ಗೃಹಜ್ಯೋತಿ | 48 ಯೂನಿಟ್‌ಗಿಂತ ಕಡಿಮೆ ಬಳಸುವವರಿಗೆ ಫೆಬ್ರವರಿಯಿಂದ 10 ಯೂನಿಟ್‌ ಉಚಿತ

Date:

Advertisements

ಗೃಹಜ್ಯೋತಿ ಯೋಜನೆಯಡಿ ಮಾಸಿಕ 48 ಯುನಿಟ್‌ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 70 ಲಕ್ಷ ಗ್ರಾಹಕರಿಗೆ ಇನ್ನು ಮುಂದೆ ಮಾಸಿಕ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಪ್ರತಿ ಮನೆಗೆ ಭರವಸೆಯ ಬೆಳಕು ಹರಿಸುವ ಸರ್ಕಾರದ ಕಾರ್ಯಕ್ರಮ ಈಗ ಇನ್ನಷ್ಟು ಜನಸ್ನೇಹಿಯಾಗಿದೆ” ಎಂದು ಹೇಳಿದ್ದಾರೆ.

ಗ್ರಾಹಕರಿಗೆ ಮಾಸಿಕ ಹೆಚ್ಚುವರಿ 10 ಯೂನಿಟ್‌ ಒದಗಿಸಲು ಸಂಪುಟ ಸಭೆ ಸಮ್ಮತಿ ನೀಡಿತ್ತು. ಈ ಸಂಬಂಧ ಕಳೆದ ಜೂ. 5ರಂದು ಹೊರಡಿಸಿದ್ದ ಆದೇಶ ಮಾರ್ಪಡಿಸಲು ತೀರ್ಮಾನಿಸಲಾಗಿದೆ. ಈ ತಿಂಗಳಿನಿಂದ ಇದು ಜಾರಿಗೆ ಬರಲಿದೆ.

Advertisements

ಬೆಸ್ಕಾಂ ವ್ಯಾಪ್ತಿಯಲ್ಲಿ 69.73 ಲಕ್ಷ ಕುಟುಂಬಗಳು 48 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುತ್ತಿವೆ. ಹೆಚ್ಚುವರಿ 10 ಯೂನಿಟ್‌ ಒದಗಿಸುವ ನಿರ್ಧಾರದಿಂದ 33 ಕೋಟಿ ರೂ. ವೆಚ್ಚವಾಗುವ ಅಂದಾಜಿದೆ. ರಾಜ್ಯದಲ್ಲಿ ಗೃಹ ಬಳಕೆ ಗ್ರಾಹಕರ ಸರಾಸರಿ ಬಳಕೆ 53 ಯೂನಿಟ್‌ನಷ್ಟಿದ್ದು, ಸರಾಸರಿ ಶೇ. 10ರಷ್ಟು ಉಚಿತ ವಿದ್ಯುತ್‌ ಸೇರಿದಂತೆ ಒಟ್ಟು 58 ಯೂನಿಟ್‌ವರೆಗೆ ಉಚಿತವಾಗಿ ಬಳಸಲು ಅವಕಾಶವಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X