ಹೋಳಿ ಹಬ್ಬದ ಸಂದರ್ಭ ಜಾಮಾ ಮಸೀದಿ ಸೇರಿ 10 ಸಂಭಲ್ ಮಸೀದಿಗಳಿಗೆ ಟಾರ್ಪಾಲ್!

Date:

ಶುಕ್ರವಾರ ಹೋಳಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸಂಭಲ್‌ನಲ್ಲಿರುವ ಹತ್ತು ಮಸೀದಿಗಳನ್ನು ಟಾರ್ಪಾಲ್‌ನಿಂದ ಮುಚ್ಚಲು ಉತ್ತರ ಪ್ರದೇಶ (ಯುಪಿ) ಆಡಳಿತ ನಿರ್ಧರಿಸಿದೆ.

- Advertisement -

ಮಾರ್ಚ್ 14ರಂದು ಬಣ್ಣಗಳ ಹಬ್ಬವಾದ ಹೋಳಿ ಮತ್ತು ರಂಜಾನ್ ‘ಜುಮ್ಮಾ’ ಇದೆ. ಸುಮಾರು ಅರವತ್ತು ವರ್ಷಗಳಿಗೊಮ್ಮೆ ಎರಡೂ ಒಂದೇ ದಿನ ಬರುತ್ತದೆ ಎಂದು ಹೇಳಲಾಗಿದೆ. ಆದರೆ ಈ ವಿಚಾರದಲ್ಲಿ ಉತ್ತರ ಪ್ರದೇಶದಲ್ಲಿ ತೀವ್ರ ವಿವಾದ ಎದ್ದಿದೆ. ಹೋಳಿ ವರ್ಷಕ್ಕೊಮ್ಮೆ ಬರುವುದು, ಜುಮ್ಮಾ ಪ್ರತಿ ಶುಕ್ರವಾರವೂ ಬರುತ್ತದೆ. ಮುಸ್ಲಿಮರು ಈ ಒಂದು ದಿನ ಮನೆಯಲ್ಲಿಯೇ ಇರಿ ಎಂಬ ಅಸಮರ್ಥನೀಯ ಹೇಳಿಕೆಗಳನ್ನು ಬಿಜೆಪಿ ನಾಯಕರು ನೀಡಿದ್ದಾರೆ. ಇದನ್ನು ವಿರೋಧಿಸಿ ಎಲ್ಲಾ ಧರ್ಮಗಳನ್ನು ಒಂದೇ ತಕ್ಕಡಿಯಲ್ಲಿ ತೂಗಬೇಕಾದ ಸಿಎಂ ಯೋಗಿ ಆದಿತ್ಯನಾಥ್, ಈ ಖಂಡನಾರ್ಹ ಹೇಳಿಕೆಯನ್ನು ಹಾಡಿಹೊಗಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ವಿಜಯಪುರ | ರಂಜಾನ್‌, ಹೋಳಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸ್ ಸಿಪಿಐ ಮಹಮ್ಮದ್‌

ಇದೀಗ ಯುಪಿ ಆಡಳಿತದ ತಯಾರಿ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಸಂಭಲ್ ಎಸ್‌ಪಿ ಶ್ರೀಶ್ ಚಂದ್ರ, “ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮತ್ತು ಎರಡೂ ಸಮುದಾಯಗಳು ತಮ್ಮ ತಮ್ಮ ಹಬ್ಬಗಳನ್ನು ಪೂರ್ಣ ಸಂತೋಷದಿಂದ ಆಚರಿಸಲು ಅನುಕೂಲವಾಗುವಂತೆ ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ” ಎಂದು ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಚೌಪಾಯಿ ಮೆರವಣಿಗೆ ನಡೆಯುವ ಮಾರ್ಗದಲ್ಲಿರುವ ಹತ್ತು ಮಸೀದಿಗಳನ್ನು ಗುರುತಿಸಲಾಗಿದೆ. ಎರಡು ಸಮುದಾಯಗಳ ನಡುವೆ ಯಾವುದೇ ಅಡಚಣೆ ಅಥವಾ ಉದ್ವಿಗ್ನತೆ ಉಂಟಾಗದಂತೆ ನೋಡಿಕೊಳ್ಳಲು ಅವೆಲ್ಲವನ್ನೂ ಮುಚ್ಚಲಾಗುವುದು” ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಹೋಳಿಯಂದು ಮುಸ್ಲಿಮರು ಮನೆಯೊಳಗಿರಿ: ಬಿಹಾರ ಬಿಜೆಪಿ ಶಾಸಕರ ಹೇಳಿಕೆಗೆ ತೇಜಸ್ವಿ ತಿರುಗೇಟು

ಚೌಪಾಯಿ ಎಂದರೆ ಹೋಳಿ ಸಮಯದಲ್ಲಿ ನಡೆಸಲಾಗುವ ಒಂದು ಸಾಂಪ್ರಾದಾಯಿಕ ಪದ್ಧತಿಯಾಗಿದೆ. ಹೋಳಿ ಆಡುತ್ತಾ ಮೆರವಣಿಗೆ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಹಾದುಹೋಗುವ ಆ ಮಸೀದಿಗಳನ್ನು ಮುಚ್ಚಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿ ಕೈಬಿಡಲಾಗದು ಎಂದು ಹೇಳಿಕೊಂಡಿದ್ದಾರೆ.

ಇನ್ನು ಚೌಪಾಯಿ ಮೆರವಣಿಗೆ ಮತ್ತು ಶುಕ್ರವಾರದ ಪ್ರಾರ್ಥನೆಯನ್ನು ನಡೆಸುವ ಸಮಯವನ್ನು ಬದಲಾಯಿಸಲು ಉಭಯ ನಾಯಕರುಗಳು ಒಪ್ಪಂದ ಮಾಡಿಕೊಂಡಿದ್ದಾರೆ. ಇದರಿಂದಾಗಿ ಯಾವುದೇ ಸಮಸ್ಯೆ ಉಂಟಾಗದು ಎಂದು ವರದಿಯಾಗಿದೆ.

ಕಳೆದ ವರ್ಷ ನವೆಂಬರ್ 24ರಂದು ಉತ್ತರ ಪ್ರದೇಶದ ಸಂಭಲ್‌ನಲ್ಲಿ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ಹಿಂಸಾಚಾರ ನಡೆದಿದ್ದು, ನಾಲ್ವರು ಮೃತಪಟ್ಟಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರದ ಬಳಿಕ ಹಲವು ಮಂದಿ ತಮ್ಮ ಆತಂಕದಲ್ಲಿ ತಮ್ಮ ಮನೆ ತೊರೆದಿದ್ದಾರೆ. ಈ ಕುರಿತು ಸಂಭಲ್ ಪೊಲೀಸ್ ವರಿಷ್ಠಾಧಿಕಾರಿ ಕ್ರಿಶನ್ ಕುಮಾರ್ ಪ್ರತಿಕ್ರಿಯಿಸಿ, ಹಿಂಸಾತ್ಮಕ ಪ್ರತಿಭಟನೆ ನಡೆದಿದ್ದ ಪ್ರದೇಶದಲ್ಲಿ ಸುಮಾರು 1,000 ಮನೆಗಳಿಗೆ ಬೀಗ ಹಾಕಲಾಗಿದೆ ಎಂದು ತಿಳಿಸಿದ್ದರು. ಇದೀಗ ಹೋಳಿ ಮತ್ತು ಜುಮ್ಮಾ ಸಂದರ್ಭದಲ್ಲಿ ಘರ್ಷಣೆ ನಡೆಯುವ ಆತಂಕ ಎದುರಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...