ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

Date:

Advertisements

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಘೋಷಿಸಿದ್ದರು. ಇದು ಘೋಷಣೆಯಾದ ಕೆಲ ಸಮಯದಲ್ಲೇ ಮಲಯಾಳಂ ನಟಿ ಲೀನಾ ತಮ್ಮ ಮದುವೆಯ ಗುಟ್ಟನ್ನು ಸೋಷಿಯಲ್ ಮೀಡಿಯಾದ ಮೂಲಕ ಬಹಿರಂಗಪಡಿಸಿದ್ದು, ‘ಗಗನಯಾತ್ರಿ ಗುಂಪಿನ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ನನ್ನ ಪತಿ’ ಎಂದು ತಿಳಿಸಿದ್ದಾರೆ.

gagagnayan

ನಟಿ ಲೀನಾ ಫೆಬ್ರವರಿ 27ರಂದು ಇನ್ಸ್ಟಾಗ್ರಾಮ್‌ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. “ನಮ್ಮ ವಿವಾಹ ಜನವರಿ 17, 2024ರಂದು ನಡೆದಿದೆ. ಜನವರಿ ತಿಂಗಳಿನಲ್ಲಿಯೇ ಮದುವೆ ನಡೆದಿದ್ದರೂ ಗೌಪ್ಯತೆಯ ಕಾರಣದಿಂದ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಈ ಮಹತ್ವದ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಕಾಯುತ್ತಿದ್ದೆ” ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

View this post on Instagram

 

A post shared by Lenaa ലെന (@lenaasmagazine)

ಪತಿ ಪ್ರಶಾಂತ್ ನಾಯರ್ ಅವರೊಂದಿಗಿನ ವಿಡಿಯೋವನ್ನು ಹಂಚಿಕೊಂಡಿರುವ ಲೀನಾ, “ಪ್ರಧಾನಿಗಳು ಭಾರತೀಯ ವಾಯುಪಡೆಯ ಫೈಟರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಅವರನ್ನು ಮೊದಲ ಭಾರತೀಯ ಗಗನಯಾತ್ರಿ ಎಂದು ಘೋಷಿಸಿದ್ದಾರೆ. ಇದು ಹೆಮ್ಮೆಯ ವಿಷಯವಾಗಿದೆ. ದೇಶ, ಕೇರಳ ರಾಜ್ಯಕ್ಕೆ ಮತ್ತು ವೈಯಕ್ತಿಕವಾಗಿ ನನಗೆ” ಎಂದು ಬರೆದುಕೊಂಡಿದ್ದಾರೆ.

Advertisements

ಸ್ನೇಹಮ್, ಬಿಗ್ ಬಿ‌, ಟ್ರಾಫಿಕ್ ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿರುವ ಲೀನಾ, ತಮ್ಮ ಪತಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಮತ್ತು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರೊಂದಿಗೆ ಪೋಸ್ ನೀಡುತ್ತಿರುವ ಫೋಟೋವನ್ನು ಕೂಡ ಹಂಚಿಕೊಂಡಿದ್ದಾರೆ.

ನಟಿ ಲೀನಾ ಮಲಯಾಳಂ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಚಿತ್ರಗಳಲ್ಲೂ ನಟಿಸಿದ್ದಾರೆ. ಮಲಯಾಳಂನಲ್ಲಿ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಗಗನ್‌ಯಾನ್ ಮಿಷನ್‌ಗೆ ಆಯ್ಕೆಯಾದ ನಾಲ್ವರು ಯಾರು?

ಪ್ರಧಾನಿ ಮೋದಿಯವರು ಘೋಷಿಸಿದವರಲ್ಲಿ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ಶುಭಾಂಶು ಶುಕ್ಲಾ ಸೇರಿದ್ದಾರೆ. ಈ ನಾಲ್ವರು ಬಾಹ್ಯಾಕಾಶಕ್ಕೆ ಭಾರತದ ಮೊದಲ ಸಿಬ್ಬಂದಿ ಮಿಷನ್‌ನಲ್ಲಿ ಗಗನಯಾತ್ರಿಗಳಾಗಿ ಆಯ್ಕೆಯಾಗಿದ್ದಾರೆ.

ಸರಿಸುಮಾರು 3,000 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿರುವ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಅವರಿಗೆ ಏರ್ ಫೋರ್ಸ್ ಅಕಾಡೆಮಿಯಲ್ಲಿ ಪ್ರತಿಷ್ಠಿತ ಸ್ವೋರ್ಡ್ ಆಫ್ ಹಾನರ್ ಕೂಡ ನೀಡಲಾಯಿತು. ಅವರು ಬಾಹ್ಯಾಕಾಶ ಹಾರಾಟದ ಕಾರ್ಯಾಚರಣೆಗಾಗಿ ರಷ್ಯಾದಲ್ಲಿ ತರಬೇತಿ ಪಡೆದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ...

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

Download Eedina App Android / iOS

X