ʼಅಲ್ಲಾಡ್ಸು.. ಅಲ್ಲಾಡ್ಸು..ʼ ಸಿನಿಮಾ ಹಾಡಿನಂತೆ ಸಿದ್ದರಾಮಯ್ಯ ಸಿಎಂ ಕುರ್ಚಿ ಪರಿಸ್ಥಿತಿ: ಬೊಮ್ಮಾಯಿ ವ್ಯಂಗ್ಯ

Date:

Advertisements
  • ಸಿದ್ದರಾಮಯ್ಯ ಸಿಎಂ ಆಗಿ ಐದು ವರ್ಷ ಇರುತ್ತಾರಾ ಎಂಬುದು ಸಚಿವರಿಗೆ ಅನುಮಾನ
  • ಕಾಂಗ್ರೆಸ್‌ ಸೇಡಿನ ರಾಜಕಾರಣ ಆರಂಭಿಸಿದೆ: ಬಸವರಾಜ ಬೊಮ್ಮಾಯಿ ಆರೋಪ

ರಾಜ್ಯದ ಜನತೆಗೆ ಸುಳ್ಳು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ವಾರಂಟಿಯೇ ಮುಗಿಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸೇಡಿನ ರಾಜಕಾರಣವನ್ನು ಕಾಂಗ್ರೆಸ್ ಆರಂಭಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, “ಅಧಿಕಾರಕ್ಕೆ ಬಂದ ಮಾತ್ರಕ್ಕೆ ಏನು ಬೇಕೋ ಅದನ್ನು ಮಾಡಲು ಆಗಲ್ಲ. ಅಧಿಕಾರದಲ್ಲಿ ಇರುವ ಪಕ್ಷದ ನಿರ್ದೇಶನದಂತೆ ಪೊಲೀಸರು ನಡೆದುಕೊಳ್ಳಬಹುದು. ಆದರೆ, ಅವರಿಗೆ ಕಾನೂನು – ಸಂವಿಧಾನವೇ ತಂದೆ-ತಾಯಿ ಇದ್ದಂತೆ. ಅದನ್ನು ಬಿಟ್ಟು ಪೊಲೀಸರು ಏನೂ ಮಾಡಲು ಆಗಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಗಲಾಟೆ ಮಾಡುವ ಪರಿಪಾಠ ನಡೆದಿದೆ. ನಾವು ಕಾರ್ಯಕರ್ತರ ಜತೆಗೆ ಇರುತ್ತೇವೆ. ಯಾರೂ ಎದೆಗುಂದಬೇಕಿಲ್ಲ” ಎಂದರು.

ಸೋಲು ಗೆಲುವು ಸಾಮಾನ್ಯ

Advertisements

“ಚುನಾವಣೆಯಲ್ಲಿ ಸೋಲು – ಗೆಲುವು ಸಾಮಾನ್ಯ. ಗೆದ್ದಾಗ ದೊಡ್ಡ ಮನುಷ್ಯರ ರೀತಿ ಇರಬೇಕು. ಸೋತಾಗ ಗಟ್ಟಿ ಮನುಷ್ಯರಾಗಿ ಇರಬೇಕೆಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ನಮ್ಮ ಕಾರ್ಯಕರ್ತರು ಯಾರೂ ಎದೆಗುಂದಬೇಕಿಲ್ಲ. ಒಂದು ಚುನಾವಣೆಯಲ್ಲಿ ಸೋತರೆ, ಯಾವುದೇ ನಾಯಕರ ಭವಿಷ್ಯ ಅಥವಾ ಹಣೆಬರಹ ಬದಲಾಗಲ್ಲ. ಇಂದಿನ ಸೋಲು ನಾಳೆಯ ಯಶಸ್ಸಿನ ಮೆಟ್ಟಿಲು ಎಂದು ಎಲ್ಲರೂ ಭಾವಿಸೋಣ” ಎಂದು ಹೇಳಿದರು.

“ರಾಜಕಾರಣಿಗಳು, ಕೇವಲ ಅಧಿಕಾರಕ್ಕಾಗಿ ಮಾತ್ರ ರಾಜಕೀಯ ಮಾಡಬಾರದು. ರಾಜಕಾರಣದಲ್ಲಿ ಎರಡು ರೀತಿ ಇದೆ. ಒಂದು ಅಧಿಕಾರಕ್ಕಾಗಿ, ಇನ್ನೊಂದು ಜನರಿಗಾಗಿ. ಅಧಿಕಾರಕ್ಕಾಗಿ ರಾಜಕೀಯ ಮಾಡಿದರೆ, ನಾನು ಏನು ಮಾಡಿದೆ, ನೀನು ಏನು ಮಾಡಿದೆ ಎಂಬ ಪ್ರತಿಷ್ಠೆ ಬರುತ್ತದೆ. ಅದೇ ಜನರಿಗಾಗಿ ರಾಜಕೀಯ ಮಾಡಿದರೆ, ಸೇವೆ ಒಂದೇ ಮುಖ್ಯವಾಗುತ್ತದೆ. ಬಾಗಲಕೋಟೆ, ಸಕ್ಕರೆ ನಾಡು. ಇಲ್ಲಿನ ಜನರು ಸಿಹಿ ರಸಕೊಡುವ ಕಬ್ಬಿನಂತೆ. ಆಂತರಿಕ ಸಮಸ್ಯೆ ಇರುತ್ತವೆ. ಅವುಗಳನ್ನು ಬದಿಗಿಟ್ಟು ಮುನ್ನಡೆಯೋಣ. ಯಾರೂ ಸೋಲಿಸುವ ಕೆಲಸ ಮಾಡಬಾರದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರನ್ನು ಅಪಹಾಸ್ಯ ಮಾಡಿದರೆ, ಪರಿಣಾಮ ಎದುರಿಸಬೇಕಾದೀತು

ಅಲ್ಲಾಡ್ಸು ಹಾಡಿನಂತಾದ ಸಿದ್ದು ಕುರ್ಚಿ

“ರಾಜ್ಯದ ಜನರಿಗೆ ಐದು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಒಂದು ಗ್ಯಾರಂಟಿ ಕೂಡ ಸರಿಯಾಗಿ ಈಡೇರಿಸಲು ಆಗಿಲ್ಲ. ಸಿದ್ದರಾಮಯ್ಯ ಸಿಎಂ ಆದ ತಕ್ಷಣ ವಿಜಯಪುರದ ಸಚಿವರೊಬ್ಬರು, ಸಿದ್ದು ಐದು ವರ್ಷ ಸಿಎಂ ಎಂದು ಹೇಳಿದರು, ಹಾಗೆಯೆ ಮೈಸೂರು ಭಾಗದ ಸಚಿವರೊಬ್ಬರು ಹೇಳಿದರು. ಐದು ವರ್ಷ ಸಿದ್ದು ಸಿಎಂ ಆಗಿರೋದು ಅವರ ಸಚಿವ – ಶಾಸಕರಲ್ಲೇ ಸಂಶಯ ಬಂದಿದೆ. ಹೀಗಾಗಿ ಇದು 6ನೇ ಗ್ಯಾರಂಟಿಯಾಗಿ ಸಿದ್ದು ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳುತ್ತ ಹೊರಟಿದ್ದಾರೆ. ʼಅಲ್ಲಾಡ್ಸು.. ಅಲ್ಲಾಡ್ಸು..ʼ ಎಂಬ ಸಿನೆಮಾ ಹಾಡಿನಂತೆ, ಸಿದ್ದರಾಮಯ್ಯ ಅವರ ಸಿಎಂ ಕುರ್ಚಿಯ ಪರಿಸ್ಥಿತಿ” ಎಂದು ವ್ಯಂಗ್ಯವಾಡಿದರು.

ಸಂತ್ರಸ್ತರೊಂದಿಗೆ ಹೋರಾಟ

“ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಮಿ ಕಳೆದುಕೊಂಡ ರೈತರು, ಏಕರೂಪದ ದರ ಕೊಡಿ ಎಂದು 2013ರಿಂದ 2018ರ ವರೆಗೆ ಹೋರಾಟ ಮಾಡಿದರೂ ಕಾಂಗ್ರೆಸ್‌ನವರು ಸ್ಪಂದಿಸಲಿಲ್ಲ. ಕೃಷ್ಣೆಯ ಕಡೆಗೆ ನಡಿಗೆ ಮಾಡಿ, ಅಧಿಕಾರ ಅನುಭವಿಸಿ ಓಡಿ ಹೋದರು. ಒಂದು ಸಭೆಯನ್ನೂ ಸಂತ್ರಸ್ತರೊಂದಿಗೆ ಮಾಡಲಿಲ್ಲ. ನಾನು ಸಿಎಂ ಆದ ಬಳಿಕ ಮೂರು ಸಭೆ ನಡೆಸಿ, ಸಂತ್ರಸ್ತರಿಗೆ ಏಕರೂಪದ ದರ ಘೋಷಣೆ ಮಾಡಿ, ಪರಿಹಾರ ನೀಡಲು 5 ಸಾವಿರ ಕೋಟಿ ಮೀಸಲಿಟ್ಟಿದ್ದೆವು. ಈಗಿನ ಕಾಂಗ್ರೆಸ್ ಸರ್ಕಾರ, ಸಂತ್ರಸ್ತರಿಗೆ ಏಕರೂಪದ ದರ ಕೊಡಲೇಬೇಕು. ಅದು 25 ರಿಂದ 35 ಸಾವಿರ ಕೋಟಿ ರೂ ಆದರೂ ಸಂತ್ರಸ್ತರಿಗೆ ಕೊಡಬೇಕು. ಇಲ್ಲದಿದ್ದರೆ ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ ಸಂತ್ರಸ್ತರೊಂದಿಗೆ ನಾವು ಹೋರಾಟಕ್ಕಿಳಿಯಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X