2006ರ ನಂತರ ನೇಮಕವಾದ 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ

Date:

2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

- Advertisement -

ಮೊದಲಿನಿಂದಲೂ ಇದ್ದ ಡಿಫೈನ್ಡ್‌ ಪಿಂಚಣಿ ಯೋಜನೆಯನ್ನು ಬದಲಾವಣೆ ಮಾಡಿ 2006ರ ಬಳಿಕ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನೆಯನ್ನು ವಿರೋಧಿಸಿ ಒಂದು ದಶಕಗಳಿಂದ ರಾಜ್ಯ ಸರ್ಕಾರಿ ನೌಕರರು ಹೋರಾಟ ನಡೆಸಿ ಮತ್ತೆ ಹಿಂದಿನ ಯೋಜನೆ ವ್ಯಾಪ್ತಿಗೆ ಸೇರಿಸುವಂತೆ ಪಟ್ಟು ಹಿಡಿದಿದ್ದರು. ಸದ್ಯ ಸರ್ಕಾರ ಒಂದು ಬಾರಿ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಹಲವು ಷರತ್ತುಗಳನ್ನು ವಿಧಿಸಿದ್ದು, ನೌಕರರು ಇಚ್ಛೆಪಟ್ಟಲ್ಲಿ ಮಾತ್ರ ಒಮ್ಮೆ ಬದಲಾವಣೆಗೆ ಅವಕಾಶ ನೀಡಿದೆ. ಈ ಕುರಿತು ಅರ್ಜಿ ನಮೂನೆಯನ್ನು ಜೂನ್‌ 30ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, “2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರ ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಎಲ್ಲ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ” ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ವಿರೋಧ ವ್ಯಕ್ತ

“ಪ್ರತಿಭಟನೆ ಮಾಡುತ್ತಿದ್ದವರು ಅಷ್ಟೂ ಎನ್‌ಪಿಎಸ್‌ ನೌಕರರು. ದಯಮಾಡಿ ಎಲ್ಲ ಎನ್‌ಪಿಎಸ್‌ ನೌಕರರನ್ನು ಒಪಿಎಸ್‌ಗೆ ಒಳಪಡಿಸಿ, ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಹಾಗೂ ಅವರ ಕುಟುಂಬದ ಬದುಕಿಗೆ ಭದ್ರತೆ ಒದಗಿಸಿ ನ್ಯಾಯ ನೀಡಬೇಕು” ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲೇ ಆಗ್ರಹಿಸಿದ್ದಾರೆ.

“ಇದು ನ್ಯಾಯಾಲಯದ ಆದೇಶ ಅದರ ಪ್ರಕಾರ ಹಳೆಯ ಪಿಂಚಣಿ ಯೋಜನೆ ಕೊಟ್ಟಿದ್ದೀರಿ. 2006ರ ನಂತರ ನೇಮಕವಾದ ಉಳಿದ ಎಲ್ಲ ನೌಕರರಿಗೂ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದೀರಿ. ಅದನ್ನು ಈಡೇರಿಸಿ” ಎಂದು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...