ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ನಿಧನ, ಗಣ್ಯರ ಸಂತಾಪ

Date:

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93) ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಪಿ.ರಾಮಯ್ಯ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ನಿನ್ನೆ (ಫೆ.10) ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

- Advertisement -

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ನಿಧನರಾದ ಬಗ್ಗೆ ಅವರ ಪುತ್ರ ಡಾ. ಬಾಲಾಜಿ ಮಾಹಿತಿ ನೀಡಿದ್ದಾರೆ. 1933 ಸೆಪ್ಟೆಂಬರ್ 12 ರಂದು ಜನಿಸಿದ್ದ ಪತ್ರಕರ್ತರಾಗಿ ಹಾಗೂ ರಾಜಕಾರಣಿಯಾಗಿ ಉತ್ತಮ ಸೇವೆ ನೀಡಿದ್ದಾರೆ. ರಾಮಯ್ಯ ಅವರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/17ನೇ ಮೇನ್ 16ನೇ ಕ್ರಾಸ್ ಇಡಲಾಗುವುದು ಎಂದು ಅವರ ಸೋದರಳಿಯ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರಾಗಿರುವ ಗಿರೀಶ್ ಲಿಂಗಣ್ಣ ಅವರು ಮಾಹಿತಿ ನೀಡಿದ್ದಾರೆ.

ʼಹಿಂದೂ ರಾಮಯ್ಯʼ ಎಂದೇ ಹೆಸರಾಗಿದ್ದ ಪಿ. ರಾಮಯ್ಯನವರು, ʼದಿ ಹಿಂದೂʼ ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಹಾಗೂ ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಸತ್ಯ ಮತ್ತು ಪ್ರಾಮಾಣಿಕತೆಗೆ ಬದ್ಧರಾಗಿದ್ದ ಇವರನ್ನು ‘ಪತ್ರಿಕೋದ್ಯಮದ ತಪಸ್ವಿ’ ಎಂದು ಕರೆಯಲಾಗುತ್ತದೆ. ಇವರ ಅನುಭವ ಕಥನ “ನಾನು ಹಿಂದೂ ರಾಮಯ್ಯ” ಕೃತಿಯು ಇವರ ಬದ್ಧತೆಯನ್ನು ಎತ್ತಿಹಿಡಿಯುತ್ತದೆ. ಪಿ. ರಾಮಯ್ಯನವರು ತಮ್ಮ ವೃತ್ತಿ ಜೀವನದಲ್ಲಿ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿನ ಸಂಪರ್ಕಗಳನ್ನು ಬಳಸಿ, ಸರ್ಕಾರದ ನೀತಿ ನಿರೂಪಣೆಗೆ ಕೊಡುಗೆ ನೀಡಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.

ಪಿ.ರಾಮಯ್ಯ ನಿಧನಕ್ಕೆ ಗಣ್ಯರ ಸಂತಾಪ

ನಾಡಿನ ಹಿರಿಯ ಪತ್ರಕರ್ತ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ. ರಾಮಯ್ಯ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿತೈಷಿ ಹಾಗೂ ಚಿರಕಾಲದ ಮಿತ್ರರಾಗಿದ್ದ ರಾಮಯ್ಯನವರನ್ನು ಕಳೆದುಕೊಂಡ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವಾಗಿದೆ’ ಟ್ವೀಟ್ ಮೂಲಕ ಎಂದು ಅವರು ಸ್ಮರಿಸಿದ್ದಾರೆ. ‘ದಿ ಹಿಂದೂ’ ಪತ್ರಿಕೆಯ ವರದಿಗಾರರಾಗಿ ಹಾಗೂ ಜನಪ್ರತಿನಿಧಿಯಾಗಿ ಅವರು ಸಲ್ಲಿಸಿದ ಅಪಾರ ಸೇವೆಯನ್ನು ಕೊಂಡಾಡಿರುವ ಗೌಡರು, ಅವರ ನಿಧನದಿಂದ ಪತ್ರಿಕೋದ್ಯಮದ ಪ್ರಬಲ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಹಿರಿಯ ಪತ್ರಕರ್ತರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. “ದಿ ಹಿಂದೂ ಪತ್ರಿಕೆಯಲ್ಲಿ ಐದು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ರಾಮಯ್ಯ ಅವರು ನನ್ನ ಹಿತಚಿಂತಕರಾಗಿದ್ದರು. ಇತಿಹಾಸ, ರಾಜಕೀಯ ಮತ್ತು ಸಂಸ್ಕೃತಿಯ ಬಗ್ಗೆ ಅವರಿಗಿದ್ದ ಅಪಾರ ಜ್ಞಾನ ಬೆರಗುಗೊಳಿಸುವಂತಿತ್ತು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ,” ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.

ಪಿ.ರಾಮಯ್ಯ ಅವರ ನಿಧನದಿಂದ ದು:ಖಿತನಾಗಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್​, ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...