ಹಾಲಿನ ದರ ಏರಿಕೆ ಸೇರಿದಂತೆ ಪ್ರಮುಖ 13 ಪ್ರಸ್ತಾವಗಳಿಗೆ ಸಚಿವ ಸಂಪುಟ ಅನುಮೋದನೆ

Date:

  • ಹಲವು ಬಂಧೀಖಾನೆಗಳಿಂದ ಸನ್ನಡತೆಯ 67 ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ
  • ತಹಶೀಲ್ದಾರ್ ಹುದ್ದೆಗೆ ಕಾನೂನು ಹೋರಾಟ ನಡೆಸಿದ್ದ ಡಾ. ಮೈತ್ರಿ ಕೆ ಎಎಸ್ ಹುದ್ದೆಗೆ ಪರಿಗಣನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಸಹಿತ 13 ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

- Advertisement -

ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿರ್ಣಯಗಳಿಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ಒಟ್ಟು ಹದಿನೈದು ವಿಚಾರಗಳ ಬಗ್ಗೆ ಇಂದಿನ ಕ್ಯಾಬಿನೆಟ್ ಚರ್ಚೆ ನಡೆಸಿದೆ. ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅದರಂತೆ ಪ್ರತಿ ಲೀಟರ್‌ಗೆ ₹3 ರೂಪಾಯಿ ಹೆಚ್ಚಳ ಆಗಲಿದೆ. ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಹಕಾರ ಇಲಾಖೆಯಲ್ಲಿ ಆರ್‌ಐಡಿಎಫ್‌-28 ಯೋಜನೆಯಡಿ ಎಪಿಎಂಸಿಗಳಿಗೆ ರಸ್ತೆ ಮಾಡಲು, ಇತರೆ ಮೂಲಭೂತ ಸೌಲಭ್ಯ ಕಲ್ಪಿಸಲು 130. 40 ಕೋಟಿ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಮೊಟ್ಟೆ ವಿತರಣೆಯನ್ನು ವಿಭಾಗವಾರು ಖರೀದಿಸಿ, ವಿತರಿಸಲು ಒಪ್ಪಿಗೆ ನೀಡಲಾಗಿದೆ. ಇದನ್ನು KTTP ACT ಮಾದರಿಯಲ್ಲಿ ಜಾರಿ ಮಾಡಲಾಗುವುದು. ಈ ಹಿಂದೆ ತಾಲೂಕು ಹಾಗೂ ಸೆಂಟ್ರಲ್ ಮಟ್ಟದಲ್ಲಿ ಮೊಟ್ಟೆ ಖರೀದಿ ಮಾಡಲಾಗುತ್ತಿತ್ತು” ಎಂದು ತಿಳಿಸಿದರು.

ಕಿರಿಯ ಶ್ರೇಣಿ ತಹಶೀಲ್ದಾರ್ ಹುದ್ದೆಗೆ ಕಾನೂನು ಹೋರಾಟ ನಡೆಸಿದ್ದ ಡಾ. ಮೈತ್ರಿ ಅವರ ಮನವಿಯನ್ನು ಸರ್ಕಾರ ಪುರಸ್ಕಾರ ಮಾಡಿದೆ. 2011ರಿಂದ ಕಾನೂನು ಹೋರಾಟ ನಡೆಸಿದ್ದ ಮೈತ್ರಿಯವರನ್ನು ಕೆ ಎ ಎಸ್ ಹುದ್ದೆಗೆ ಪರಿಗಣನೆ ಮಾಡಲಾಗಿದೆ ಎಂದು ಕಾನೂನು ಸಚಿವರು ತಿಳಿಸಿದರು.

ಕೊಡಗರು ಎಂದಿದ್ದ ಕೊಡವ ಸಮುದಾಯದ ಹೆಸರನ್ನು ಕೊಡವರು ಎಂದು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ದ್ವಾರಕಾನಾಥ್ ಸಮಿತಿ ನೀಡಿದ್ದ ವರದಿಯಂತೆ, ಹಿಂದುಳಿದ ವರ್ಗದ ಆಯೋಗದ ಶಿಫಾರಸ್ಸಿನಂತೆ ಈ ತಿದ್ದುಪಡಿ ಆದೇಶ ಮಾಡಲಾಗಿದೆ. ಇಂದಿನಿಂದ ಕೊಡಗರು ಎನ್ನುತ್ತಿದ್ದ ಕೊಡವ ಸಮುದಾಯ ಕೊಡವರೆಂದೇ ಕರೆಸಿಕೊಳ್ಳುತ್ತದೆ ಎಂದು ಎಚ್‌ ಕೆ ಪಾಟೀಲ್ ತಿಳಿಸಿದರು.

ಲೋಕಾಯುಕ್ತ ವಿಚಾರಣಾ ನಿಬಂಧಕರಾಗಿ ನಿವೃತ್ತ ನ್ಯಾಯಾಧೀಶ ಸಿ. ರಾಜಶೇಖರ್ ಅವರನ್ನು ನೇಮಕ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.

ಉಳಿದಂತೆ ಅರಣ್ಯ ಮತ್ತು ಜೀವ ಪರಿಸರ ಇಲಾಖೆಯ ರಾಷ್ಟ್ರೀಯ ಹಾಗೂ ವನ್ಯಜೀವಿ ತಾಣವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ನಿರ್ಧಾರ ತೆಗೆದುಕೊಳ್ಳಲು ಅಗತ್ಯ ಇರುವ ಉಪ ಸಮಿತಿ ರಚಿಸಲು ಮುಖ್ಯಮಂತ್ರಿಯವರಿಗೆ ಸಂಪುಟ ಅಧಿಕಾರ ನೀಡಿದೆ ಎಂದರು.

ಸನ್ನಡತೆಯ ಆಧಾರದ ಮೇಲೆ ರಾಜ್ಯದ ಹಲವು ಬಂಧಿಖಾನೆಗಳಿಂದ 67 ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಆಗಸ್ಟ್ 15ಕ್ಕೆ ಬಿಡುಗಡೆ ಭಾಗ್ಯ ಸಿಗಲಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ 24, ಮೈಸೂರಿನಿಂದ 8, ಬೆಳಗಾವಿಯಿಂದ 2, ಕಲಬುರಗಿಯಿಂದ 5, ಶಿವಮೊಗ್ಗದಿಂದ 12, ಬಳ್ಳಾರಿಯಿಂದ 8, ಧಾರವಾಡ ಸೆಂಟ್ರಲ್ ಜೈಲಿನಿಂದ 2 ಕೈದಿಗಳು ಬಿಡುಗಡೆಗೊಳ್ಳಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿನ ಒತ್ತುವರಿ ಪ್ರದೇಶಗಳ ಆಡಿಟ್ ಗೆ ನಿರ್ದೇಶನ ನೀಡಲಾಗಿದೆ ಎಂದ ಸಚಿವರು, ಒತ್ತುವರಿಯಲ್ಲಿ ಖನಿಜ ತೆಗೆದು ಬಳಕೆ ಮಾಡಿದ್ದಿದ್ದರೆ ಅಂತಹವರಿಗೆ ದಂಡ ಹಾಕಲಾಗುತ್ತದೆ. ಈ ಬಾರಿ ಅಂತಹ ದಂಡಕ್ಕೆ ಒನ್ ಟೈಂ ಸೆಟ್ಲಮೆಂಟ್ ಗೆ ಅವಕಾಶ ನೀಡಲಾಗಿದೆ. ಇದರಲ್ಲಿ 6105 ಕೋಟಿ ದಂಡ ವಸೂಲಿ ಆಗಬೇಕಿದೆ. ಇದನ್ನು ಹೇಗೆ ಮಾಡಬೇಕು ಅನ್ನುವುದಕ್ಕೆ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿ ತೀರ್ಮಾನ ಮಾಡಿಕೊಳ್ಳಲಾಗುತ್ತದೆ. ಸರಿ ಸುಮಾರು ಎಂಟು ವರ್ಷಗಳಿಗೂ ಅಧಿಕ ಕಾಲದ ಬಾಕಿ ಇದಾಗಿದೆ ಎಂದು ಮಾಹಿತಿ ನೀಡಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೆಫ್ರೋಲಜಿ ಕಟ್ಟಡ ಕಟ್ಟಲು ಹೆಚ್ಚುವರಿ ಪರಿಷ್ಕೃತ ಮೊತ್ತ ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿದೆ. ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಬೆಂಗಳೂರಿನ ವಾಜಪೇಯಿ ಆರೋಗ್ಯ ಕೇಂದ್ರದಲ್ಲಿ ತೆರೆಯಲು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವದ (PPP) ಲೋಕೋಪಯೋಗಿ ಯೋಜನೆಗಳ ಅನುಷ್ಠಾನ ಹಾಗೂ ಪರಿವೀಕ್ಷಣೆಗೆ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ರದ್ದು;,ಗ್ಯಾನೇಶ್ ಕುಮಾರ್ ವಜಾಕ್ಕೆ DYFI, SFI, AIDSO ಆಗ್ರಹ

ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಚಿಕ್ಕಮಗಳೂರು | ಮಾನವ ಪ್ರಕೃತಿಯ ಭಾಗ ಎಂಬುದನ್ನು ಮರೆಯಬಾರದು; ಹರೀಶ್ ಎನ್.ಆರ್

ಕಳಸ : ಇಂದಿನ ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರಿತ್ಯ ಸೇರಿದಂತೆ...

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ...