ಕರ್ತವ್ಯಗಳ ಗುಚ್ಛ ಸನಾತನ ಧರ್ಮದಲ್ಲಿದ್ದರೂ ಜಾತೀಯತೆ, ಅಸ್ಪೃಶ್ಯತೆ ವೈಭವೀಕರಣ: ಮದ್ರಾಸ್ ಹೈಕೋರ್ಟ್

Date:

  • ಅರ್ಜಿಯೊಂದರ ವಿಚಾರಣೆ ವೇಳೆ ಸನಾತನ ಧರ್ಮದ ಬಗ್ಗೆ ಉಲ್ಲೇಖಿಸಿದ ನ್ಯಾಯಮೂರ್ತಿ ಎನ್ ಶೇಷಸಾಯಿ
  • ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್

ಸನಾತನ ಧರ್ಮ ಎಂಬುದು ಕರ್ತವ್ಯಗಳ ಗುಚ್ಛವಾಗಿದೆ. ಆದರೆ, ಜಾತೀಯತೆ, ಅಸ್ಪೃಶ್ಯತೆ ಎಂಬ ಅಂಶಗಳನ್ನಷ್ಟೇ ವೈಭವೀಕರಿಸಲಾಗುತ್ತಿದೆ ಎಂದು ಮದ್ರಾಸ್ ಹೈಕೋರ್ಟಿನ ನ್ಯಾಯಮೂರ್ತಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಮದ್ರಾಸ್ ಹೈಕೋರ್ಟಿನಲ್ಲಿ ಸನಾತನ ಧರ್ಮದ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಈ ವಿಚಾರ ಉಲ್ಲೇಖಿಸಿದ ನ್ಯಾಯಮೂರ್ತಿ ಎನ್ ಶೇಷಸಾಯಿ, ಸನಾತನ ಧರ್ಮ ಎಂಬುದು ಕರ್ತವ್ಯಗಳ ಗುಚ್ಛವಾಗಿದೆ. ಅದರಲ್ಲಿ ದೇಶದ ಕರ್ತವ್ಯ, ರಾಜನ ಕರ್ತವ್ಯ, ಪೋಷಕರ ಕರ್ತವ್ಯ, ಗುರುವಿನ ಕರ್ತವ್ಯ ಹೀಗೆ ಹಲವು ಅಂಶಗಳು ಸೇರಿವೆ. ಸನಾತನ ಧರ್ಮದಲ್ಲಿ ಜಾತೀಯತೆ, ಅಸ್ಪೃಶ್ಯತೆಗಳು ವೈಭವೀಕರಣವಾಗುತ್ತಿದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಹೀಗಾಗಿ, ಸನಾತನ ಧರ್ಮದ ವಿರೋಧವು ಈ ಎಲ್ಲ ಕರ್ತವ್ಯಗಳನ್ನು ನಾಶಪಡಿಸುತ್ತದೆ ಎಂದು ಅರ್ಥ ಎಂದು ತಿಳಿಸಿದೆ.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಅಣ್ಣಾದೊರೈ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ತಿರು ವಿ ಕಾ ಸರ್ಕಾರಿ ಕಲಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ಇತ್ತೀಚೆಗೆ ಸುತ್ತೋಲೆಯೊಂದನ್ನು ಹೊರಡಿಸಿ, ಸನಾತನ ಧರ್ಮದ ವಿರುದ್ಧದ ಅಂಶಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ತಿಳಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಶೇಷಸಾಯಿ ಅವರಿದ್ಧ ಪೀಠ, ಈ ರೀತಿಯ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸನಾತನ ಧರ್ಮವು ಜಾತಿಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತದೆ ಎಂಬುದೇ ಪ್ರಸ್ತುತ ಕಾಣಿಸಿಕೊಳ್ಳುತ್ತಿರುವ ಕಲ್ಪನೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಸಂವಿಧಾನದ 15ನೇ ಪರಿಚ್ಛೇದದ ಅಡಿಯಲ್ಲಿ ರದ್ದುಪಡಿಸಲಾದ ಅಸ್ಪೃಶ್ಯತೆಯನ್ನು ಸನಾತನ ಧರ್ಮದ ಒಳಗಡೆಯಾಗಲೀ, ಹೊರಗಡೆಯಾಗಲಿ ಅದನ್ನು ಆಚರಿಸಬಾರದು ಎಂಬುದನ್ನು ನ್ಯಾಯಾಲಯ ಒತ್ತಿ ಹೇಳುತ್ತದೆ ಎಂದು ಪೀಠ ಇದೇ ವೇಳೆ ಹೇಳಿದೆ.

ನ್ಯಾಯಮೂರ್ತಿ ಎನ್ ಶೇಷಸಾಯಿ

ಸಂವಿಧಾನದ 19(1)(ಎ) ಪರಿಚ್ಛೇದವು ವಾಕ್ ಸ್ವಾತಂತ್ರ್ಯಕ್ಕೆ ಮೂಲಭೂತ ಹಕ್ಕನ್ನು ನೀಡಿರುವುದು ನಿಜ. ಆದರೂ, ಮಾತನಾಡುವ ವಿಷಯಕ್ಕೆ ಮೌಲ್ಯ ಇರಬೇಕು ಎಂಬುದನ್ನೂ ಗಮನಿಸಬೇಕು. ವಾಕ್ ಸ್ವಾತಂತ್ರ್ಯವು ಸಂಪೂರ್ಣ ಮೂಲಭೂತ ಹಕ್ಕಲ್ಲ. ಧರ್ಮಕ್ಕೆ ಸಂಬಂಧಿಸಿದ ವಾಕ್ ಸ್ವಾತಂತ್ರ್ಯದ ವಿಚಾರದಲ್ಲಿ, ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ, ಯಾರಿಗೂ ನೋವಾಗದಂತೆ ನೋಡಿಕೊಳ್ಳುವುದು ಅವಶ್ಯಕ ಎಂದು ಪೀಠವು ಇದೇ ವೇಳೆ ತಿಳಿಸಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಮತ್ತು ಕೊರೋನಾಗೆ ಹೋಲಿಸಿದ್ದಲ್ಲದೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಇತ್ತೀಚೆಗೆ ಕರೆ ನೀಡಿದ್ದರು.

ಇದು ದೇಶಾದ್ಯಂತ ಬಲಪಂಥೀಯರಿಂದ ವ್ಯಾಪಕ ವಿರೋಧಕ್ಕೂ ಕಾರಣವಾಗಿತ್ತು. ಸ್ಟಾಲಿನ್ ಹೇಳಿಕೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಕೂಡ ಸನಾತನ ಧರ್ಮದ ವಿರುದ್ಧ ಮಾತನಾಡುವವರಿಗೆ ‘ಸೂಕ್ತ ತಿರುಗೇಟು’ ನೀಡುವಂತೆ ಸಂಪುಟ ಸಹೋದ್ಯೋಗಿಗಳಿಗೆ ಸೂಚನೆ ನೀಡಿದ್ದರು. ಈ ವಿವಾದ ಇನ್ನೂ ಹಸಿಯಾಗಿರುವುವಾಗಲೇ ಮದ್ರಾಸ್ ಹೈಕೋರ್ಟ್‌ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳೇ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು : ಡಿ ಎನ್‌ ಗುರುಪ್ರಸಾದ್

"ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ತಮ್ಮ ತಮ್ಮ ಶಿಕ್ಷಣ ನೀತಿಯನ್ನು ರೂಪಿಸಿಕೊಳ್ಳುವಂತಾಗಬೇಕು....

ಉತ್ತರ ಪ್ರದೇಶ | ಭೀಕರ ಅಪಘಾತ; ಕೆರೆಗೆ ಉರುಳಿದ ಟ್ರ್ಯಾಕ್ಟರ್ ಟ್ರ್ಯಾಲಿ: 8 ಮಕ್ಕಳು ಸೇರಿ 22 ಮಂದಿ ಮೃತ್ಯು

ಮಾಘ ಪೂರ್ಣಿಮೆಯ ಗಂಗಾ ಸ್ನಾನಕ್ಕೆಂದು ಭಕ್ತರನ್ನು ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್ ಟ್ರ್ಯಾಲಿ...

ಮಹಾರಾಷ್ಟ್ರದ ಮೊದಲ ಶಿವಸೇನಾ ಸಿಎಂ, ಮಾಜಿ ಲೋಕಸಭಾ ಸ್ಪೀಕರ್ ಮನೋಹರ್ ಜೋಶಿ ನಿಧನ

ಕಳೆದ ಎರಡು ದಿನಗಳ ಹಿಂದೆ ಹೃದಯಸ್ತಂಭನಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಾರಾಷ್ಟ್ರದ ಮೊದಲ...