ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತ; ಪ್ರಧಾನಿ ಮೋದಿ ಘೋಷಣೆ

Date:

ಇಂದು (ಮಾರ್ಚ್‌ 8) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್‌ ಬೆಲೆ ಕಡಿತಗೊಳಿಸಲು ಮುಂದಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂ. ಇಳಿಕೆ ಇಳಿಕೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, “ಬೆಲೆ ಕಡಿತವು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ, ವಿಶೇಷವಾಗಿ, ‘ನಾರಿ ಶಕ್ತಿ’ಗೆ ಪ್ರಯೋಜನ ನೀಡುತ್ತದೆ” ಎಂದು ಹೇಳಿದ್ದಾರೆ.

“ಅಡುಗೆ ಅನಿಲವನ್ನು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ಜೀವನ ಸೌಕರ್ಯವನ್ನು ಖಾತರಿಪಡಿಸುವ ನಮ್ಮ ಬದ್ಧತೆಯನ್ನು ಭಾಗವಾಗಿದೆ” ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉಜ್ವಲ ಯೋಜನೆಯಡಿ ಪ್ರತಿ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಗೆ 300 ರೂಪಾಯಿಗಳನ್ನು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಹೊಸ ಆರ್ಥಿಕ ವರ್ಷಕ್ಕೆ ವಿಸ್ತರಿಸುವುದಾಗಿ ಸರ್ಕಾರ ಗುರುವಾರ ಪ್ರಕಟಿಸಿದೆ.

ಸದ್ಯ ಬೆಂಗಳೂರಿನಲ್ಲಿ ಅಡುಗೆ ಅನಿಲದ ಸಿಲಿಂಡರ್‌ ಬೆಲೆ 1050 ರೂ. ಇದೆ. ಅಲ್ಲದೆ, ಉಜ್ವಲ ಯೋಜನೆಯಡಿ ನೀಡಲಾಗುತ್ತಿರುವ 300 ರೂ. ಸಬ್ಸಿಡಿಯು ಮಾರ್ಚ್‌ 31ಕ್ಕೆ ಕೊನೆಗೊಳ್ಳಲಿದೆ. ಆ ಸಬ್ಸಿಡಿ ಮುಂದಿನ ವರ್ಷಕ್ಕೂ ಮುಂದುವರೆಸುವುದಾಗಿ ಕೇಂದ್ರ ಹೇಳಿದೆ

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಳೆದ ನಾಲ್ಕೈದು ವರ್ಷಗಳಿಂದ ಗ್ಯಾಸ್ ಸಿಲಿಂಡರ್ ದರ ಮೂರು ಪಟ್ಟು ಏರಿಸಿ ಗೃಹಿಣಿಯರ ರಕ್ತ ಕುಡಿದು ಈಗ ಮೂಗಿಗೆ ತುಪ್ಪ ಸವರಿದ್ದಾರೆ,, ಚುನಾವಣೆ ಲಾಭಕ್ಕಾಗಿ ಏನು ಬೇಕಾದ್ರೂ ಮಾಡುವರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...

ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ...