ಬಾಂಬ್ ಹೇಗೆ ಮತ್ತು ಎಲ್ಲಿ ತಯಾರಾಗುತ್ತದೆ ? ಪೊಲೀಸ್ ದಾಖಲೆಗಳಲ್ಲಿದೆ ಅಸಲಿ ‘ಸ್ಫೋಟಕ’ ಸತ್ಯ !

Date:

ನವೆಂಬರ್ 2017, ಕಣ್ಣೂರಿನ ಕೂತುಪರಂಬ ಎಂಬಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತ ವಲಯಂಗಡನ್ ರಘು ಎಂಬಾತನಿಗೆ ಸೇರಿದ ಶೆಡ್ ನಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟಗೊಂಡ ಸ್ಫೋಟಕ ದೇಶಿಯ ನಿರ್ಮಿತ ಬಾಂಬ್ ಆಗಿತ್ತು.

ಏಪ್ರಿಲ್ 12, 2023 ರ ಮಂಗಳವಾರ ರಾತ್ರಿ ಕೇರಳದ ಕಣ್ಣೂರು ಜಿಲ್ಲೆಯ ಎರಂಜೋಲಿಪಾಲಂ ಬಳಿ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ಗೆ ಸೇರಿದ ಯುವಕ ತೀವ್ರ ಗಾಯಗೊಂಡಿದ್ದ. ಆತನನ್ನು ವಿಷ್ಣು (20) ಎಂದು ಗುರುತಿಸಲಾಗಿದ್ದು ಆತನ ಅಂಗೈ ಒಡೆದು ಚೆಲ್ಲಾಪಿಲ್ಲಿಯಾಗಿತ್ತು.‌ ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ವಿಷ್ಣು, ಆತನ ಮನೆಯ ಸಮೀಪದ ಹೊಲವೊಂದರಲ್ಲಿ ಬಾಂಬ್ ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿದೆ. ಕಣ್ಣೂರು ಚಾಲಾ ಬೇಬಿ ಮೆಮೋರಿಯಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಕೈ ಮತ್ತು ದೇಹದ ಮೇಲೆ ಮಾರಣಾಂತಿಕ ಗಾಯಗಳಾಗಿದ್ದರಿಂದ ವಿಷ್ಣುವನ್ನು ಕೋಝಿಕ್ಕೋಡ್‌ಗೆ ವರ್ಗಾಯಿಸಲಾಯಿತು.

ಮಾರ್ಚ್ 2023, ಕಣ್ಣೂರಿನ ಕಕ್ಕಯಂಗಡ ಎಂಬಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ಸಂತೋಷ್ ಅವರು ತಮ್ಮ ಮನೆಯಲ್ಲಿಯೇ ಇಟ್ಟಿದ್ದ ಸ್ಫೋಟಕ ಬಾಂಬ್‌ನಿಂದ ಉಂಟಾದ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ ಎಂದು ಮಝಕ್ಕುನ್ನು ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿದೆ. ಸ್ಫೋಟದಲ್ಲಿ ಸಂತೋಷ್ ಅವರ ಪತ್ನಿ ಲಸಿತಾ ಕೂಡ ಗಾಯಗೊಂಡಿದ್ದಾರೆ. ಸಂತೋಷ್ ಬಾಂಬ್ ತಯಾರಿಸುತ್ತಿದ್ದ ವೇಳೆ ಅದು ಸ್ಫೋಟಗೊಂಡಿದ್ದು, ಆತನಿಗೆ ಹಾಗೂ ಆತನ ಪತ್ನಿಗೆ ಗಾಯಗಳಾಗಿವೆ. ಸ್ಫೋಟದ ಸಮಯದಲ್ಲಿ ಮತ್ತೊಂದು ಕೋಣೆಯಲ್ಲಿದ್ದ ಅವರ ತಾಯಿ ಮತ್ತು ಮಕ್ಕಳಿಗೆ ಗಾಯವಾಗಿಲ್ಲ ಎಂದು ಪೊಲೀಸ್ ವರದಿ ಹೇಳುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನವೆಂಬರ್ 2017, ಕಣ್ಣೂರಿನ ಕೂತುಪರಂಬ ಎಂಬಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತ ವಲಯಂಗಡನ್ ರಘು ಎಂಬಾತನಿಗೆ ಸೇರಿದ ಶೆಡ್ ನಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟಗೊಂಡ ಸ್ಫೋಟಕ ದೇಶಿಯ ನಿರ್ಮಿತ ಬಾಂಬ್ ಆಗಿತ್ತು.

ಆರ್ ಎಸ್ ಎಸ್ ಕಾರ್ಯಕರ್ತ ರಘು, ಬಾಂಬ್ ತಯಾರಿಸಲೆಂದೇ ಶೆಡ್ ನಿರ್ಮಿಸಿದ್ದ. ಬಾಂಬ್ ತಯಾರಿಸಲು ಬಳಸುತ್ತಿದ್ದ ಗನ್ ಪೌಡರ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.ರಘು ವಿರುದ್ಧ ಪ್ರಕರಣ ದಾಖಲಾದ ಬಳಿಕ ರಘು ಮತ್ತು ಅತನ ಮಗ ಪರಾರಿಯಾಗಿದ್ದರು.

2016 ರಲ್ಲಿ ಕೂತುಪರಂಬದಲ್ಲಿ ದೇಶಿಯ ನಿರ್ಮಿತ ಬಾಂಬ್‌ಗಳನ್ನು ತಯಾರಿಸುತ್ತಿದ್ದಾಗ ಸ್ಫೋಟಗೊಂಡು ಬಿಜೆಪಿ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದ.

ಡಿಸೆಂಬರ್ 2023, ಕೇರಳದ ಪೆರಿಂಗೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಎಸ್ ಎಸ್ ಕಾರ್ಯಕರ್ತ ಕೆ ಎಂ ಬಿಜು ಎಂಬಾತನ ಮನೆಯಲ್ಲಿ ಬಾಂಬ್ ಸ್ಫೋಟನಡೆದಿತ್ತು. ಆತನ ಮನೆಯಲ್ಲಿ ಸಿದ್ದಪಡಿಸಿ ಶೇಖರಿಸಿಟ್ಟಿದ್ದ ಬಾಂಬ್ ಅನ್ನು ಆತನ ಮನೆಯ ನಾಯಿ ಕಚ್ಚಿದ್ದರಿಂದ ಸ್ಫೋಟಗೊಂಡು ಬಾಂಬ್ ತಯಾರಿಕಾ ಕೃತ್ಯ ಬಯಲಾಗಿತ್ತು. ಬಾಂಬ್ ತಯಾರಿಕಾ ಘಟಕ ಮತ್ತು ಬಾಂಬ್ ಸ್ಫೋಟವನ್ನು ಮರೆಮಾಚುವ ಉದ್ದೇಶದಿಂದ ಸ್ಫೋಟದಲ್ಲಿ ಸತ್ತ ನಾಯಿಯನ್ನು ತಕ್ಷಣ ಬಾವಿಗೆ ಎಸೆದಿದ್ದ. ಸ್ಥಳೀಯರು ಸ್ಫೋಟದ ಸದ್ದು ಕೇಳಿ ಪೊಲೀಸರಿಗೆ ದೂರು ನೀಡಿದಾಗ ಬಾಂಬ್ ತಯಾರಿಕಾ ಘಟಕ ಪತ್ತೆಯಾಗಿದ್ದು, ಆರ್ ಎಸ್ ಎಸ್ ಕಾರ್ಯಕರ್ತ ಕೆ ಎಂ ಬಿಜು ವಿರುದ್ದ ಪ್ರಕರಣ ದಾಖಲಿಸಲಾಗಿತ್ತು.

ಜನವರಿ 2020 ರಲ್ಲಿ ಕೇರಳದ ಕಣ್ಣೂರಿನಲ್ಲಿರುವ ಆರ್ ಎಸ್ ಎಸ್ ಕಚೇರಿ ಮೇಲೆಯೇ ಬಾಂಬ್ ಎಸೆಯಲಾಗಿತ್ತು. ಕಣ್ಣೂರಿನಲ್ಲಿ “ಮನೋಜ್ ಸ್ಮೃತಿ” ಎಂಬುದು ಆರ್ ಎಸ್ ಎಸ್ ಅಧಿಕೃತ ಕಚೇರಿಯ ಹೆಸರು.

ಆರ್‌ಎಸ್‌ಎಸ್ ಮೇಲೆ ಕಚ್ಚಾ ಬಾಂಬ್ ಎಸೆದು ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕರ್ತ ಪ್ರಬೇಸ್ ಎಂಬಾತನನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಂಧಿಸಲಾಗಿತ್ತು.

“ಜನವರಿ 16ರ ಬೆಳಗಿನ ಜಾವ ಬಾಂಬ್‌ಗಳನ್ನು ಎಸೆದಿದ್ದಾನೆ. ಬಂಧನದ ನಂತರ ಆತ ತನ್ನ ಗುರಿ ಆರ್‌ಎಸ್‌ಎಸ್ ಕಚೇರಿ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಕಣ್ಣೂರು ರಾಜಕೀಯವಾಗಿ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕೋಮುಗಲಭೆ ಸೃಷ್ಟಿಸಲು ಆರ್ ಎಸ್ ಎಸ್ ಕಾರ್ಯಕರ್ತನೇ ಆರ್ ಎಸ್ ಎಸ್ ಕಚೇರಿ ಮೇಲೆ ಬಾಂಬ್ ಎಸೆದಿದ್ದಾನೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ಕೈಗೆತ್ತಿಕೊಂಡಾಗ ಆರೋಪಿಯ ಪತ್ತೆಯಾಗಿತ್ತು. ಆತನನ್ನು ಕೊಯಮತ್ತೂರಿನಲ್ಲಿ ಬಂಧಿಸಲಾಗಿದ್ದು ತಪ್ಪು ಒಪ್ಪಿಕೊಂಡಿದ್ದಾನೆ” ಎಂದು ತನಿಖಾಧಿಕಾರಿಯಾಗಿದ್ದ ಕತಿರೂರು ಠಾಣೆಯ ಪೊಲೀಸ್ ಅಧಿಕಾರಿ ನಿಜೇಶ್ ಹೇಳಿಕೆ ನೀಡಿದ್ದರು.

ಇಂತಹ ಘಟನೆಗಳು ದೇಶದಾದ್ಯಂತ ಹಲವಾರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದೆ‌. ಬಾಂಬ್ ದಾಳಿ, ಬಾಂಬ್ ಸ್ಫೋಟ ಎಂದು ಸುದ್ದಿಯಾಗಿ ಒಂದು ಸಮುದಾಯವನ್ನು ಅನುಮಾನಿಸಲಾಗುತ್ತದೆ. ವಾಸ್ತವವಾಗಿ ಬಾಂಬ್ ತಯಾರಿಕಾ ಘಟಕಗಳು ಯಾರದ್ದು ಎಂಬ ಬಗ್ಗೆ ಚರ್ಚೆಯೇ ನಡೆಯಬೇಕಿದೆ.

ನವೀನ್‌ ಸೂರಿಂಜೆ
+ posts

ಪತ್ರಕರ್ತ, ಲೇಖಕ

ಪೋಸ್ಟ್ ಹಂಚಿಕೊಳ್ಳಿ:

ನವೀನ್‌ ಸೂರಿಂಜೆ
ನವೀನ್‌ ಸೂರಿಂಜೆ
ಪತ್ರಕರ್ತ, ಲೇಖಕ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಾಹ್ಮಣರಿಂದ ಬ್ರಾಹ್ಮಣರಿಗೆ ಮೋಸ: 24 ಲಕ್ಷ ಕಳೆದುಕೊಂಡು ಭಿಕ್ಷೆ ಬೇಡುತ್ತಿರುವ ಹೆಬ್ಬಾರ್

ಹೆಬ್ಬಾರ್ ಒಬ್ಬರೇ ಅಲ್ಲ, ಬೆಂಗಳೂರಿನ ಬಸವನಗುಡಿಯ ಬ್ರಾಹ್ಮಣರೆಲ್ಲರೂ ಗುರುರಾಘವೇಂದ್ರ ಬ್ಯಾಂಕಿನ ಗ್ರಾಹಕರೇ...

ಚಿತ್ರದುರ್ಗ | ನೀತಿ ಸಂಹಿತೆ ನೆಪದಲ್ಲಿ ನೀಲಿ ಬಾವುಟ ತೆರವು; ಕೇಸರಿ ಬಿಟ್ಟಿದ್ದೇಕೆ ಎಂದಾಗ ರಾತ್ರೋರಾತ್ರಿ ಮರುಸ್ಥಾಪನೆ

ಆರಂಭದಲ್ಲಿ ನೆಪ ಹೇಳುತ್ತಿದ್ದ ಪಿಡಿಓಗೆ, ಜನರ ಜೈಭೀಮ್ ಘೋಷಣೆಗಳು ಅಪ್ಪಳಿಸಿದವು... ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿಯಂದು...

ಅಂಬೇಡ್ಕರರ ಪ್ರಬುದ್ಧ ಭಾರತ ಮತ್ತು ಮೋದಿಯವರ ವಿಕಸಿತ ಭಾರತ

ರಾಜಕೀಯ ಸ್ವಾತಂತ್ರ್ಯಕ್ಕಿಂತ ಸ್ವತಂತ್ರ ಭಾರತದಲ್ಲಿ ಸಾಮಾಜಿಕ ಪ್ರಜಾಸತ್ತೆ ಮತ್ತು ಆರ್ಥಿಕ ಪ್ರಜಾಸತ್ತೆಗಳನ್ನು...

ಹಿಂದುತ್ವಕ್ಕೆ ಬಲಿಯಾದ ಕುಲಾಲ ಮತ್ತು ಸಣ್ಣ ಸಮುದಾಯಗಳ ಪ್ರಾತಿನಿಧ್ಯ!

ಬಿಜೆಪಿ ಮತ್ತು ಸಂಘಪರಿವಾರದಲ್ಲಿ ಕುಂಬಾರ/ಕುಲಾಲ್/ಮೂಲ್ಯ ಸಮುದಾಯಗಳ ಯುವಕರು ಇದ್ದರೂ ಅವರಿಗೆ ರಾಜಕೀಯ...