ತ್ರಿಭಾಷಾ ಸೂತ್ರ ಕುರಿತು ಕುವೆಂಪು ಖಚಿತ ನಿಲುವು

Date:

Advertisements

ಸಾಮಾನ್ಯವಾಗಿ ಮಂತ್ರಿಗಳೆಲ್ಲ ತ್ರಿಭಾಷಾ ಸೂತ್ರವನ್ನು ನಿಶ್ಯಂಕೆಯಿಂದ ಸಾರುತ್ತಾರೆ; ಅದರ ಅಪಾಯಗಳನ್ನು ಗ್ರಹಿಸುವುದಿಲ್ಲ. ಈ ವಿಚಾರದಲ್ಲಿ ನಾವು ಹಗಲುಗುರುಡರಾಗಿ ವರ್ತಿಸಬಾರದು. ತ್ರಿಭಾಷಾ ಸೂತ್ರ ವಾಸ್ತವವಾಗಿ ಕನ್ನಡ ಮಕ್ಕಳ ಎದೆಗೆ ತ್ರಿಶೂಲ ಸದೃಶವೆ ಆಗಿದೆ…

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಈ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ. ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದು ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಗಳೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಇಂಗ್ಲಿಷಿನ ಸ್ಥಾನದಲ್ಲಿ ಹಿಂದಿಯನ್ನು ತಂದು ಕೂರಿಸಬೇಕೆಂಬುದು ಹಿಂದಿವಾದಿಗಳ ಸಂಚು. ಇದನ್ನು ಕನ್ನಡಿಗರು ಪ್ರತಿಭಟಿಸಿ ವಿಫಲಗೊಳಿಸಬೇಕು. ಕೇಂದ್ರ ಸರ್ಕಾರವನ್ನು ಮೆಚ್ಚಿಸುವುದಕ್ಕಾಗಿ ರಾಜ್ಯ ಸರ್ಕಾರ ಹಿಂದಿ ವಿಶ್ವವಿದ್ಯಾನಿಲಯ ಸ್ಥಾಪನೆಯೇ ಮುಂತಾದ ಅವಿವೇಕದ ಕಾರ್ಯಗಳಿಗೆ ಕೈಹಾಕಿ ಕನ್ನಡಿಗರ ಹಿತವನ್ನು ಬಲಿಕೊಡಬಾರದು.

Advertisements

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ.

ಭಾಷಾ ತ್ರಿಶೂಲವೀ ತ್ರಿಭಾಷಾ ಸೂತ್ರ
ಬಾಲಕರ ರಕ್ಷಿಸೈ, ಹೇ ತ್ರಿಣೇತ್ರ |
ಚೂರು ತಿಂಡಿಗೆ ಸಿಕ್ಕಿಸಿಹರೊ ಈ ಮೂರು ಗಾಳ
ನುಂಗದಿದ್ದರೆ ಹಸಿವೆ; ನುಂಗಿದರೆ ಪ್ರಾಣ ಶೂಲ. ||

(ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪುಸ್ತಕದ ‘ಕರ್ನಾಟಕ: ಇಟ್ಟ ಹೆಸರು ಕೊಟ್ಟ ಮಂತ್ರ’ ಲೇಖನದ ಆಯ್ದ ಭಾಗ)

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ

ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ...

ಮತದಾರ ಪಟ್ಟಿ ಅಳಿಸಿ ತಪ್ಪಿಸಿಕೊಳ್ಳುತ್ತಿರುವ ಆಯೋಗ: ದೇಶದ ಪ್ರತಿಯೊಬ್ಬರೂ ಕೂಡ ಪ್ರಶ್ನೆಗೆ ಅರ್ಹರು

ದೇಶದ ಜನತೆ ಜಾಗೃತರಾಗಿ, ಈ ಅಸಮರ್ಪಕತೆಗಳ ವಿರುದ್ಧ ಧ್ವನಿ ಎತ್ತಿದರೆ ಮಾತ್ರ...

ಪೆಟ್ರೋಲ್‌ಗೆ ಇಥೆನಾಲ್ ಮಿಶ್ರಣ: ಪರಿಸರಕ್ಕೆ ಚೂರು ಲಾಭ, ವಾಹನಗಳಿಗೆ ಹೆಚ್ಚು ಅಪಾಯಕಾರಿ

ಇ20 ಮಿಶ್ರಣವು ಪರಿಸರಕ್ಕೆ ಒಂಚೂರು ಲಾಭದಾಯಕವಾದರೂ, ವಾಹನಗಳಿಗೆ ಅದರಲ್ಲೂ ಹಳೆಯ ಮಾದರಿ...

ಹೊಸ ಆದಾಯ ತೆರಿಗೆ ಮಸೂದೆ 2025: ಬದಲಾವಣೆಗಳು – ಅನಾನುಕೂಲಗಳು ಏನೇನು?

ನೂತನ ಮಸೂದೆಯು ಹಳೆಯ ಕಾಯ್ದೆಯನ್ನು ಸಂಪೂರ್ಣವಾಗಿ ಬದಲಿಸುವ ಗುರಿ ಹೊಂದಿದ್ದು, ತೆರಿಗೆ...

Download Eedina App Android / iOS

X