2025ರಲ್ಲಿ ಅಮೆರಿಕದಿಂದ 3,800+, ಸೌದಿಯಿಂದ 12,000 ಭಾರತೀಯರ ಗಡಿಪಾರು

Date:

ಟ್ರಂಪ್ ನೇತೃತ್ವದ ಅಮೆರಿಕ ಆಡಳಿತವು ವಲಸೆ ವಿರುದ್ಧ ಕಠಿಣ ಕ್ರಮ ಕೈಗೊಂಡು, 2025ರಲ್ಲಿ 3,800ಕ್ಕೂ ಹೆಚ್ಚು ಭಾರತೀಯರನ್ನು ಅಮೆರಿಕದಿಂದ ಗಡಿಪಾರು ಮಾಡಿದೆ. ಅಂತೆಯೇ, ಸೌದಿ ಅರೇಬಿಯಾ ಕೂಡ 12,000ಕ್ಕೂ ಹೆಚ್ಚು ಭಾರತೀಯರನ್ನು ಹೊರಗಟ್ಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

- Advertisement -

ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿವಿಧ ದೇಶಗಳಿಂದ ಗಡಿಪಾರುಗೊಂಡ ಭಾರತೀಯ ವಲಸೆ ಕಾರ್ಮಿಕರ ಮಾಹಿತಿ ನೀಡುವಂತೆ ಬಜೆಟ್‌ ಅಧಿವೇಶನದಲ್ಲಿ ಕೇಳಿದ್ದರು. ಅವರ ಪ್ರಶ್ನೆಗೆ ಉತ್ತರಿಸಿರುವ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, “2025ರ ಡಿಸೆಂಬರ್ ಅಂತ್ಯದ ವೇಳೆಗೆ ಅಮೆರಿಕದಿಂದ 3,800ಕ್ಕೂ ಹೆಚ್ಚು, ಸೌದಿ ಅರೇಬಿಯಾದಿಂದ 12,000, ನ್ಯೂಯಾರ್ಕ್ (47), ಅಟ್ಲಾಂಟಾ (31), ಹೂಸ್ಟನ್ (234), ಸ್ಯಾನ್ ಫ್ರಾನ್ಸಿಸ್ಕೋ (49) ಹಾಗೂ ಸಿಯಾಟಲ್‌ನಿಂದ 31 ಭಾರತೀಯರು ಗಡಿಪಾರುಗೊಂಡಿದ್ದಾರೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅಷ್ಟೇ ಅಲ್ಲದೆ, ಮಲೇಷ್ಯಾ, ಮ್ಯಾನ್ಮಾರ್ ಹಾಗೂ ಯುಎಇ ಕೂಡ ಹೆಚ್ಚಿನ ಸಂಖ್ಯೆಯ ಭಾರತೀಯರನ್ನು ಭಾರತಕ್ಕೆ ಗಡಿಪಾರು ಮಾಡಿವೆ ಎಂದು ಅವರು ಹೇಳಿದ್ದಾರೆ.

“ಭಾರತೀಯ ನಾಗರಿಕರ ಗಡೀಪಾರುಗೆ ಸಂಬಂಧಿಸಿದ ಎಲ್ಲ ವಿಷಯಗಳಲ್ಲಿ ಭಾರತ ಸರ್ಕಾರವು ಅಮೆರಿಕ ಮತ್ತು ಇತರ ವಿದೇಶಿ ಸರ್ಕಾರಗಳೊಂದಿಗೆ ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತದೆ” ಎಂದು ಸಿಂಗ್ ಹೇಳಿದ್ದಾರೆ.

ಭಾರತೀಯ ಅಕ್ರಮ ವಲಸಿಗರನ್ನು ಅಮೆರಿಕವು ‘ಸಂಕೋಲೆಗಳು’ ಮತ್ತು ‘ಸರಪಳಿಗಳಲ್ಲಿ’ ಕಟ್ಟಿ ಅಮಾನವೀಯವಾಗಿ ಭಾರತಕ್ಕೆ ಗಡೀಪಾರು ಮಾಡಿತ್ತು. ಅಮೆರಿಕ ನಡೆ ಮತ್ತು ಕೇಂದ್ರ ಸರ್ಕಾರದ ಮೌನದ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿತ್ತು. ಕಳೆದ ವರ್ಷ ಸಂಸತ್ ಅಧಿವೇಶನದಲ್ಲಿ ಗಡಿಪಾರು ವಿಚಾರವನ್ನು ವಿಪಕ್ಷಗಳು ಬಲವಾಗಿ ಎತ್ತಿದ್ದವು.

ಆದಾಗ್ಯೂ, “ಗಡೀಪಾರುಗೊಂಡ ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳನ್ನು ಸಂಕೋಲೆಗಳಲ್ಲಿ ಬಂಧಿಸಿದ್ದ ಕುರಿತು ನಾವು ಅಮೆರಿಕದ ಅಧಿಕಾರಿಗಳೊಂದಿಗೆ ನಮ್ಮ ಕಳವಳಗಳನ್ನು ದಾಖಲಿಸಿದ್ದೇವೆ” ಎಂದು ಸರ್ಕಾರ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ರ‍್ಯಾಲಿಗೆ ತೆರಳುತ್ತಿದ್ದ TMC ಶಾಸಕನ ಕಾರಿಗೆ ಮೊಟ್ಟೆ, ಕಲ್ಲು ತೂರಾಟ

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸಾರ್ವಜನಿಕ ಸಭೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...