ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದ ಕರ್ನಾಟಕ ಪೊಲೀಸರ ಬಿಡುಗಡೆಗೆ ಕೇರಳ ಪೊಲೀಸರ ತೀರ್ಮಾನ!

Date:

  • ಕೇರಳದ ಕಳಮಶ್ಶೇರಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಈ ದಿನ.ಕಾಮ್‌ಗೆ ಲಭ್ಯ
  • ತನಿಖಾ ತಂಡ ಕೋರಿದರೆ ಹಾಜರಾಗುವಂತೆ ತಪ್ಪಿತಸ್ಥ ನಾಲ್ವರು ಪೊಲೀಸ್‌ ಸಿಬ್ಬಂದಿಗಳಿಗೆ ಸೂಚನೆ

ಪ್ರಕರಣವೊಂದರ ತನಿಖೆಗೆ ಹೋಗಿದ್ದ ವೇಳೆ ಆರೋಪಿಗಳಿಂದ ಸ್ವೀಕರಿಸಿದ್ದ ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದಿದ್ದ ಕರ್ನಾಟಕ ಪೊಲೀಸರನ್ನು ಬಿಡುಗಡೆ ಮಾಡಲು ಕೇರಳದ ಪೊಲೀಸರು ತೀರ್ಮಾನಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇರಳದ ಮಲಯಾಳಂ ಸುದ್ದಿವಾಹಿನಿಗಳು, ಸಿಆರ್‌ಪಿಸಿ 41ರ ಅಡಿಯಲ್ಲಿ ನೋಟಿಸ್‌ ನೀಡಿದ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು’ ಎಂದು ವರದಿ ಮಾಡಿದೆ.

ಆರೋಪಿಗಳಿಂದ ಹಣ ವಸೂಲಿ ಮಾಡಿದ್ದ ದೂರಿನ ಮೇರೆಗೆ ಬೆಂಗಳೂರಿನ ವೈಟ್‌ಫೀಲ್ಡ್‌ನ ಸೆನ್ ಪೊಲೀಸ್ ಠಾಣೆಯ ಎಸ್ ಐ ಹಾಗೂ ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರನ್ನು ಬಂಧಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಲ್ಲದೇ, ಕರ್ತವ್ಯದ ವೇಳೆಯಲ್ಲಿರುವಾಗಲೇ ತಪ್ಪು ಮಾಡಿರುವ ಹಿನ್ನೆಲೆಯಲ್ಲಿ ಬಂಧನವಿಲ್ಲದೆ ಬಿಡುಗಡೆ ಮಾಡಬೇಕೆಂಬುದು ಕಾನೂನು ಸಲಹೆ ಎಂಬುದನ್ನು ಗಮನಿಸಿರುವ ಕೊಚ್ಚಿ ನಗರ ಪೊಲೀಸ್ ಕಮಿಷನರೇಟ್‌ನ ಅಧಿಕಾರಿಗಳು, ತನಿಖಾ ತಂಡ ಕೋರಿದರೆ ಕಸ್ಟಡಿಯಲ್ಲಿದ್ದ ನಾಲ್ವರೂ ಪೊಲೀಸ್ ಅಧಿಕಾರಿಗಳು ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಆಗಸ್ಟ್ 16ರಂದು ಕಳಮಶ್ಶೇರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆಯೂ ಸೂಚನೆ ನೀಡಲಾಗಿದೆ. ಲಂಚವಾಗಿ ಆರೋಪಿಗಳಿಂದ ವಸೂಲಿ ಮಾಡಿದ್ದ 3,95,000 ಹಣವನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ನ ನಾಲ್ವರು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕಳಮಶ್ಶೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರತಿ ಈ ದಿನ.ಕಾಮ್‌ಗೆ ಲಭ್ಯವಾಗಿದೆ.

ಎಫ್‌ಐಆರ್‌ನಲ್ಲಿ ಶಿವಪ್ರಕಾಶ್, ವಿಜಯ ಕುಮಾರ್, ಸಂದೇಶ್ ಮತ್ತು ಶಿವಣ್ಣ ಎಂಬವರ ಮೇಲೆ ದೂರು ದಾಖಲಾಗಿದೆ. ಇವರ ವಿರುದ್ಧ ಹಣಕಾಸು ವಂಚನೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇವರು ಪ್ರಯಾಣಿಸುತ್ತಿದ್ದ ವಾಹನದಲ್ಲಿ 3,95,000 ಹಣವು ಕೇರಳ ಪೊಲೀಸರು ತಪಾಸಣೆ ನಡೆಸಿದ್ದ ಸಂದರ್ಭದಲ್ಲಿ ದೊರಕಿತ್ತು.

ಘಟನೆ ಏನು?

ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ಇನ್‌ಸ್ಪೆಕ್ಟರ್ ಸೇರಿ ನಾಲ್ಕು ಮಂದಿ ಕರ್ನಾಟಕದ ಪೊಲೀಸ್ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಸುದ್ದಿ ಓದಿದ್ದೀರಾ? ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ಬಂಧನ!

ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್ 1ರಂದು ಕೊಚ್ಚಿಗೆ ತೆರಳಿದ್ದರು. ಅಲ್ಲಿ ಅವರು ಇಬ್ಬರು ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ, ಅಲ್ಲಿನ ಪೊಲೀಸರಿಗೆ ಆರೋಪಿಗಳ ಕುಟುಂಬಸ್ಥರು ದೂರು ನೀಡಿದ್ದರು.

ಈ ದೂರಿನನ್ವಯ ಕೊಚ್ಚಿಯ ಕಳಮಶ್ಶೇರಿ ಪೊಲೀಸರು, ಬೆಂಗಳೂರಿನ ವೈಟ್‌ಫೀಲ್ಡ್‌ನ ಸೆನ್ ಪೊಲೀಸ್ ಠಾಣೆಯ ಎಸ್ ಐ ಹಾಗೂ ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...