ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ರೂ. ಸಹಾಯಧನ: ಡಿಸಿಎಂ ಡಿ.ಕೆ.ಶಿವಕುಮಾರ್

Date:

Advertisements
  • ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ)
  • ನ.25-26ರಂದು ಬೆಂಗಳೂರಲ್ಲಿ ಮೊದಲ ಬಾರಿಗೆ ನಡೆಯಲಿದೆ ‘ನಮ್ಮ ಕಂಬಳ’

’20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು. ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ಬೆಳಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ) ನೆರವೇರಿಸಿ ಮಾತನಾಡಿದ ಅವರು, ‘ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾಜಗಳ ಸಂಘಟನೆಗೆ ಒಂದು ನೆಲೆ ಬೇಕು ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದು, ಎಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ’ ಎಂದು ಹೇಳಿದರು.

‘ಮನುಷ್ಯನ ಬಳಿ ತೆಗೆದುಕೊಂಡು ಹೋಗಲು ಏನೂ ಇಲ್ಲ, ತನ್ನ ಬಳಿ ಇರುವುದನ್ನೆಲ್ಲಾ ಬಿಟ್ಟು ಹೋಗಲೇಬೇಕು. ಆದರೆ ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕರಾದ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ’ ಎಂದರು.

Advertisements

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

‘ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋದ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ’ ಎಂದರು.

ಈ ದೇಶಕ್ಕೆ ದೊಡ್ಡ ಆಸ್ತಿಯೇ ನಮ್ಮ ಸಂಸ್ಕೃತಿ. ಅದೇ ರೀತಿ ದಕ್ಷಿಣ ಕನ್ನಡ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ದಕ್ಷಿಣ ಕನ್ನಡದ ಆಚರಣೆ ಬೆಂಗಳೂರಿನಲ್ಲೂ ನಡೆಯಬೇಕು ಎನ್ನುವ ಸಾಕ್ಷಿಗುಡ್ಡೆಯನ್ನು ಬಿಟ್ಟು ಹೋಗಲು ಎಲ್ಲರೂ ಒಗ್ಗಟ್ಟಾಗಿ ಸೇರಿ ಮಾದರಿ ಕೆಲಸ ಮಾಡುತ್ತಿದ್ದೀರಿ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದು. ಸಾವಿರಾರು ಯುವಕರು ಬೆಂಗಳೂರಿನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ದೇವರು ವರ, ಶಾಪ ಎರಡೂ ನೀಡದೆ ಅವಕಾಶ ನೀಡುತ್ತಾನೆ. ಈ ಅವಕಾಶ ಬಳಸಿಕೊಳ್ಳಿ ಎಂದು ತಿಳಿಸಿದರು.

ದಕ್ಷಿಣ ಕನ್ನಡದ ಜನರು ಅವರ ಸಂಸ್ಕೃತಿ ಉಳಿಸಿಕೊಳ್ಳಲು ಬದ್ದತೆಯಿಂದ ಇಲ್ಲಿ ಸೇರಿದ್ದಾರೆ ನಮ್ಮ ಕಂಬಳ- ಬೆಂಗಳೂರು ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತದೆ. ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ಮುನ್ನಡೆಯಬೇಕು. ಯಾವುದೇ ಅಡಚಣೆಗಳಿಗೆ ಕುಗ್ಗಬಾರದು. ಬೆಂಗಳೂರಿನಲ್ಲಿ ಜರುಗುತ್ತಿರುವ ಐತಿಹಾಸಿಕ ಕಂಬಳಕ್ಕೆ ಸರ್ಕಾರದಿಂದ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X