ʼಒಂದು ದೇಶ ಒಂದು ಚುನಾವಣೆʼಯೋ, ಇದೊಂದು ಹೂವಿನ ರೂಪದ ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳೋ?

Date:

ಒಂದು ವೇಳೆ ಈ ಪ್ರಸ್ತಾಪದ ಹಿಂದಿನ ಉದ್ದೇಶ ಶುದ್ಧ ರಾಜಕೀಯ ಸುಧಾರಣೆಯೇ ಆಗಿದ್ದರೆ, 2019ರಲ್ಲಿ ಪ್ರಧಾನಮಂತ್ರಿ ಇದರ ವಕಾಲತ್ತು ವಹಿಸಿದ್ದಾಗ ಈ ಸಮಿತಿಯನ್ನು ಏಕೆ ರಚಿಸಲಿಲ್ಲ?

ಭಾರತವು ಕಣ್ಕಟ್ಟುಳ್ಳ ದೇಶವಾಗಿದೆ. ಈ ಸತ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಿಂತ ಚೆನ್ನಾಗಿ ಇನ್ಯಾರೂ ಅರಿತಿಲ್ಲ. ದೇಶದಲ್ಲಿ ಬೆಲೆ ಏರಿಕೆ ಇರಲಿ, ಅದಾನಿಯ ಹಗರಣವಿರಲಿ ಅಥವಾ ನಮ್ಮ ಭೂಮಿಯ ಮೇಲೆ ಚೀನಾದ ಆಕ್ರಮಣವಿರಲಿ. ಇವುಗಳ ಬಗ್ಗೆ ನೀವು ಚಿಂತಿಸಬೇಡಿ. ಒಂದು ಹೊಸ ಕಣ್ಕಟ್ಟನ್ನು ಬಿಟ್ಟುಬಿಡಿ: “ಒಂದು ದೇಶ ಒಂದು ಚುನಾವಣೆ”. ಟಿವಿ ಚಾನೆಲ್‌ಗಳಿಗೆ ಸೂಚನೆ ನೀಡಿಬಿಡಿ. ಜನರು ತಮ್ಮ ಕಷ್ಟಗಳನ್ನು ಮರೆತು ಹೊಸ ನಾಟಕ ನೋಡಲು ಶುರುಮಾಡುತ್ತಾರೆ. ಅಲ್ಲಿಯೇ ಆಟ ಮುಗೀತು, ವೋಟು ಕಬ್ಜಾ ಆಯಿತು.

ಮುಂಬರುವ ಲೋಕಸಭೆ ಚುನಾವಣೆಗಳಿಗೆ ಎಂಟು ತಿಂಗಳ ಮುನ್ನ “ಒಂದು ದೇಶ ಒಂದು ಚುನಾವಣೆ” ಎಂಬ ಹೆಸರಿನಲ್ಲಿ ಲಾಂಚ್ ಮಾಡಲಾದ ಕಣ್ಕಟ್ಟಿನ ಅಸಲಿಯತ್ತನ್ನು ಅರಿಯಲು ಈ ಬಣ್ಣಬಣ್ಣ ಲಕೋಟೆಯನ್ನು ತೆರೆದು ಅದರಲ್ಲಿರುವ ಎಂಟು ಭ್ರಾಂತಿಗಳನ್ನು ಗುರುತಿಸಿ ಅದರ ಹಿಂದಿರುವ ಸಂಪೂರ್ಣ ಸತ್ಯವನ್ನು ಅರಿಯುವ ಅವಶ್ಯಕತೆ ಇದೆ.

ಮೊದಲ ಭ್ರಾಂತಿ: ʼಒಂದು ದೇಶ ಒಂದು ಚುನಾವಣೆʼ ಎಂಬುದು ಒಂದು ಸಾಧಾರಣವಾದ ಆಡಳಿತಾತ್ಮಕ ಸುಧಾರಣೆಯಾಗಿದ್ದು, ಅದು ದೇಶದ ಚುನಾವಣಾ ಕ್ಯಾಲೆಂಡರ್‌ನಲ್ಲಿರುವ ಕೊರತೆಗಳನ್ನು ನೀಗಿಸುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಾಸ್ತವ: ಇಲ್ಲ ಸ್ವಾಮಿ, ಇದು ಯಾವುದೇ ಸಣ್ಣಪುಟ್ಟ ಆಡಳಿತಾತ್ಮಕ ಸುಧಾರಣ ಅಲ್ಲ. ಸದಾಕಾಲ ಲೋಕಸಭೆಯೊಂದಿಗೆ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕಾದರೆ ನಮ್ಮ ಸಂವಿಧಾನದ ಅಡಿಪಾಯದ ಮೂಲರೂಪವನ್ನೇ ಬದಲಿಸಬೇಕಾಗುತ್ತದೆ. ಇದು ಸಂವಿಧಾನದ ಬಹಳ ದೊಡ್ಡ ತಿದ್ದುಪಡಿಯಾಗುತ್ತದೆ.

ಎರಡನೆಯ ಭ್ರಾಂತಿ: ದೇಶದ ಏಕತೆ ಮತ್ತು ಚುನಾವಣೆಗಳಲ್ಲಿ ಏಕರೂಪತೆ ತರಲು ಇದೊಂದು ಸ್ವಾಭಾವಿಕ ಹೆಜ್ಜೆಯಾಗಿದೆ.

ವಾಸ್ತವ: ಇಲ್ಲಿ “ಒಂದು ಚುನಾವಣೆʼಯ ಅರ್ಥ ಒಂದೇ ಸಮಯಕ್ಕೆ ಚುನಾವಣೆ ಎಂದು. ಇದಕ್ಕೂ ಏಕತೆಗೂ ಅಥವಾ ಏಕರೂಪತೆಗೂ ಯಾವ ಸಂಬಂಧವೂ ಇಲ್ಲ. ಪಂಚಾಯತಿ ಮತ್ತು ನಗರ ಪಾಲಿಕೆಗಳ ಚುನಾವಣೆಗಳಲ್ಲಿ ಬಳಕೆಯಾಗುವ ಮತದಾರರ ಪಟ್ಟಿ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಳಕೆಯಾಗುವ ಪಟ್ಟಿ ಬೇರೆಯಾಗಿದ್ದು, ಅದನ್ನು ಒಂದೇ ಆಗಿಸಬೇಕಿದೆ. ವಾಸ್ತವದಲ್ಲಿ ದೇಶದಲ್ಲಿ ಚುನಾವಣಾ ಏಕರೂಪತೆಗೆ ಅವಶ್ಯಕತೆ ಇರುವುದು ಇಲ್ಲಿ. ಆದರೆ ಈ ಪ್ರಸ್ತಾಪದಲ್ಲಿ ಈ ಅವಶ್ಯಕ ಏಕರೂಪತೆಗಾಗಿ ಯಾವ ಸ್ಥಾನವೂ ಕಂಡುಬಂದಿಲ್ಲ.

ಮೂರನೆಯ ಭ್ರಾಂತಿ: ಇದೊಂದು ಸಾರ್ವತ್ರಿಕ ಪ್ರಸ್ತಾಪವಾಗಿದ್ದು, ಇದರ ಬಗ್ಗೆ ದೀರ್ಘಕಾಲದಿಂದ ರಾಷ್ಟ್ರೀಯ ಒಮ್ಮತಕ್ಕೆ ಬರಲಾಗಿದೆ.

ವಾಸ್ತವ: ಈ ಪ್ರಸ್ತಾಪವನ್ನು ಕಳೆದ ನಾಲ್ಕು ದಶಕಗಳಲ್ಲಿ ಪದೇಪದೇ ಮುಂದಿಡಲಾಗಿದೆ. ಕಾಲಕಾಲಕ್ಕೆ ಹಲವು ಸರಕಾರಿ ಸಮಿತಿಗಳು ಹಾಗೂ ಚುನಾವಣಾ ಆಯೋಗವು ಇದರ ಸಮರ್ಥನೆ ಮಾಡಿವೆ. ಆದರೆ, ಈ ಬಾರಿಯ ರೀತಿಯಲ್ಲಿಯೇ, ಅನೇಕ ಪಕ್ಷಗಳು ಮತ್ತು ವಿಶೇಷಜ್ಞರು ಇದನ್ನು ವಿರೋಧಿಸಿದ್ದಾರೆ. ಇಷ್ಟು ದೊಡ್ಡ ಸಾಂವಿಧಾನಿಕ ಬದಲಾವಣೆಯನ್ನು ಸರ್ವದಳೀಯ ಒಮ್ಮತವಿಲ್ಲದೇ ಅನುಷ್ಠಾನಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ.

ನಾಲ್ಕನೆಯ ಭ್ರಾಂತಿ: ಸಂವಿಧಾನ ಅನುಷ್ಠಾನಗೊಂಡ ನಂತರ ಆರಂಭದಲ್ಲಿ “ಒಂದು ದೇಶ ಒಂದು ಚುನಾವಣೆ”ಯ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದವು. ನಂತರ ಚುನಾವಣಾ ಚಕ್ರ ಬೇರೆ ಬೇರೆಯಾಗಿದ್ದ ಕಾರಣದಿಂದ ವಿಕೃತಿ ಹುಟ್ಟಿಕೊಂಡಿದೆ.

ಸಂಪೂರ್ಣ ಸತ್ಯ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಬೇರೆ ಬೇರೆ ಕಾಲದಲ್ಲಿ ಚುನಾವಣೆ ಆಗುವುದು ಯಾವ ವಿಕೃತಿಯೂ ಅಲ್ಲ. ಅದರ ಬದಲಿಗೆ ನಮ್ಮ ಸಾಂವಿಧಾನಿಕ ಅಡಿಪಾಯದ ಎರಡು ಮೂಲಭೂತ ತತ್ವಗಳ (ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ) ಸ್ವಾಭಾವಿಕ ಪರಿಣಾಮವಾಗಿದೆ. ಆರಂಭದಲ್ಲಿ ಎರಡೂ ಚುನಾವಣೆಗಳು ಒಂದೇ ಕಾಲಕ್ಕೆ ಆಗಲೇಬೇಕಿತ್ತು ಏಕೆಂದರೆ, ಆರಂಭದಲ್ಲಿ ಏಕಕಾಲಕ್ಕೆ ಆಗುವುದು ಸ್ವಾಭಾವಿಕವಾಗಿತ್ತು. ಸಂವಿಧಾನದ ರಚನಾಕಾರರು ಇದನ್ನು ಅರಿತಿದ್ದರು. ಚಿಕಿತ್ಸೆ ನೀಡಬೇಕಾದಂತಹ ಯಾವ ವಿಕೃತಿಯೂ ಇದರಲ್ಲಿ ಇಲ್ಲ.

ಐದನೆಯ ಭ್ರಾಂತಿ: ಏಕಕಾಲಕ್ಕೆ ಚುನಾವಣೆ ನಡೆಸುವುದರಿಂದ ಸರಕಾರದ ಚುನಾವಣಾ ವೆಚ್ಚ ತುಂಬಾ ಕಡಿಮೆಯಾಗಲಿದೆ.

ವಾಸ್ತವ: ಸ್ವಾಭಾವಿಕವಾಗಿಯೇ ಬೇರೆ ಬೇರೆ ಚುನಾವಣೆ ನಡೆಸುವುದರ ಬದಲಿಗೆ ಒಂದೇ ಬಾರಿ ಚುನಾವಣೆ ನಡೆಸುವುದರಿಂದ ಸರಕಾರಿ ವೆಚ್ಚದಲ್ಲಿ ಉಳಿತಾಯವಾಗುವುದು. ಆದರೆ ಪ್ರಶ್ನೆ ಇರುವುದು, ಎಷ್ಟು? ಈ ರೀತಿಯಲ್ಲಿ ಚುನಾವಣೆ ನಡೆಸುವುದರಿಂದ ಹೆಚ್ಚೆಂದರೆ ಐದು ವರ್ಷಗಳಲ್ಲಿ ರೂ. 5,೦೦೦ ಕೋಟಿ ಉಳಿತಾಯ ಆಗಬಲ್ಲದು. ಈ ಮೊತ್ತ ಮುಂದಿನ ಐದು ವರ್ಷಗಳ ಕೇಂದ್ರೀಯ ಬಜೆಟ್‌ನ 0.02%ಆಗಲಿದೆ ಅಂದರೆ 100 ರೂಪಾಯಿಗಳಲ್ಲಿ ಐದು ಪೈಸೆ ಬಳಸಿದಂತೆ. ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣೆಗಳಲ್ಲಿ ಎಷ್ಟು ಖರ್ಚು ಮಾಡುತ್ತಾರೋ ಎಂದು ನೋಡಿದರೆ, ಈ ಸರಕಾರಿ ವೆಚ್ಚವು ಏನೂ ಅಲ್ಲ.

ಆರನೆಯ ಭ್ರಾಂತಿ: ಪದೇಪದೇ ಚುನಾವಣೆ ನಡೆಸುವುದರಿಂದ ನೀತಿ ಸಂಹಿತೆ ಇರುವುದರಿಂದ ಸರಕಾರಿ ಕೆಲಸಗಳು ನಿಂತುಕೊಳ್ಳುತ್ತವೆ. ಸರಕಾರಗಳ ಮೇಲೆ ಸದಾಕಾಲ ಚುನಾವಣೆಗಳ ಒತ್ತಡ ಇರುತ್ತದೆ. ಈ ಸಮಸ್ಯೆಗೆ ಇದೊಂದೇ ಪರಿಹಾರ.

ವಾಸ್ತವ: ಈ ಮಾತಿನಲ್ಲಿ ಒಂದಿಷ್ಟು ಸತ್ಯಾಂಶವಿದೆ. ಆದರೆ ಈ ಸಮಸ್ಯೆಯ ಪರಿಹರಿಸಲು ಇನ್ನೂ ಸುಲಭವಾದ ಮಾರ್ಗಗಳಿವೆ. ಸದ್ಯಕ್ಕೆ ಐದು ವರ್ಷಗಳಲ್ಲಿ ಕನಿಷ್ಠ ಎಂಟು ಬಾರಿ ದೊಡ್ಡ ರಾಜ್ಯಗಳ ಚುನಾವಣೆ ನಡೆಯುತ್ತವೆ. ಇದನ್ನು ಕಡಿಮೆ ಮಾಡಲು, ಒಂದು ವರ್ಷದಲ್ಲಿ ಬರುವ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡಬಹುದಾಗಿದೆ. ಆಯಾ ರಾಜ್ಯಗಳಿಗೆ ವಿಶೇಷ ಸಂಬಂಧವಿಲ್ಲದೇ ಇದ್ದರೆ ಕೇಂದ್ರ ಸರಕಾರದ ಎಲ್ಲಾ ತೀರ್ಮಾನಗಳನ್ನು ನಿಲ್ಲಿಸದೇ ಇರುವಂತೆ ನೀತಿ ಸಂಹಿತೆಯಲ್ಲಿ ತಿದ್ದುಪಡಿ ಮಾಡಬೇಕಿದೆ. ರಾಜ್ಯ ಚುನಾವಣೆಗಳನ್ನು ಹಲವಾರು ಸುತ್ತುಗಳಲ್ಲಿ ಮಾಡುವುದರ ಬದಲಿಗೆ ಒಂದು ಅಥವಾ ಎರಡು ಸುತ್ತಿನಲ್ಲಿ ಮಾಡುವುದರಿಂದ ಚುನಾವಣೆಯ ಅವಧಿ ಕಡಿಮೆ ಮಾಡಬಹುದಾಗಿದೆ.

ಏಳನೆಯ ಭ್ರಾಂತಿ: ಈ ಪ್ರಸ್ತಾಪದಲ್ಲಿ ಹೆಚ್ಚಿನ ಲಾಭ ಇಲ್ಲವೆಂದಿಟ್ಟುಕೊಂಡರೂ, ಯಾವುದೇ ನಷ್ಟವೂ ಇಲ್ಲ.

ವಾಸ್ತವ: ನಷ್ಟ ಇದೆ, ಅದೇನೆಂದರೆ, ಇದರಿಂದ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯ ಅಡಿಪಾಯ ಕುಸಿದುಬೀಳುತ್ತದೆ. ಒಂದು ವೇಳೆ ಯಾವುದೋ ರಾಜ್ಯದಲ್ಲಿ ಸರಕಾರವು ವಿಧಾನಸಭೆಯಲ್ಲಿ ಬಹುಮತ ವಿಶ್ವಾಸ ಕಳೆದುಕೊಳ್ಳುತ್ತದೆ ಹಾಗೂ ಇತರ ಯಾವ ಪಕ್ಷಕ್ಕೂ ಬಹುಮತ ಇಲ್ಲದಿರುವ ಸಂದರ್ಭದಲ್ಲಿ ಏನಾಗುವುದು? ಬಜೆಟ್‌ ಜಾರಿಗೊಳಿಸಲಾಗದ, ದುಡ್ಡು ಖರ್ಚು ಮಾಡುವ ಅಧಿಕಾರವಿಲ್ಲದ ಆ ಸರಕಾರವು ಐದು ವರ್ಷ ಮುಂದುವರೆಯುವಂತೆ ಮಾಡಲಾಗುವುದೇ? ಅಥವಾ ವಿಧಾನಸಭೆಯನ್ನು ವಿಸರ್ಜಿಸಿ, ಹಲವಾರು ವರ್ಷಗಳ ತನಕ ರಾಜ್ಯಪಾಲರ ಆಳ್ವಕೆ ನಡೆಯುವುದೇ? ಹಾಗೂ ಒಂದು ವೇಳೆ ಈ ರೀತಿ ಕೇಂದ್ರದಲ್ಲಿ ಆದರೆ ಏನಾಗುವುದು? ಇದು ಪ್ರಜಾಪ್ರಭುತ್ವದೊಂದಿಗೆ ಆಟವಾಡಿದಂತೆ.

ಎಂಟನೆಯ ಭ್ರಾಂತಿ: ಇದು ಚುನಾವಣಾ ಸುಧಾರಣೆ ನಿಜವಾದ ಪ್ರಯತ್ನವಾಗಿದೆ. ಇದಕ್ಕೂ ರಾಜಕೀಯಕ್ಕೂ ಯಾವ ಸಂಬಂಧವೂ ಇಲ್ಲ.

ವಾಸ್ತವ: ಒಂದು ವೇಳೆ ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದಲ್ಲಿ, ಕಳೆದ 25 ವರ್ಷಗಳಲ್ಲೊ ಪದೇಪದೇ ಕೇವಲ ಬಿಜೆಪಿ ಮತ್ತು ಅದರ ನಾಯಕರೇ ಈ ಪ್ರಸ್ತಾಪದ ವಕಾಲತ್ತು ಮಾಡುತ್ತಿರುವುದು ಏಕೆ? ಒಂದು ವೇಳೆ ಲೋಕಸಭೆಗೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆದರೆ ರಾಷ್ಟ್ರೀಯ ಚುನಾವಣೆಯ ವಾತಾವರಣ ಸೃಷ್ಟಿಯಾಗಿ, ವಿಧಾನಸಭೆಯ ಚುನಾವಣೆಯಲ್ಲಿಯೂ ದೊಡ್ಡ ರಾಷ್ಟ್ರೀಯ ಪಕ್ಷಕ್ಕೆ ಹೆಚ್ಚಿನ ಮತಗಳು ಸಿಗುತ್ತವೆ ಎಂಬುದು ಸ್ವಾಭಾವಿಕ. ಹಾಗೂ ಇಂದಿನ ಸಂದರ್ಭದಲ್ಲಿ ಹೆಚ್ಚಿನ ಲಾಭ ಬಿಜೆಪಿಗೆ ಆಗುತ್ತದೆ ಎಂಬುದು ಸಹಜವಾಗಿದೆ.

ಇದನ್ನು ಓದಿ ರೈತರ ಆತ್ಮಹತ್ಯೆ ಬೆಂಕಿ ಕಾರ್ಪೊರೇಟುಗಳನ್ನು ಸುಟ್ಟೀತು!

ಅಲ್ಲದೇ ಯೋಚಿಸಿ, ಒಂದು ವೇಳೆ ಈ ಪ್ರಸ್ತಾಪದ ಹಿಂದಿನ ಉದ್ದೇಶ ಶುದ್ಧ ರಾಜಕೀಯ ಸುಧಾರಣೆಯೇ ಆಗಿದ್ದರೆ, 2019ರಲ್ಲಿ ಪ್ರಧಾನಮಂತ್ರಿ ಇದರ ವಕಾಲತ್ತು ವಹಿಸಿದ್ದಾಗ ಈ ಸಮಿತಿಯನ್ನು ಏಕೆ ರಚಿಸಲಿಲ್ಲ? ಲೋಕಸಭೆ ಚುನಾವಣೆಗೆ ಕೇವಲ ಎಂಟು ತಿಂಗಳ ಮುನ್ನ ಹಾಗೂ ಸಂಸತ್ತಿನ ಪ್ರಸ್ತಾಪಿತ ವಿಶೇಷ ಅಧಿವೇಶನಕ್ಕೆ 20 ದಿನಗಳ ಮುನ್ನ ದಿಢೀರನೇ ಒಂದು ಹೈಪವರ್‌ ಸಮಿತಿ ರಚಿಸಲಾಗಿ, ಅದರಲ್ಲಿ ರಾಜ್ಯಸಭೆಯ ವಿರೋಧಪಕ್ಷಗಳನ್ನು ಹೊರಗಿಟ್ಟು, ಹಳೆಯ ಗುಲಾಮರನ್ನು ತುಂಬಿಸಲಾಗಿ, ರಾತ್ರೋರಾತ್ರಿ ಸಮಿತಿಯ ಕೆಲಸ ಶುರು ಮಾಡಲಾಗಿದೆ. ಇಷ್ಟಾದ ಮೇಲೆ ಇದರ ಹಿಂದೆ ಯಾವುದೇ ರಾಜಕೀಯ ಇಲ್ಲ ಎನ್ನುತ್ತೀರಿ, ನೀವೊಳ್ಳೆ ತಮಾಷೆ ಮಾಡ್ತೀರಿ.

ಯೋಗೇಂದ್ರ ಯಾದವ್‌
ಯೋಗೇಂದ್ರ ಯಾದವ್

ಸ್ವರಾಜ್‌ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರು, ರಾಜಕೀಯ ವಿಶ್ಲೇಷಕ

ಪೋಸ್ಟ್ ಹಂಚಿಕೊಳ್ಳಿ:

ಯೋಗೇಂದ್ರ ಯಾದವ್
ಯೋಗೇಂದ್ರ ಯಾದವ್
ಸ್ವರಾಜ್‌ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರು, ರಾಜಕೀಯ ವಿಶ್ಲೇಷಕ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡೇತರರಿಗೆ ಕನ್ನಡ ಕಲಿಸುವುದು ಸುಲಭವಲ್ಲ, ಹಾಗೆಂದು ಕಷ್ಟವೂ ಅಲ್ಲ; ಬನ್ನಿ, ಎಲ್ಲರಿಗೂ ಕನ್ನಡ ಕಲಿಸೋಣ

ಡಾ.ಪುರುಷೋತ್ತಮ ಬಿಳಿಮಲೆಯವರ ಅಧ್ಯಕ್ಷತೆಯಲ್ಲಿನ ಈ ಭಾರಿಯ ಪ್ರಾಧಿಕಾರವು ಕನ್ನಡೇತರರಿಗೆ ಕನ್ನಡ ಕಲಿಸುವ...

ಅಯೋಧ್ಯೆ ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ತಹತಹ; ಕೇಸರಿ ಪಕ್ಷದ ಬತ್ತಳಿಕೆಯಲ್ಲಿರುವ ಆ ಅಸ್ತ್ರ ಯಾವುದು?

ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ...

ಮೋಹನದಾಸ ಪೈ : ರಾಮ ಆದ್ರೆ ರಾಮ; ರಾವಣ ಆದ್ರೆ ರಾವಣ!

ನಮ್ಮ ಸರ್ಕಾರಗಳು- ಯಡಿಯೂರಪ್ಪ/ಬೊಮ್ಮಾಯಿ/ಸಿದ್ಧರಾಮಯ್ಯ.. ಎಲ್ಲರೂ ಕೈಗಾರಿಕಾ ನೀತಿ ರೂಪಿಸಿ, ಬರುವವರಿಗೆ ಸಬ್ಸಿಡಿ...

ಈ ದಿನ ವಿಶೇಷ | ಮುಸ್ಲಿಮರಿಲ್ಲದ ‘ಮೊಹರಂ’ ಹಿಂದೆ ಏನೇನೆಲ್ಲ ಇದೆ ಗೊತ್ತಾ?

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೈಕನವಾಡಿಯಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲ...