ಬೆಳಗಾವಿ ಅಧಿವೇಶನ | ಕಲ್ಯಾಣ ಕರ್ನಾಟಕ ಭಾಗದಲ್ಲಿ 14 ನೀರಾವರಿ ಯೋಜನೆಗಳು ಪೂರ್ಣ: ಸಚಿವ ರಾಮಲಿಂಗಾರೆಡ್ಡಿ

Date:

ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ 6 ನೀರಾವರಿ ಯೋಜನೆಗಳಲ್ಲಿ ಮೂರು, ಕರ್ನಾಟಕ ನೀರಾವರಿ ನಿಗಮದ ಅಡಿಯಲ್ಲಿ 11 ಯೋಜನೆಗಳು ಪೂರ್ಣಗೊಂಡಿವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಪರವಾಗಿ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನ ಪರಿಷ‌ತ್‌ನಲ್ಲಿ ಗುರುವಾರ ತಿಳಿಸಿದರು.

- Advertisement -

ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ತಳವಾರ ಸಾಬಣ್ಣ ಅವರು, “ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯಲ್ಲಿರುವ ಮಧ್ಯಮ ಮತ್ತು ಬೃಹತ್ ನೀರಾವರಿ ಯೋಜನೆಗಳು ಮತ್ತು ಈ ಯೋಜನೆಗಳಿಗೆ ಕಳೆದ 5 ವರ್ಷಗಳಲ್ಲಿ ಮಾಡಿದ ವೆಚ್ಚ, ಕಾಲುವೆಗಳ ದುಸ್ಥಿತಿ ಸೇರಿದಂತೆ ಅಧಿಕಾರಿಗಳ, ಗುತ್ತಿಗೆದಾರರ ವಂಚನೆ” ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

“ಎರಡು ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ತಯಾರಾಗಬೇಕು. ಈ ವೇಳೆ ಆಂಧ್ರ ಮತ್ತು ತೆಲಂಗಾಣ ರಾಜ್ಯದವರು ಗೆಜೆಟ್ ತಯಾರಿಸದಂತೆ ನ್ಯಾಯಾಲಯದ ಮೊರೆ ಹೋದ ಕಾರಣ ಕೆಲಸ ಮುಂದುವರೆದಿಲ್ಲ. ಬೂದಿಹಾಳ- ವೀರಾಪುರ ಏತ ನೀರಾವರಿ ಯೋಜನೆ ವಿಸ್ತರಣೆ ಕಾರ್ಯ ಪ್ರಗತಿಯಲ್ಲಿದೆ” ಎಂದು ಹೇಳಿದರು.

“ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ವ್ಯಾಪ್ತಿಯ ಕೃಷ್ಣ ಜಲಭಾಗ್ಯ ನಿಗಮದ ಯೋಜನೆಗಳಿಗೆ 1,306 ಕೋಟಿ ಹಣವನ್ನು ಕಳೆದ 5 ವರ್ಷದಲ್ಲಿ ವೆಚ್ಚ ಮಾಡಲಾಗಿದೆ. ಕರ್ನಾಟಕ ನೀರಾವರಿ ನಿಗಮದ 11 ಯೋಜನೆಗಳಿಗೆ ಕಳೆದ 5 ವರ್ಷದಲ್ಲಿ 489 ಕೋಟಿ ಹಣ ವೆಚ್ಚ ಮಾಡಲಾಗಿದೆ” ಎಂದು ತಿಳಿಸಿದರು.

“ಹೂಳು, ಅವಶ್ಯಕ ದುರಸ್ತಿ ಸೇರಿದಂತೆ ನೀರು ಹರಿಸಲು ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಎಲ್ಲಾ ಟೆಂಡರ್ ಗಳನ್ನು ಈ- ಪ್ರಕ್ಯೂರ್ಮೆಂಟ್ ಮೂಲಕವೇ ಪಾರದರ್ಶಕವಾಗಿ ಮಾಡಲಾಗಿದೆ. ಗುಣಮಟ್ಟ ಖಾತರಿಗೂ ಆದ್ಯತೆ ನೀಡಲಾಗಿದ್ದು, ಯಾವುದೇ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳನ್ನು ನೀಡುತ್ತಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...