ಐದು ವರ್ಷಗಳಲ್ಲಿ ಉನ್ನತ ಶಿಕ್ಷಣ ತೊರೆದ 19 ಸಾವಿರ ಎಸ್‌ಸಿ/ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳು

Date:

  • 4,444 ವಿದ್ಯಾರ್ಥಿಗಳು ಐಐಟಿ ಮತ್ತು 336 ವಿದ್ಯಾರ್ಥಿಗಳು  ಐಐಎಂ ತೊರೆದಿದ್ದಾರೆ
  • ಉನ್ನತ ಶಿಕ್ಷಣಕ್ಕೆ ಶುಲ್ಕ ಕಡಿತ, ವಿದ್ಯಾರ್ಥಿವೇತನ ಸೌಲಭ್ಯ ಒದಗಿಸಲಾಗಿದೆ ಎಂದ ಸಚಿವ

2018ರಿಂದ ಇಲ್ಲಿಯವರೆಗೂ 19 ಸಾವಿರಕ್ಕೂ ಅಧಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿದೆ.

ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಭಾಶ್‌ ಸರ್ಕಾರ್‌ ಅವರು ಈ ಕುರಿತು ರಾಜ್ಯ ಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. “ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸವನ್ನು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅರ್ಧಕ್ಕೆ ತೊರೆದಿದ್ದಾರೆ. ಕಳೆದ ಐದು ವರ್ಷದಲ್ಲಿ ವಿವಿಧ ಕೋರ್ಸ್‌ಗಳಲ್ಲಿ 19,256 ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

“ಐದು ವರ್ಷಗಳಲ್ಲಿ ಮೂರು ಕೇಂದ್ರಿಯ ವಿಶ್ವ ವಿದ್ಯಾಲಯಗಳಿಂದ 14,446 ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಅರ್ಧಕ್ಕೆ ತೊರೆದಿದ್ದಾರೆ. ಅದರಲ್ಲಿ 4,444 ವಿದ್ಯಾರ್ಥಿಗಳು ಐಐಟಿ ವಿದ್ಯಾಭ್ಯಾಸ ನಿಲ್ಲಿಸಿದ್ದರೆ, 336 ವಿದ್ಯಾರ್ಥಿಗಳು  ಐಐಎಂ ಶಿಕ್ಷಣ ತೊರೆದಿದ್ದಾರೆ. ಮತ್ತಿತ್ತರ ಕೋರ್ಸ್‌ಗಳಿಂದ ಒಟ್ಟು 19,256 ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಅರ್ಧಕ್ಕೆ ವಿದ್ಯಾಭ್ಯಾಸ ನಿಲ್ಲಿಸುವವರು ಒಂದಡೆಯಾದರೆ, ಒಂದು ಕೋರ್ಸ್‌ನಿಂದ ಮತ್ತೊಂದಕ್ಕೆ ವರ್ಗಾವಣೆಯಾಗಿರುವವರ ಸಂಖ್ಯೆಯೂ ಅಧಿಕವಾಗಿದೆ” ಎಂದು ಸಚಿವ ಸುಭಾಶ್‌ ಸರ್ಕಾರ್‌ ಹೇಳಿದ್ದಾರೆ.

“ಸರ್ಕಾರದಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನ, ವಿವಿಗಳ ಶುಲ್ಕ ಕಡಿತ, ಹೆಚ್ಚಿನ ಸಂಸ್ಥೆಗಳ ಸ್ಥಾಪನೆ, ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿವೇತನಕ್ಕೆ ಆದ್ಯತೆಯ ಪ್ರವೇಶದಂತಹ ವಿವಿಧ ಕ್ರಮಗಳನ್ನು ಕೈಗೊಂಡಿದೆ. ಬಡ ಆರ್ಥಿಕ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುತ್ತಿದೆ” ಎಂದು ಸಚಿವ ಸುಭಾಶ್‌ ಸರ್ಕಾರ್‌ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

ಮಿಚಾಂಗ್‌ ಚಂಡಮಾರುತವು ಮಂಗಳವಾರ ಆಂಧ್ರಪ್ರದೇಶದ ಕರಾವಳಿ ದಾಟುತ್ತಿದ್ದಂತೆ ದುರ್ಬಲತೆ ಕಂಡುಬಂದಿದೆ. 770...

ಮಿಚಾಂಗ್ ಚಂಡಮಾರುತ: ₹5,060 ಕೋಟಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂ ಕೆ...

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್; ರಾಜಸ್ಥಾನ ಬಂದ್‌ಗೆ ಕರೆ

ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ...

ತೆಲಂಗಾಣ: ಎಬಿವಿಪಿಯಿಂದ ಫೈರ್ ಬ್ರಾಂಡ್ ನಾಯಕನವರೆಗೆ; ರೇವಂತ್ ರೆಡ್ಡಿ ನಡೆದುಬಂದ ಹಾದಿ

ಮುಖ್ಯಮಂತ್ರಿ ಕೆಸಿಆರ್ ಸಭೆಗೆ ಅಡ್ಡಿಪಡಿಸಬಹುದು ಎನ್ನುವ ಕಾರಣಕ್ಕೆ 2018ರ ಡಿಸೆಂಬರ್ ನಾಲ್ಕರಂದು...