಷಭಾಷಣ ಮಾಡಿದ್ದರು ಎಂಬ ಆರೋಪ ಮುಫ್ತಿ ಸಲ್ಮಾನ್ ಅಝರಿ ಅವರ ಮೇಲೆ ಹೊರಿಸಲಾಗಿದೆ.

ಇದನ್ನು ಓದಿದ್ದೀರಾ? ಬೃಹತ್‌ ಸಾಲದ ಹೊರೆ; ಖಾಸಗಿ ಕಾರ್ಯಕ್ರಮಕ್ಕೂ ಸರ್ಕಾರಿ ಹಣ ಬಳಸಿದ ಅಸ್ಸಾಂ ಸಿಎಂ

ಅಝರಿ ಮತ್ತು ಇತರ ಇಬ್ಬರು ಧಾರ್ಮಿಕ ಮುಖಂಡರ ವಿರುದ್ಧ ಎಫ್‌ಐಆ‌ರ್ ದಾಖಲಿಸಲಾಗಿದೆ. ಜುನಾಗಢ ಬಿ. ಡಿವಿಷನ್ ಠಾಣೆಯ ಬಳಿ ಅಝರಿ ಅವರು ಜನವರಿ 31ರಂದು ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎನ್ನಲಾಗಿದೆ. ಈ ಭಾಷಣದ ವಿಡಿಯೊ ವೈರಲ್ ಆದ ಬಳಿಕ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಸ್ಥಳೀಯ ಸಂಘಟಕ ಮುಹಮ್ಮದ್ ಯೂಸುಫ್ ಮಲೀಕ್ ಮತ್ತು ಅಝೀಮ್ ಹಬೀಬ್ ವಡೇದರ ವಿರುದ್ಧವೂ ಐಪಿಸಿ ಸೆಕ್ಷನ್ 153ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಳ್ಳಿನ ಕಾರ್ಖಾನೆ ಪಕ್ಷ ಬಿಜೆಪಿಗೆ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸುತ್ತೇವೆ: ಸಿ ಎಂ ಸಿದ್ದರಾಮಯ್ಯ

ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ...

ಜುಲೈ 1ರಿಂದ ಜಾರಿಗೆ ಬರಲಿದೆ ಹೊಸ ಅಪರಾಧ ಕಾನೂನು: ಅಧಿಸೂಚನೆ ಪ್ರಕಟಿಸಿದ ಕೇಂದ್ರ ಸರ್ಕಾರ

ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸುವ ಉದ್ದೇಶಕ್ಕೆ ಹೊಸದಾಗಿ ಜಾರಿಗೆ...

ಪ್ರಶ್ನೆಪತ್ರಿಕೆ ಸೋರಿಕೆ: ಅಭ್ಯರ್ಥಿಗಳ ಪ್ರತಿಭಟನೆಗೆ ಮಣಿದು ಪೊಲೀಸ್ ಪರೀಕ್ಷೆ ಅಮಾನ್ಯಗೊಳಿಸಿದ ಯೋಗಿ ಸರ್ಕಾರ

ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ಅಭ್ಯರ್ಥಿಗಳ...

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು : ಡಿ ಎನ್‌ ಗುರುಪ್ರಸಾದ್

"ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ತಮ್ಮ ತಮ್ಮ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು....