ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಅನರ್ಹ

Date:

  • 2019ರಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ವ್ಯಕ್ತಿ
  • ಚುನಾವಣಾ ವೆಚ್ಚ ನೀಡಲು ವಿಫಲ ಹಿನ್ನೆಲೆಯಲ್ಲಿ ಅನರ್ಹ

ಕೇರಳದ ವಯನಾಡು ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಸರಿನ ಮತ್ತೊಬ್ಬ ವ್ಯಕ್ತಿಯನ್ನು ಚುನಾವಣಾ ಆಯೋಗ ಅನರ್ಹಗೊಳಿಸಿದೆ ಎಂದು ಶುಕ್ರವಾರ (ಮಾರ್ಚ್ 31) ವರದಿಯಾಗಿದೆ.

ಮಾನಹಾನಿ ಪ್ರಕರಣದಲ್ಲಿ ಗುಜರಾತ್ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ನಂತರ ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಲೋಕಸಭೆ ಅನರ್ಹಗೊಳಿಸಿತ್ತು.

ಆದರೆ ಕೇರಳದ ವಯನಾಡು ಕ್ಷೇತ್ರದಿಂದ 2019ರಲ್ಲಿ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಅವರ ಹೆಸರಿನ ಮತ್ತೊಬ್ಬ ವ್ಯಕ್ತಿಯನ್ನು ಕೇಂದ್ರ ಚುನಾವಣಾ ಆಯೋಗ ಅನರ್ಹ ಮಾಡಿದ್ದು, ಹೆಚ್ಚು ಸುದ್ದಿಯಾಗಿಲ್ಲ. ವಲ್ಸಮ್ಮ ಅವರ ಪುತ್ರ ರಾಹುಲ್ ಗಾಂಧಿ ಕೆ ಇ ಹೆಸರಿನ ಅಭ್ಯರ್ಥಿಯನ್ನು ಭವಿಷ್ಯದ ಚುನಾವಣೆಗಳಿಂದ ನಿಷೇಧ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುನಾವಣೆಗೆ ಮಾಡಿರುವ ಖರ್ಚು- ವೆಚ್ಚಗಳನ್ನು ನೀಡಲು ವಿಫಲವಾದ ಹಿನ್ನಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಂಡ ವ್ಯಕ್ತಿಗಳ ಚುನಾವಣಾ ಆಯೋಗದ ಪಟ್ಟಿಯಲ್ಲಿ ವಲ್ಸಮ್ಮ ಅವರ ಪುತ್ರ ರಾಹುಲ್ ಗಾಂಧಿ ಅವರ ಹೆಸರೂ ಕಾಣಿಸಿಕೊಂಡಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಕೆ ಇ ಕೇರಳದ ವಯನಾಡ್ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇವರು 2,196 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 7 ಲಕ್ಷ ಮತಗಳ ಅಂತರದ ದಾಖಲೆಯ ಗೆಲುವು ಕಂಡಿದ್ದರು.

ಪ್ರಬಲ ಹಾಗೂ ಖ್ಯಾತ ನಾಯಕರ ವಿರುದ್ಧ ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸುವುದು ಸಾಮಾನ್ಯ. ಆದರೆ ಅವರೆಲ್ಲರೂ ಚುನಾವಣಾ ಆಯೋಗದ ನಿಯಮಗಳು ಮತ್ತು ಪ್ರಜಾಪ್ರತಿನಿಧಿ ಕಾಯಿದೆಯ ಅಡಿಯಲ್ಲಿ ಇತರ ಕಡ್ಡಾಯ ಅವಶ್ಯಕತೆಗಳ ಜೊತೆಗೆ ಚುನಾವಣಾ ಮಾಡಿರುವ ವೆಚ್ಚಗಳ ವಿವರಗಳನ್ನು ಸಲ್ಲಿಸಬೇಕಾಗುತ್ತದೆ. ಈ ವಿಷಯದಲ್ಲಿ ರಾಹುಲ್‌ ಕೆ ಇ ಅವರು ವಿಫಲರಾಗಿದ್ದರು.

ಮಾರ್ಚ್ 29ರಂದು, ಚುನಾವಣಾ ಸಮಿತಿಯು ಪ್ರಜಾಪ್ರತಿನಿಧಿ ಕಾಯಿದೆ, 1951ರ ಸೆಕ್ಷನ್ 10ಎ ಅಡಿಯಲ್ಲಿ ಅನರ್ಹಗೊಂಡ ವ್ಯಕ್ತಿಗಳ ನವೀಕರಿಸಿದ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಕೊಟ್ಟಾಯಂನ ನಿವಾಸಿ ವಲ್ಸಮ್ಮ ಅವರ ಪುತ್ರ ರಾಹುಲ್ ಕೆ ಇ ಅವರನ್ನು 2021ರ ಸೆಪ್ಟೆಂಬರ್ 13 ರಿಂದ 2024ರ ಸೆಪ್ಟೆಂಬರ್ 13 ರವರೆಗೆ ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಕ್ಷನ್ 10ಎ ಅಡಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ ನಂತರ ಚುನಾವಣಾ ವೆಚ್ಚದ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲು ವಿಫಲರಾದ ಅಭ್ಯರ್ಥಿಗಳನ್ನು ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗುತ್ತದೆ. ಕಾಂಗ್ರೆಸ್ ನಾಯಕ ರಾಹುಲ್‌ ಅವರ ಹೆಸರು ಪಟ್ಟಿಯಲ್ಲಿ ಇರಲಿಲ್ಲ.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ನಂತರ ಮಾರ್ಚ್ 23 ರಂದು ಅವರನ್ನು ಅನರ್ಹಗೊಳಿಸಲಾಗಿದ್ದರೂ ವಿಚಾರಣಾ ನ್ಯಾಯಾಲಯ, ಕಾನೂನು ಪರಿಹಾರವನ್ನು ಪಡೆಯಲು ಅವರಿಗೆ 30 ದಿನಗಳ ಕಾಲಾವಕಾಶವನ್ನು ನೀಡಿದೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ನೀಡಬೇಕಾಗಿಲ್ಲ ಎಂದ ಗುಜರಾತ್ ಹೈಕೋರ್ಟ್; ಕೇಜ್ರಿವಾಲ್‌ಗೆ ₹25 ಸಾವಿರ ದಂಡ

ಅನರ್ಹತೆಯ ಬಗ್ಗೆ ಪ್ರಶ್ನಿಸಿದಾಗ, ಅವರು ಹೆಚ್ಚಿನ ವಿವರ ನೀಡಲು ನಿರಾಕರಿಸಿದರು. ತಾವು 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವುದಾಗಿ ರಾಹುಲ್‌ ಕೆ ಇ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1950ರ ಕೇಂದ್ರ ಬಜೆಟ್ ಸೋರಿಕೆ: ನಡೆದಿದ್ದೇನು, ಪರಿಣಾಮವೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಸತತ ಏಳನೇ...

ನಾಲ್ಕು ಕೃಷಿ ಡಿಪ್ಲೊಮಾ ಕಾಲೇಜು ಪುನರಾರಂಭಕ್ಕೆ ಮರು ಅನುಮತಿ ನೀಡಿದ ಸರ್ಕಾರ

ಕಳೆದ ಸರ್ಕಾರದ ಅವದಿಯಲ್ಲಿ ತಡೆಹಿಡಿಯಲಾಗಿದ್ದ ವಿವಿಧ ಕೃಷಿ ವಿವಿ ವ್ಯಾಪ್ತಿಯ ನಾಲ್ಕು...

ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ...

ಕೇದಾರನಾಥ ದೇಗುಲದಿಂದ 228 ಕೆಜಿ ಚಿನ್ನ ನಾಪತ್ತೆ: ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ

"ಕೇದಾರನಾಥ ದೇವಸ್ಥಾನದಲ್ಲಿದ್ದ ಚಿನ್ನ ನಾಪತ್ತೆಯಾಗಿದೆ, 228 ಕೆಜಿ ಚಿನ್ನದ ಹಗರಣ ನಡೆದಿದೆ. ಆದರೆ...