ಧಾರವಾಡ | ಅವಳಿ ನಗರಗಳಲ್ಲಿ ಅನಧಿಕೃತ ಬ್ಯಾನರ್‌ ತೆರವು ಅಭಿಯಾನ

Date:

ಗೋಡೆಗಳು, ಕಾಂಪೌಂಡ್‌ಗಳು ಮತ್ತು ಇತರ ಪ್ರಮುಖ ಸ್ಥಳಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾಗಿರುವ ಅಕ್ರಮ ರಾಜಕೀಯ ಪೋಸ್ಟರ್‌ಗಳನ್ನು ತೆಗೆದುಹಾಕುವ ಅಭಿಯಾನವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಚುರುಕುಗೊಳಿಸಿದೆ. ಜಿಲ್ಲಾ ಚುನಾವಣಾ ಅಧಿಕಾರಿಯ ನಿರ್ದೇಶನದ ಮೇರೆಗೆ ಅವಳಿ ನಗರದ ಎಲ್ಲ ಬ್ಯಾನರ್‌ಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲ ಪಕ್ಷದ ನಾಯಕರು ಅನುಮತಿಯಿಲ್ಲದೆ ಬ್ಯಾನರ್‌ಗಳನ್ನು ಹಾಕುತ್ತಿದ್ದಾರೆ. ಎಚ್‌ಡಿಎಂಸಿ ಎಲ್ಲ 12 ವಲಯ ಸಹಾಯಕ ಆಯುಕ್ತರಿಗೆ ಆಯಾ ವಲಯಗಳಲ್ಲಿ ಇಂತಹ ಅಕ್ರಮ ಫ್ಲೆಕ್ಸ್‌ಗಳನ್ನು ನಿಗ್ರಹಿಸಲು ನಿರ್ದೇಶನ ನೀಡಿದೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ, ಎಲ್ಲ ಪಕ್ಷದ ನಾಯಕರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲು ನಗರಗಳಿಗೆ ಬರುತ್ತಿರುವುದರಿಂದ ಫ್ಲೆಕ್ಸ್‌ಗಳು ಹೆಚ್ಚುತ್ತಿವೆ. ಅಲ್ಲದೆ ಟಿಕೆಟ್ ಆಕಾಂಕ್ಷಿಗಳು ತಮಗೆ ಬೇಕಾದ ಕಡೆ ಫ್ಲೆಕ್ಸ್‌ಗಳನ್ನು ಹಾಕುತ್ತಿದ್ದಾರೆ. ಹೀಗಾಗಿ, ರಾಜಕೀಯ ನಾಯಕರ ಚಿತ್ರವಿರುವ ಬಂಟಿಂಗ್ಸ್, ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ಸಂಖ್ಯೆ ನಗರದಾದ್ಯಂತ ಹೆಚ್ಚುತ್ತಿವೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 700 ಮತ್ತು ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ 600 ಬ್ಯಾನರ್‌ಗಳನ್ನು ಹಾಕಲಾಗಿದೆ ಎಂದು ತಿಳಿದುಬಂದಿದೆ.

“ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಇತ್ಯಾದಿಗಳನ್ನು ತೆರವುಗೊಳಿಸಿ ನಗರದಲ್ಲಿ ಸ್ವಚ್ಛತೆ ಕಾಪಾಡುವ ಅಭಿಯಾನವನ್ನು ಆರಂಭಿಸಲಾಗಿದೆ” ಎಂದು ಪಾಲಿಕೆಯ ಹೆಚ್ಚುವರಿ ಆಯುಕ್ತ ಶಂಕರಾನಂದ ಬನಶಂಕರಿ ತಿಳಿಸಿದ್ದಾರೆ.

“ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅನಧಿಕೃತ ಬ್ಯಾನರ್‌ಗಳು, ಬಂಟಿಂಗ್‌ಗಳು, ಫ್ಲೆಕ್ಸ್‌ಗಳು, ಗೋಡೆಚಿತ್ರಕಲೆ ಮತ್ತು ಪೋಸ್ಟರ್‌ಗಳನ್ನು 24 ಗಂಟೆಗಳಲ್ಲಿ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ” ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಉಪ ಆಯುಕ್ತ (ಕಂದಾಯ) ಆನಂದ್ ಕಲ್ಲೋಳಿಕರ್ ಹೇಳಿದ್ದಾರೆ.

ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಎಚ್‌ಡಿಎಂಸಿ ಮಾರ್ಚ್ 16ರಂದು ಅಭಿಯಾನವನ್ನು ಆರಂಭಿಸಿದ್ದು, ಈವರೆಗೆ ಅವಳಿ ನಗರಗಳಲ್ಲಿ 3,000 ಕ್ಕೂ ಹೆಚ್ಚು ಫ್ಲೆಕ್ಸ್‌ಗಳು, ಬ್ಯಾನರ್‌ಗಳು ಮತ್ತು ಇತರ ಪ್ರದರ್ಶನಗಳನ್ನು ತೆರವುಗೊಳಿಸಿದ್ದೇವೆ. ಬ್ಯಾನರ್‌ಗಳನ್ನು ಹಾಕಬೇಕಾದರೆ  ಜನರು ಅನುಮತಿ ಪಡೆಯುವಂತೆ ಸಮಿತಿಯನ್ನು ರಚಿಸಲಾಗಿದೆ” ಎಂದು ಹೇಳಿದರು.  

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ...

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ದಕ್ಷಿಣ ಕನ್ನಡ ಜಿಲ್ಲೆಯ ನೈತಿಕ ಪೊಲೀಸ್‌ ಗಿರಿಗೆ ಅಂತ್ಯ ಹಾಡುತ್ತೇವೆ: ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿಯಾದ ಸಚಿವ ಡಿಜಿಆರ್ ಇಲ್ಲಿನ ಜನ...