ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ : ಸರಣಿ ಟ್ವೀಟ್ ಮೂಲಕ ಟೀಕಿಸಿದ ಬಿಜೆಪಿ

Date:

  • ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ ಎಂದ ಬಿಜೆಪಿ
  • ಗ್ಯಾರಂಟಿ ಯೋಜನೆಯನ್ನು ಟೀಕಿಸಿ, ಟ್ವೀಟ್ ಮಾಡಿದ ಬಿಜೆಪಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ನೂರು ದಿನಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ ಘಟಕ, ‘ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ’ ಎಂದು ಟೀಕಿಸಿದೆ.

ಸುಮಾರು 10 ಟ್ವೀಟ್‌ ಮಾಡಿರುವ ಬಿಜೆಪಿ ಐಟಿ ಸೆಲ್, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಎಡವಿದೆ ಎಂದು ಆರೋಪಿಸಿದೆ.

ಮೊದಲ ಟ್ವೀಟ್‌ನಲ್ಲಿ, ‘ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿದ್ದರಾಮಯ್ಯನವರ ಸರ್ಕಾರ ನೂರು ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ ಹೆಚ್ಚು ಹಳವಂಡಗಳೇ ಹೆಚ್ಚು. ಅಧಿಕಾರಿಗಳ ದುರುಪಯೋಗ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ, ಶ್ಯಾಡೋ ಸಿಎಂ, ಕಾಸಿಗಾಗಿ ಪೋಸ್ಟಿಂಗ್, ಮರಳು ಮಾಫಿಯಾ, ರೈತರ ಆತ್ಮಹತ್ಯೆ, ಕಲುಷಿತ ನೀರು, ಕಳಪೆ ಆಹಾರ ವಿತರಣೆ, ಉಡುಪಿಯ ಅಮಾನುಷ ಘಟನೆ ಅಬ್ಬಬ್ಬಾ ‌ಒಂದಾ ಎರಡಾ ಭಂಡ ಕಾಂಗ್ರೆಸ್ಸಿನ 100 ಕರ್ಮಕಾಂಡಗಳು ತೆರೆಯುತ್ತವೆ’ ಎಂದು ದೂರಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗ್ಯಾರಂಟಿಗಳ ಪುಂಗಿ ಊದಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಎಡವಿದ್ದೂ ಅಲ್ಲದೆ ಇಂದಿಗೂ ಅವುಗಳನ್ನು ಸರಿಯಾಗಿ ಜಾರಿ ಮಾಡಲಾಗಲಿಲ್ಲ.

‘ಗ್ಯಾರಂಟಿಗಳ ಅನುಷ್ಠಾನಕ್ಕೂ ಮೊದಲೇ ರಾಜ್ಯದಲ್ಲಿ ಶುರುವಾಗಿದ್ದು ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ದರ್ಬಾರ್. ಉನ್ನತ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಅಧಿಕಾರ ಚಲಾಯಿಸಿದ್ದರು. ಈ ಮೂಲಕ ರಾಜ್ಯದ ಬೊಕ್ಕಸದಿಂದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾದದ್ದು ಎಷ್ಟು ಎಂಬುದನ್ನು ಎಲ್ಲವನ್ನೂ ತಿಳಿದ ಡಿಕೆ ಶಿವಕುಮಾರ್ ಅವರೇ ತಿಳಿಸಬೇಕಷ್ಟೆ’ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ವಿರುದ್ಧವೂ ವಾಗ್ದಾಳಿ ನಡೆಸಿದೆ.

’10 ಕೆಜಿ ಅಕ್ಕಿ ಬೇಕೋ ಬೇಡ್ವಾ ಎಂದಿದ್ದ ಸಿದ್ದರಾಮಯ್ಯರವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದರು. ಆದರೆ ಇವರ ಮೋಸ ಜನರಿಗೆ ತಿಳಿಯುತ್ತಿದೆ ಎಂಬ ಸೂಚನೆ ಸಿಗುತ್ತಿದ್ದಂತೆ 15 ಕೆಜಿ ಅಕ್ಕಿಯ ಬದಲಿಗೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನೀಡುವ 5 ಕೆಜಿ ಅಕ್ಕಿಯೇ ತಮ್ಮದೆಂದು ಬಿಂಬಿಸಿದರು. ಇನ್ನುಳಿದ 5 ಕೆಜಿ ಅಕ್ಕಿಗೆ ಹಣವನ್ನೇ ತಿನ್ನಿ ಎಂದು ಕೈ ತೊಳೆದುಕೊಂಡರು. ವಿಪರ್ಯಾಸವೆಂದರೆ ಪ್ರಧಾನಿ ಮೋದಿ ಅವರ ಸರ್ಕಾರದ 5 ಕೆಜಿ ಅಕ್ಕಿಯಲ್ಲಿ ಎರಡು ಕೆಜಿಯನ್ನು ಎಟಿಎಂ ಸರ್ಕಾರವೇ ತಿಂದು ತೇಗಿದೆ. ಫಲಾನುಭವಿಗಳಿಗೆ ಮೂರು ಕೆಜಿ ಅಕ್ಕಿ ನೀಡಿ ಎರಡು ಕೆಜಿ ರಾಗಿ ನೀಡುತ್ತಿದೆ. 5 ಕೆಜಿ ಅಕ್ಕಿಗೆ ಹಣ ಕೊಡುತ್ತೇವೆಂದು ಪಡಿತರ ಚೀಟಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿಲ್ಲವೆಂದು ಕಾಂಗ್ರೆಸ್ ಇನ್ನೂ ಕಾಗೆ ಹಾರಿಸುತ್ತಲೇ ಇದೆ’ ಎಂದು ಹೇಳುವ ಮೂಲಕ ಅನ್ನಭಾಗ್ಯ ಯೋಜನೆಯ ವಿವಾದಕ್ಕೆ ಮತ್ತೆ ಬಿಜೆಪಿ ಕೈ ಹಾಕಿದೆ.

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಅತಿಹೆಚ್ಚು ಸಂಭ್ರಮಿಸಿದ್ದು ಜಿಹಾದಿ ಮನಸ್ಥಿತಿಗಳು’ ಎಂದು ಟ್ವೀಟ್ ಮಾಡುವ ಬಿಜೆಪಿ ಮೂಲಕ ಮುಸ್ಲಿಮರ ವಿರುದ್ದವು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ‘ನೂರು ದಿನದಲ್ಲಿ ನೂರಕ್ಕೂ ಹೆಚ್ಚು ಕರ್ಮಕಾಂಡಗಳೇ ತುಂಬಿ ತುಳುಕುತ್ತಿವೆ. ಇಂತಹ ಅಸಮರ್ಥ, ಅವಿವೇಕಿ ಕಾಂಗ್ರೆಸ್ ಸರ್ಕಾರ ಪಡೆದ ಕನ್ನಡಿಗರು ಹಿಡಿ ಶಾಪ ಹಾಕುತ್ತಿದ್ದಾರೆ’ ಎಂದು ಟ್ವೀಟ್ ಮಾಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ಯುವಕರ ದಾರಿ ತಪ್ಪಿಸುತ್ತಿದೆ ಕೋಮುವಾದಿ ಸಂಘಟನೆ; ಮುತ್ತು ಬಿಳಿಯಲಿ ಆರೋಪ

ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ 'ದಲಿತ ಮಿತ್ರ ಮೇಳ ಗದಗ' ಎಂಬ...

ಕಲಬುರಗಿ | ಭಿಕ್ಷೆ ಬೇಡಿ ಬದುಕುತ್ತಿರುವ ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ

ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್...

ಮಂಗಳೂರು | ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು ಹೆಚ್ ಅಧಿಕಾರ ಸ್ವೀಕಾರ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಉಮರ್...

ರೇಣುಕಸ್ವಾಮಿ ಕೊಲೆ | ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ...