ಏಪ್ರಿಲ್ ವೇಳೆಗೆ ಬೆಂಗಳೂರು ನಗರಕ್ಕೆ 1400 ಹೊಸ ಎಲೆಕ್ಟ್ರಿಕ್ ಬಸ್‌: ಸಿಎಂ ಸಿದ್ದರಾಮಯ್ಯ

Date:

Advertisements

ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್‌ಗಳು ಬೆಂಗಳೂರು ಮಹಾನಗರ ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್‌ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ” ಎಂದರು.

Advertisements

“ಉಚಿತ ಬಸ್ ಪ್ರಯಾಣವನ್ನು ಬಿಜೆಪಿಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ” ಎಂದು ಸಿಎಂ ಪ್ರಶ್ನಿಸಿದರು.

“ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಕೋವಿಡ್‌ | ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುತ್ತಿಲ್ಲ, ಭಯ ಬೇಡ: ದಿನೇಶ್‌ ಗುಂಡೂರಾವ್‌

“ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ” ಎಂದರು.

“ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ” ಎಂದು ಕುಟುಕಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X