ಮೈಸೂರಿನ ಮುಡಾದಲ್ಲಿ ₹4 ಸಾವಿರ ಕೋಟಿ ಗುಳುಂ: ಆರ್‌ ಅಶೋಕ್‌ ಆರೋಪ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಆರೋಪಿಸಿದ್ದಾರೆ.

- Advertisement -

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ ನವರೇ, ನನ್ನ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ” ಎಂದು ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?

ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?

4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?

50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?, ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?

ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು? ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...