ಆಧುನಿಕ ಭಾರತದ ಮೊದಲ ಮುಸ್ಲಿಂ ಶಿಕ್ಷಕಿ ಫಾತೀಮಾ ಶೇಖ್

Date:

Advertisements
ಸಾವಿತ್ರಿಬಾಯಿ ಶಾಲೆಗಳಲ್ಲಿ ಕಲಿಸುತ್ತಿದ್ದರೆ ಫಾತೀಮಾ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನು ತಿಳಿಸಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದರು. ಮುಸ್ಲಿಂ ಬಾಲಕಿಯರನ್ನು ಶಾಲೆಗೆ ಪ್ರೇರೇಪಿಸಿದ್ದಕ್ಕೆ ಮುಸ್ಲಿಂ ಗಂಡಸರಿಂದ ಕಷ್ಟಗಳನ್ನು ಎದುರಿಸಿದರು

ಕೆಳಜಾತಿಗಳಿಗೆ ಅಕ್ಷರ ಕಲಿಸುವುದು ಧರ್ಮವಿರೋಧಿ ಎಂದು ಮೇಲ್ಜಾತಿಗಳು ವ್ಯಾಪಾರಿ ಗೋವಿಂದರಾವ್ ಜತೆ ಜಗಳ ತೆಗೆದಿದ್ದಾರೆ. ಇದರಿಂದಾಗಿ ಮಗ ಜ್ಯೋತಿಬಾ ಸೊಸೆ ಸಾವಿತ್ರಿಬಾಯಿ ಅವರು ಅಕ್ಷರ ಕಲಿಸುವುದನ್ನು ನಿಲ್ಲಿಸದ್ದಕ್ಕೆ ಉಟ್ಟ ಬಟ್ಟೆಯಲ್ಲಿಯೇ ಮನೆಯಿಂದ ಹೊರಹಾಕುತ್ತಾರೆ. ಗೋವಿಂದರಾವ್ ತಂಗಿ ಸುಗುಣಬಾಯಿ ಪರ್ಷಿಯನ್ ಶಿಕ್ಷಕ ಮುನ್ಷಿ ಗಫರ್ ಖಾನ್ ಅವರ ಬಳಿ ವಿಷಯ ತಿಳಿಸುತ್ತಾರೆ. ಗಫರ್ ಖಾನ್ ಫುಲೆ ದಂಪತಿಗಳನ್ನು ಉಸ್ಮಾನ್ ಶೇಕ್ ಅವರ ಮನೆಗೆ ಕರೆದೊಯ್ಯುತ್ತಾರೆ. ನಡೆದ ಘಟನೆಯನ್ನು ವಿವರಿಸುತ್ತಾರೆ. ಉಸ್ಮಾನ್ ಶೇಕ್ ತನ್ನ ಮನೆಯ ಎರಡು ಕೋಣೆಗಳನ್ನು ಬಿಟ್ಟುಕೊಡುತ್ತಾರೆ. ಮನೆಯ ಒಳಗಿಂದ ಒಂದು ಹುಡುಗಿ ಬಂದು ಸಾವಿತ್ರಿಬಾಯಿಯನ್ನು ಪರಿಚಯ ಮಾಡಿಕೊಳ್ಳುತ್ತಾಳೆ. ಆ ಹುಡುಗಿಯೇ ಉಸ್ಮಾನ್ ಶೇಕ್ ಅವರ ತಂಗಿ ಫಾತೀಮಾ ಶೇಕ್.

ಉಸ್ಮಾನ್ ಶೇಕ್ ಅವರ ಮನೆಯಲ್ಲಿ ಫುಲೆ ದಂಪತಿಗಳಿಂದ (1848) ಶಾಲೆಯೊಂದು ಆರಂಭವಾಗುತ್ತದೆ. ಇದೇ ಶಾಲೆಯಲ್ಲಿ ಸಾವಿತ್ರಿಬಾಯಿ ಮತ್ತು ಫಾತೀಮಾ ಶಿಕ್ಷಕಿಯರಾಗುತ್ತಾರೆ. ಆದರೆ ಸಾವಿತ್ರಿಬಾಯಿ ಅವರನ್ನು ಜನವರಿ 3 ರಂದು ದೇಶವ್ಯಾಪಿ ನೆನೆದು ಫುಲೆ ದಂಪತಿಗಳ ಅಕ್ಷರಕ್ರಾಂತಿಯ ಭಾಗವಾಗಿದ್ದ ಫಾತೀಮಾ ಶೇಕ್ ಹುಟ್ಟಿದ ಜನವರಿ 9 ನ್ನು ಚಾರಿತ್ರಿಕವಾಗಿ ನೆನೆಯುವುದಿಲ್ಲ.

ಹಾಗೆ ನೋಡಿದರೆ, ಫುಲೆ ದಂಪತಿಗಳ ಜತೆ ಮುನ್ಷಿ ಗಫರ್ ಖಾನ್, ಸುಗುಣಬಾಯಿ, ಉಸ್ಮಾನ್ ಶೇಖ್ ಮತ್ತು ಫಾತೀಮಾ ಶೇಖ್ ಆಧುನಿಕ ಭಾರತದಲ್ಲಿ ದಮನಿತರಿಗೆ ಅಕ್ಷರದ ಬೆಳಕು ಬೀರಲು ಸಾಲುದೀಪದಂತೆ ಉರಿದವರು. ಹಾಗಾಗಿ ಈ ಕಾರ್ಯಾಚರಣೆಯ ಭಾಗವಾದ ಎಲ್ಲರನ್ನೂ ನೆನೆಯಬೇಕಿದೆ. ಈ ಶಿಕ್ಷಣ ಕ್ರಾಂತಿಗೆ ‘ದಲಿತ-ದಮನಿತ-ಮಹಿಳೆ-ಮುಸ್ಲಿಂ’ ಸಂಯುಕ್ತ ಅರಿವಿನ ಹೋರಾಟದ ಒಂದು ದೊಡ್ಡ ಮಾದರಿಯನ್ನು ಈ ಮೂಲಕ ತೋರಿಸಿದ್ದಾರೆ.

Advertisements

ಸೂಸಿ ತಾರು ಮತ್ತು ಲಲಿತ ಕೆ ಅವರು 1991ರಲ್ಲಿ ಸಂಪಾದಿಸಿದ ‘ವುಮನ್ ರೈಟಿಂಗ್ ಇನ್ ಇಂಡಿಯಾ’ ಮೊದಲ ಸಂಪುಟದಲ್ಲಿ ಸಾವಿತ್ರಿಬಾಯಿ 1956ರಲ್ಲಿ ಬರೆದ ಪತ್ರವೊಂದು ಪ್ರಕಟವಾಗುತ್ತದೆ. ಈ ಪತ್ರದಲ್ಲಿ ಫಾತೀಮಾ ಶೇಕ್ ಅವರ ಉಲ್ಲೇಖ ಗಮನ ಸೆಳೆಯುತ್ತದೆ. ನಂತರ ಫಾತೀಮಾಳ ಬಗ್ಗೆ ಕುತೂಹಲ ಮೂಡುತ್ತದೆ. 1831ರ ಜನವರಿ 9 ರಂದು ಫಾತೀಮಾ ಶೇಕ್ ಪುಣೆಯಲ್ಲಿ ಜನಿಸುತ್ತಾರೆ. ಅಣ್ಣ ಉಸ್ಮಾನ್ ಶೇಕ್ ಜತೆ ಫುಣೆಯ ಭಿಡೆವಾಡೆಯಲ್ಲಿ ಬೆಳೆಯುತ್ತಾಳೆ. ಉಸ್ಮಾನ್ ತಂಗಿಗೆ ಉರ್ದು ಶಿಕ್ಷಣ ಕೊಡಿಸುತ್ತಾರೆ. ಮುಸ್ಲಿಮರ ವಿರೋಧದ ನಡುವೆಯೂ ಫಾತಿಮಾಗೆ ಮರಾಠಿ ಶಿಕ್ಷಣ ಕೊಡಿಸುತ್ತಾರೆ. ಹಾಗಾಗಿ ಮರಾಠಿ ಕಲಿತ ಮೊದಲ ಮುಸ್ಲಿಂ ಮಹಿಳೆ.

WhatsApp Image 2024 01 09 at 10.37.14 AM

ಅಮೇರಿಕನ್ ಮಿಷನರಿ ಸಿಂಥಿಯಾ ಫರಾರ್ ನಡೆಸುತ್ತಿದ್ದ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಸಾವಿತ್ರಿಬಾಯಿ ಮತ್ತು ಫಾತೀಮಾ ತರಬೇತಿ ಪಡೆಯುತ್ತಾರೆ. ಸಾವಿತ್ರಿಬಾಯಿ ಶಾಲೆಗಳಲ್ಲಿ ಕಲಿಸುತ್ತಿದ್ದರೆ ಫಾತೀಮಾ ಮನೆ ಮನೆಗೆ ತೆರಳಿ ಶಿಕ್ಷಣದ ಮಹತ್ವವನ್ನು ತಿಳಿಸಿ ಮಕ್ಕಳನ್ನು ಶಾಲೆಗೆ ಕರೆತರುತ್ತಿದ್ದರು. ಮುಸ್ಲಿಂ ಬಾಲಕಿಯರನ್ನು ಶಾಲೆಗೆ ಪ್ರೇರೇಪಿಸಿದ್ದಕ್ಕೆ ಮುಸ್ಲಿಂ ಗಂಡಸರಿಂದ ಕಷ್ಟಗಳನ್ನು ಎದುರಿಸುತ್ತಾರೆ. ಮುಂದೆ ಮಹಿಳೆಯರಿಗಾಗಿ ಫುಲೆ ದಂಪತಿಗಳು ಆರಂಭಿಸಿದ ಹದಿನೆಂಟು ಶಾಲೆಗಳ ವ್ಯವಹಾರವನ್ನು ನಿರ್ವಹಿಸಿದರು. ಮುಂಬೈನಲ್ಲಿ 1851 ರಲ್ಲಿ ಸ್ವತಃ ಹುಡುಗಿಯರಿಗಾಗಿ ಎರಡು ಶಾಲೆಗಳನ್ನು ತೆರೆದಳು. ಫುಲೆ ದಂಪತಿಗಳಂತೆ ಫಾತೀಮಾ ಸಾಹಿತ್ಯ ರಚಿಸದಿದ್ದ ಕಾರಣ ಬಹುಕಾಲ ತೆರೆಮರೆಯಲ್ಲೆ ಉಳಿದರು.

ಈ ಸುದ್ದಿ ಓದಿದ್ದೀರಾ?: ಫೆ.24, 25ಕ್ಕೆ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ

ಅಂಬೇಡ್ಕರ್ 1946ರಲ್ಲಿ ‘ಶೂದ್ರರು ಯಾರಾಗಿದ್ದರು?’ ಕೃತಿಯನ್ನು ಜೋತಿಬಾ ಫುಲೆ ಅವರಿಗೆ ಅರ್ಪಿಸಿ ಅವರು ನನ್ನ ಗುರು ಎನ್ನುತ್ತಾರೆ. ಹೀಗಾಗಿ ಅಂಬೇಡ್ಕರ್ ಕುರಿತ ಅಧ್ಯಯನದ ಜತೆಜತೆಗೆ ದಲಿತ-ಬಹುಜನ ಪಕ್ಷವು ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಅವರನ್ನು ಮುನ್ನಲೆಗೆ ತಂದಿತು. ಭಾರತದಲ್ಲಿ ಮುಸ್ಲಿಂ ಚಿಂತಕರು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣರಾದ ಸರ್ ಸೈಯದ್ ಅಹ್ಮದ್ ಖಾನ್ ಮೂಲಕ ಆಧುನಿಕ ಭಾರತದ ಮುಸ್ಲಿಂ ಶಿಕ್ಷಣವನ್ನು ಗುರುತಿಸುತ್ತಾರೆ. ವಿಪರ್ಯಾಸವೆಂದರೆ, 1848ರಲ್ಲಿಯೇ ಶಿಕ್ಷಕಿಯಾಗಿ ಅಕ್ಷರದ ಬೆಳಕಿಂಡಿ ತೆರೆದ ಫಾತೀಮಾ ಶೇಕ್ ಬಗ್ಗೆ ಮುಸ್ಲಿಂ ಚಿಂತಕರು ಚರಿತ್ರೆಯಲ್ಲಿ ಗುರುತಿಸುವುದಿಲ್ಲ.

ಫಾತೀಮಾ ಶೇಖ್ ಅವರ ಪರಿಚಯವನ್ನು 2016ರಲ್ಲಿ ಮಹಾರಾಷ್ಟ್ರದ ಬಾಲಭಾರತೀಯ ಉರ್ದು ಪಠ್ಯದಲ್ಲಿಯೂ, 2022ರಲ್ಲಿ ಆಂಧ್ರದ 8 ನೇ ತರಗತಿಯ ಪಠ್ಯದಲ್ಲಿಯೂ ಸೇರಿಸಲಾಗಿದೆ. 2022ರಲ್ಲಿ ಫಾತಿಮಾಳ 191ನೇ ಜನ್ಮದಿನಾಚರಣೆಗೆ ಗೂಗಲ್ ಡೂಡಲ್ ಮೂಲಕ ಗೌರವಿಸಿ ಗಮನಸೆಳೆಯಿತು. ಸೈಯದ್ ನಸೀರ್ ಅಹಮದ್ ಅವರು ತೆಲುಗಿನಲ್ಲಿ ಬರೆದ ಫಾತೀಮಾ ಶೇಕ್ ಜೀವನ ಚರಿತ್ರೆಯ ಕೃತಿಯನ್ನು ಲೇಖಕ ಕಾ.ಹು.ಚಾನ್ ಪಾಷ ಅವರು ಕನ್ನಡಕ್ಕೂ ತಂದಿದ್ದಾರೆ. ಭಾರತದ ಚರಿತ್ರೆಯಲ್ಲಿ ಮರೆಯಬಾರದ ಫಾತೀಮಾ ಶೇಕ್ ಅವರನ್ನು ಇನ್ನಾದರೂ ನೆನೆಯೋಣ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಅರುಣ್‌ ಜೋಳದ ಕೂಡ್ಲಿಗಿ
ಅರುಣ್‌ ಜೋಳದ ಕೂಡ್ಲಿಗಿ
ಲೇಖಕ, ಜಾನಪದ ಸಂಶೋಧಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X