ಲಂಕೇಶರು ಕಂಡ ಜಗಜೀವನ ರಾಮ್

Date:

ಛೇರ್ಮನ್‌ ಗಿರಿಯಿಂದ ಅಲ್ಲೊಂದು ಇಲ್ಲೊಂದು ಚರಂಡಿ ತೋಡಿಸಿ ರಸ್ತೆ ಸರಿ ಮಾಡಬಹುದು. ಆದರೆ ಈ ಪಂಚಾಯ್ತಿಯ ಕಪ್ಪು ಜನರ ಹೃದಯಗಳ ನೋವನ್ನು ಒಂದುಗೂಡಿಸಿದರೆ ಮಾತ್ರ ಆತನ ಬದುಕಿಗೆ ಅರ್ಥ ಬರುತ್ತದೆ. 

“ನಮ್ಮ ಜೀವನರಾಮು ಕೊನೆಗೂ ಛೇರ್ಮನ್‌ ಆಗಲಿಲ್ಲ. ಬರ್ತೂರಿನ ಬೇರನ್ನು ಈ ಪಂಚಾಯ್ತಿಯ ಕತ್ತೆಗಳು ಎಷ್ಟು ಗಲೀಜು ಮಾಡಿದ್ದಾರೆಂದರೆ, ನಮ್ಮ ರಾಮು ಹಿಡಿಯುತ್ತಿದ್ದುದು ಈ ದರಿದ್ರ ಛೇರನ್ನು, ಊರಿನ ಯಜಮಾನ ಸಂಜೀವಿಯ ಆಶೀರ್ವಾದದಿಂದ ರಾಮು ಕುರ್ಚಿ ಏರಬೇಕಾಗಿರಲಿಲ್ಲ. ರಾಮು ನಮ್ಮೆಲ್ಲರ ಮನಸ್ಸಿನಲ್ಲಿ ಬಹಳ ಕಾಲ ಉಳಿಯುವ ಕಪ್ಪು ಸಂಕೇತ. ನಮ್ಮ ಅನ್ಯಾಯಗಳ ಸಂಕೇತ ಕೂಡ.

“ಪಂಚಾಯ್ತಿಯ ಜನ ಬಹಳ ಮಾತಾಡಿಕೊಳ್ಳುತ್ತಾರೆ. ಗುಂಡಗೆ ಕಪ್ಪಗಿರುವ ಜೀವನ ರಾಮು ವ್ಯಂಗ್ಯ ಚಿತ್ರ ಬರೆಯುವವನಿಗೆ ಹಬ್ಬವಾಗಬಲ್ಲ, ಈತನನ್ನು ಬಿಳಿ ಹಾಳೆಯ ಮೇಲೆ ಕಪ್ಪು ಇಂಕು ಚೆಲ್ಲಿ ಎರಡು ಕಣ್ಣು ಬರೆದು ಬಿಳಿ ಟೋಪಿ ಹಾಕಿ ತಮಾಷೆ ಮಾಡುವುದು ಸುಲಭ. ಆದರೆ ಈ ಕಪ್ಪು ಆಕಾರದ ಹಿಂದೆ ಅರ್ಧಶತಮಾನದ ಅನುಭವ ಇದೆ. ಕೋಟ್ಯಂತರ ಕಪ್ಪು, ಜನರ ನೋವು ಇದೆ. ಗಾಂಧೀಜಿ ಅನುಭವಿಸಿದ ದುರಂತವಿದೆ. ವೇದೋಪನಿಷತ್ತು ಹೇಳಿ ಮೋಸ ಮಾಡಿದವರ, ಸುಲಿದು ಉಂಡವರ ಅಟ್ಟಹಾಸದ ನೆನಪುಗಳಿವೆ. ಚರಣಪ್ಪನಂತ ಕಟ್ಟೆ ಮುಖಂಡರ ತಾತ್ಸಾರ ಮತ್ತು ಶೋಷಣೆ ಇದೆ. ಯಜಮಾನ ಸಂಜೀವಿಯಂಥವರ ಪಿತೂರಿ ಮತ್ತು ಸೇಡುಗಳ ಬರೆ ಸ್ಪಷ್ಟವಾಗಿದೆ. ಜಾತಿ, ವರ್ಗಗಳ ಕೊಲೆಗಡುಕ ಚೌಕಟ್ಟು ನಮ್ಮೆಲ್ಲರ ಕಣ್ಣು ಕುಕ್ಕುವಷ್ಟು ಸರಳವಾಗಿ ಎದ್ದು ಕಾಣುತ್ತಿದೆ.

ಈ ಸುದ್ದಿ ಓದಿದ್ದೀರಾ?: ತಾಯಿ ಮೇಲೆ ಆಣೆಯಿಟ್ಟ ಬೊಮ್ಮಾಯಿಯಿಂದ ಪಂಚಮಸಾಲಿಗಳಿಗೆ ಮೋಸ; ಸ್ವಾಮೀಜಿಯೇಕೆ ಹೀಗೆ ಮಾಡಿದರು?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೀವನರಾಮು ಈಗಲಾದರೂ ತನ್ನ ದಾರಿ ಕಂಡುಕೊಳ್ಳಬೇಕು. ಛೇರ್ಮನ್‌ಗಿರಿಯಿಂದ ಅಲ್ಲೊಂದು ಇಲ್ಲೊಂದು ಚರಂಡಿ ತೋಡಿಸಿ ರಸ್ತೆ ಸರಿ ಮಾಡಬಹುದು. ಆದರೆ ಈ ಪಂಚಾಯ್ತಿಯ ಕಪ್ಪು ಜನರ ಹೃದಯಗಳ ನೋವನ್ನು ಒಂದುಗೂಡಿಸಿದರೆ ಮಾತ್ರ ಆತನ ಬದುಕಿಗೆ ಮತ್ತು ಅವನ ಶತ್ರುಗಳೆನ್ನಿಸಿಕೊಂಡ ಖಳರೆಲ್ಲರ ಬದುಕಿಗೆ ಅರ್ಥ ಬರುತ್ತದೆ. ಮೂವತ್ತು ವರ್ಷಗಳ ಮರಳು ರಾಜಕೀಯದಿಂದ ಅಲ್ಲ, ಜೀವನ ರಾಮುವಿನ ಎರೆಮಣ್ಣಿನ ರಾಜಕೀಯದಿಂದ ಒಳ್ಳೆಯದಾಗುತ್ತದೆ. ಈ ನೆಲಕ್ಕಿನ್ನೂ ಜೀವ ಬರಿಸುವ ಶಕ್ತಿ ಉಳಿದಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ. ಗಾಳಿಯಲ್ಲಿ ಓಡಾಡುವ ಮೇಲುವರ್ಗದ ಜನಕ್ಕೆ ಕಾಣದ ಇದ್ದದ್ದು ಈ ಮಣ್ಣಿನ ಕಂದಮ್ಮನಿಗೆ ಕಾಣಬೇಕಾಗುತ್ತದೆ. ನಮ್ಮ ಕಪ್ಪು ಮುಖದ ಮಗುವಿನಂಥ ರಾಮುವಿನಲ್ಲಿ ಇನ್ನೂ ಸಾಕಷ್ಟು ಜೀವನದ್ರವ್ಯ ಇದೆಯೆಂದು ಆಶಿಸೋಣ. ಈತನ ನೋವಿನಲ್ಲಿ ಭಾಗಿಗಳಾಗೋಣ. ನಮ್ಮ ರಾಮು ತನ್ನ ಸ್ಪರ್ಧೆಯಲ್ಲಿ ಸೋತರೂ ಅದಕ್ಕಿರುವ ನಿಜವಾದ ಗೆಲುವಿನ ಬಗ್ಗೆ ಆಶಾವಾದಿಗಳಾಗೋಣ. ರಾಮುವಿನ ಬಗ್ಗೆ ಬರೆಯುವಾಗ ನನ್ನಲ್ಲಿ ವ್ಯಂಗ್ಯ ಸತ್ತು ಕಣ್ಣಂಚಿನಲ್ಲಿ ನೀರು ಕಾಣಿಸಿಕೊಳ್ಳುತ್ತಿದೆ. ಇದು ಖಂಡಿತ ಕರುಣೆ ಅಥವಾ ತೊಟ್ಟಿ ಅನುಕಂಪದ್ದಲ್ಲ. ಈ ಗಾಂಧೀಜಿಯ ನೆಲದ ಅನ್ಯಾಯ ದಿಂದ ಹೊರಟದ್ದು.”

– ಪಿ.ಲಂಕೇಶ್

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂದುತ್ವದಲ್ಲಿ ಬಂಟ, ಬಿಲ್ಲವರ ಬದುಕು-ಮರಣಕ್ಕೆ ಸಮಾನ ಗೌರವ ಸಿಕ್ಕಿತ್ತಾ ?

ಕೊಲೆ ಮಾಡುವ ತಲವಾರಿಗೆ ಬಂಟ-ಬಿಲ್ಲವ ಎಂಬುದು ಗೊತ್ತಾಗುತ್ತೋ ಇಲ್ವೋ ! ಬಂಟ-...

ಈ ದಿನ ವಿಶೇಷ | ಬ್ರಾಹ್ಮಣರ ಮಾರಣಹೋಮಕ್ಕೆ ಪೆರಿಯಾರ್‌ ಕರೆ ನೀಡಿದ್ದರೆ?

ಜಾತಿವಾದವನ್ನು ಸದಾ ಪ್ರಶ್ನಿಸುವ ಪೆರಿಯಾರ್‌ ಅವರ ಚಿಂತನೆಯ ಇರುವಿಕೆ ಮತ್ತು ಪ್ರಗತಿಪರ...

ಕರ್ನಾಟಕ ಸಂಗೀತ ಪ್ರಕಾರದ ಮುಗಿಯದ ಯುದ್ಧಗಳು ಮತ್ತು ಹಿಡನ್ ಅಜೆಂಡಾ

ಪ್ರಶಸ್ತಿಯ ವಿಚಾರ ದಿನೇ ದಿನೇ ದೊಡ್ಡದಾಗುತ್ತ ಸಾಗಿದೆ. ಅಕಾಡೆಮಿಯನ್ನೇ ಬಹಿಷ್ಕರಿಸುವ ಮಾತುಗಳು...

ಹೊಸ ಓದು | ಕಾವ್ಯದ ತಿರುಳು ಕಡೆದ ಬೆಣ್ಣೆಯಂತೆ ತೇಲಿಬಂದು ಓದುಗನ ಹೃದಯ ತಟ್ಟುವ ಬಾಶೋ ಹಾಯ್ಕು

ಬಾಶೋ ನಮ್ಮನ್ನು ಕಾವ್ಯದ ತಿರುಳನ್ನು ಅರಸಲು ಪ್ರೇರೇಪಿಸುತ್ತಾನೆ. ತಿರುಳೇ ಕಾವ್ಯದ ಇರುವಿಕೆ....