ಪಿಐಬಿ ಮೂಲಕ ಸರ್ಕಾರಿ ವಿರೋಧಿ ‘ನಕಲಿ’ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ

Date:

Advertisements
  • ನಕಲಿ ಸುದ್ದಿ ಕಡಿವಾಣದ ಹೊಣೆ ಹೊತ್ತ ಪಿಐಬಿ
  • 2021ರ ಐಟಿ ನಿಯಮಗಳಿಗೆ ಇದೀಗ ತಿದ್ದುಪಡಿ

ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ‘ನಕಲಿ ಸುದ್ದಿ’, ಲೇಖನಗಳನ್ನು ಪ್ರಕಟಿಸುವುದಕ್ಕೆ ತಡೆ ಒಡ್ಡಲು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮುಂದಾಗಿದೆ.

ಸಚಿವಾಲಯದಡಿಯಲ್ಲಿರುವ ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋದ ಅಥವಾ ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು ನಕಲಿ ಸುದ್ದಿ ಎಂದು ಖಚಿತಪಡಿಸಿದರೆ, ಆರಂಭದಲ್ಲಿ ಅಂತಹ ಪೋಸ್ಟ್‌ಗಳಿಗೆ ಎಚ್ಚರಿಕೆ ನೀಡಲಾಗುತ್ತದೆ.

ಬಳಿಕ ಸುದ್ದಿಗಳನ್ನು ಫೇಸ್‌ಬುಕ್‌, ಟ್ವಟರ್‌, ಇನ್‌ಸ್ಟಾಗ್ರಾಮ್‌ ಸೇರಿದಂತೆ ಆಯಾ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲು ಪಿಐಬಿ ಮೂಲಕ ಸರ್ಕಾರಿ ವಿರೋಧಿ ಸುದ್ದಿಗಳಿಗೆ ಕಡಿವಾಣಕ್ಕೆ ಸಿದ್ಧತೆ ನಿರ್ದೇಶನ ನೀಡುತ್ತದೆ.  ಆ ಮೂಲಕ ಸರ್ಕಾರದ ವಿರುದ್ಧ ನಕಲಿ ಸುದ್ದಿಗಳು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ.

Advertisements

ಪಿಐಬಿ ಬಳಸಿಕೊಂಡು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿಸಂಹಿತೆ) 2021ರ ಐಟಿ ನಿಯಮಗಳಿಗೆ  ತಿದ್ದುಪಡಿ ಮಾಡಿರುವ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.  

ಈ ಸುದ್ದಿ ಓದಿದ್ದೀರಾ?: ಬದಲಾಯ್ತು ಟ್ವಿಟರ್‌ ಲೋಗೋ; ಮಸ್ಕ್‌ ಮಸ್ತಿಗೆ ಹಕ್ಕಿ ಬದಲಿಗೆ ನಾಯಿ ಬಂತು

ಕೇಂದ್ರ ಸರ್ಕಾರದ ಕುರಿತು ಪ್ರಸಾರವಾಗುವ ಸುದ್ದಿಗಳ ಕುರಿತು ಕಣ್ಣಿಡಲಿರುವ ಪಿಐಬಿ ಫ್ಯಾಕ್ಟ್ ಚೆಕ್ ವಿಭಾಗವು, ಸಂಬಂಧಿತ ಸರ್ಕಾರಿ ಇಲಾಖೆಗಳನ್ನು ಸಂಪರ್ಕಿಸಿ ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಲಿದೆ.  ಬಳಿಕ ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ತೆಗೆದುಕೊಳ್ಳಲಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೇಂದ್ರ ಸರ್ಕಾರದ ನೀತಿ-ನಿಯಮಗಳನ್ನು ಪ್ರಶ್ನಿಸುವ, ವಿರ್ಮಶಿಸುವ ಟೀಕಿಸುವ ಸ್ವಾತಂತ್ರ್ಯವನ್ನು ಈ ತಿದ್ದುಪಡಿಯ ಮೂಲಕ ಕಸಿದುಕೊಳ್ಳಲಾಗುತ್ತದೆ ಎಂಬ ಆರೋಪ ಕೇಳಿಬಂದಿದೆ.

ಆದರೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿನ ಪೋಸ್ಟ್‌ಗಳ ಸೆನ್ಸಾರ್‌ಶಿಪ್‌ಗೆ ಕಾರಣವಾಗುತ್ತದೆ ಎಂಬ ಕಳವಳವನ್ನು ಕೇಂದ್ರ ಸಚಿವ ಚಂದ್ರಶೇಖರ್ ತಳ್ಳಿಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X