ಮೊದಲ ಹಂತದಲ್ಲಿ 10 ಸಾವಿರ ಅಂಗನವಾಡಿಗಳು ಮೇಲ್ದರ್ಜೆಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

“ರಾಜ್ಯದ ಅಂಗನವಾಡಿಗಳ ಪುನಃಶ್ಚತನಕ್ಕೆ ತೀರ್ಮಾನಿಸಲಾಗಿದ್ದು, ಮೊದಲ ಹಂತದಲ್ಲಿ 10 ಸಾವಿರ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

- Advertisement -

ಬೆಳಗಾವಿಯಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌, ಸೀರೆ, ಔಷಧ ಕಿಟ್, ತೂಕದ ಯಂತ್ರಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿ ಸರ್ಕಾರಿ ಮಾಂಟೆಸ್ಸರಿ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರದಿಂದ 20 ಸಾವಿರ ಸ್ಮಾರ್ಟ್‌ ಕ್ಲಾಸ್‌ಗಳು ಮಂಜೂರಾಗಿವೆ. 15 ಸಾವಿರಕ್ಕೂ ಹೆಚ್ಚು ಪದವೀಧರ ಶಿಕ್ಷಕರು ಕೆಲಸ ಮಾಡುತ್ತಿದ್ದು, ಎಲ್ಲರಿಗೂ ತರಬೇತಿ ನೀಡಲು ನಿರ್ಧರಿಸಲಾಗಿದೆ. ನಿಮ್ಮ ಕೌಶಲ್ಯ ಹೆಚ್ಚಿಸಲು ತರಬೇತಿ ನೀಡಲಾಗುವುದು. ಇದಕ್ಕಾಗಿ ₹10 ಕೋಟಿ ಮೀಸಲಿಡಲಾಗಿದೆ” ಎಂದು ಸಚಿವೆ ಮಾಹಿತಿ ನೀಡಿದರು.

“ಮೊಬೈಲ್‌ನಲ್ಲಿ ಪೋಷನ್ ಅಭಿಯಾನ, ಪಲ್ಸ್ ಪೋಲಿಯೋ ಅಭಿಯಾನ ಸೇರಿ ಇತರ ಕೆಲಸ ಮಾಡಲು ಆಗುತ್ತಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ದೂರು ನೀಡಿದ್ದರು. ಹಾಗಾಗಿ, 13 ಸಾವಿರ ಮೌಲ್ಯದ ಉತ್ತಮ ಗುಣಮಟ್ಟದ ಸ್ಯಾಮ್‌ಸಂಗ್ ಮೊಬೈಲ್ ವಿತರಿಸಲಾಗುತ್ತಿದೆ. ಕೇವಲ ಮೊಬೈಲ್ ವಿತರಣೆ ಮಾಡಿ ಕೆಲಸ ಮುಗಿದಿದೆ ಅಂತ ಸುಮ್ಮನೆ ಕುಳಿತಿಲ್ಲ. ನಮ್ಮ ಕ್ಷೇತ್ರದಲ್ಲಿ 650 ಮೊಬೈಲ್ ಕೊಡುತ್ತಿದ್ದೇವೆ. ತಾಂತ್ರಿಕ ತೊಂದರೆ ಬಂದರೆ ಎಕ್ಸ್‌ಚೇಂಜ್ ಮಾಡಲು ಹೆಚ್ಚುವರಿ ಮೊಬೈಲ್ ತರಿಸಿದ್ದೇವೆ. ಇಡೀ ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸ್ಮಾರ್ಟ್ ಆಗಿ ಕಾಣಬೇಕು. ನಮ್ಮ ಅಂಗನವಾಡಿಗಳು ಅಪ್‌ಗ್ರೇಡ್ ಆಗಿ ಸಕ್ಷಮ ಅಂಗನವಾಡಿಗಳು ಬೇಕು. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ 20 ಸಾವಿರ ಅಂಗನವಾಡಿಗಳಿಗೆ ಸ್ಮಾರ್ಟ್ ಕ್ಲಾಸ್ ತೆಗೆದುಕೊಂಡು ಬಂದಿರುವೆ” ಎಂದು ಹೇಳಿದರು.

“130 ರೂ. ಗೌರವ ಧನದೊಂದಿಗೆ ಅಂಗನವಾಡಿಗಳು ಕಾರ್ಯಾರಂಭ ಆಗಿದ್ದವು. ಪಿಯುಸಿ ಕಲಿತ 20 ಸಾವಿರ, ಪದವಿ ಪಡೆದ 15 ಸಾವಿರ, ಸ್ನಾತಕೋತ್ತರ ಪದವಿ ಪಡೆದ 2 ಸಾವಿರ ಅಂಗನವಾಡಿ ಶಿಕ್ಷಕಿಯರಿದ್ದಾರೆ. ತಜ್ಞರ ಕಮಿಟಿ ಮಾಡಿ 9 ರಿಂದ 10 ಸಾವಿರ ಅಂಗನವಾಡಿಗಳಿಗೆ ಸರ್ಕಾರಿ ಮಾಂಟೆಸ್ಸರಿ ಮಾಡಲಾಗುವುದು. ನಿಮ್ಮೆಲ್ಲರ ಹೋರಾಟದಿಂದ ಅಂಗನವಾಡಿಗೆ ಹೊಸ ಹೆಸರು ಬಂದಿದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

“ಮಕ್ಕಳ ಭವಿಷ್ಯ ಸುಧಾರಣೆಗೆ ರಾಜ್ಯ ಸರ್ಕಾರ ಹಲವಾರು ಮಹತ್ವದ ತೀರ್ಮಾನ ಕೈಗೊಂಡಿದೆ. ಅದಕ್ಕೆ ತಕ್ಕಂತೆ ಅಂಗನವಾಡಿ ಕಾರ್ಯಕರ್ತೆಯರೂ ತಮ್ಮ ಕೌಶಲ ವೃದ್ಧಿಸಿಕೊಳ್ಳಬೇಕು” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...