ರಾಮಮಂದಿರ ಉದ್ಘಾಟನೆಯ ದಿನ ಜೈ ಶ್ರೀರಾಮ್ ಪಠಿಸಲು ಮುಸ್ಲಿಮರಿಗೆ ಆರ್‌ಎಸ್‌ಎಸ್ ನಾಯಕ ಮನವಿ

Date:

Advertisements

ಜ. 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯುವ ಪ್ರಯುಕ್ತ ಮಸೀದಿಗಳು, ದರ್ಗಾಗಳು ಮತ್ತು ಮದರಸಾಗಳಲ್ಲಿ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಎಂಬ ಮಂತ್ರ ಪಠಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಸ್ಲಿಂ ರಾಷ್ಟ್ರೀಯ ಮಂಚ್ ಮುಖ್ಯ ಪೋಷಕ ಮತ್ತು ಆರ್‌ಎಸ್‌ಎಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಮುಸ್ಲಿಮರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ‘ರಾಮ ಮಂದಿರ್, ರಾಷ್ಟ್ರ ಮಂದಿರ್ – ಎ ಕಾಮನ್ ಹೆರಿಟೇಜ್’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಶೇ. 99ರಷ್ಟು ಮುಸ್ಲಿಮರು ಹಾಗೂ ಇತರ ಹಿಂದೂಯೇತರರು ದೇಶಕ್ಕೆ ಸೇರಿದವರು. ನಮ್ಮೆಲ್ಲರ ಪೂರ್ವಜರು ಸಹ ಒಂದೇ. ಅವರು ತಮ್ಮ ಧರ್ಮವನ್ನು ಬದಲಾಯಿಸಿದ್ದಾರೆ, ದೇಶವನಲ್ಲ ಎಂದಿದ್ದಾರೆ.

ದರ್ಗಾಗಳು, ಮಕ್ತಬ್​ಗಳು, ಮದರಸಾಗಳು ಮತ್ತು ಮಸೀದಿಗಳಲ್ಲಿ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಪಠಣ ಮಾಡಬೇಕು ಎಂಬುದಾಗಿ ಮುಸ್ಲಿಂ ರಾಷ್ಟ್ರೀಯ ಮಂಚ್ ಮನವಿ ಮಾಡಿದೆ. ಅದನ್ನೇ ಪುನರುಚ್ಚರಿಸುತ್ತೇನೆ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.

Advertisements

ಮನೆತನ, ಧಾರ್ಮಿಕ ನಂಬಿಕೆ ಇತ್ಯಾದಿ ವ್ಯತ್ಯಾಸಗಳ ಹೊರತಾಗಿಯೂ ದೇಶದ ಮುಸ್ಲಿಮರು ಹಾಗೂ ಇತರ ಹಿಂದೂಯೇತರರು ಭಾರತದ ಅವಿಭಾಜ್ಯ ಅಂಗವೇ ಆಗಿದ್ದಾರೆ ಎಂದಿದ್ದಾರೆ. ಜತೆಗೆ, ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಸಾಮೂಹಿಕ ಅಭಿವ್ಯಕ್ತಿಗೆ ಕರೆ ನೀಡಿದ್ದಾರೆ.

ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ಸಾಮೂಹಿಕ ಅಭಿವ್ಯಕ್ತಿಗೆ ಇದೊಂದು ಸದವಕಾಶವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಧರ್ಮ ಮತ್ತು ಇತರ ನಂಬಿಕೆಗಳನ್ನು ಆಚರಿಸುವ ಜನರು ಧಾರ್ಮಿಕ ಸ್ಥಳಗಳಲ್ಲಿ ಒಳಗೊಳ್ಳುವಿಕೆಯ ಉತ್ಸಾಹದೊಂದಿಗೆ ಪ್ರಾರ್ಥನೆ ಸಲ್ಲಿಸಬೇಕು ಎಂದು ಕುಮಾರ್ ಮನವಿ ಮಾಡಿದ್ದಾರೆ.

Basavaraju Megalkeri
+ posts

ಲೇಖಕ, ಪತ್ರಕರ್ತ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಸವರಾಜು ಮೇಗಲಕೇರಿ
ಬಸವರಾಜು ಮೇಗಲಕೇರಿ
ಲೇಖಕ, ಪತ್ರಕರ್ತ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X