30 ಇಲಾಖೆಗಳ 150 ಸೇವೆ ಒಂದೇ ವೇದಿಕೆಯಲ್ಲಿ ಲಭ್ಯ, ಏಕಗವಾಕ್ಷಿ ಪೋರ್ಟಲ್‌ಗೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು.

- Advertisement -

ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, “ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು. ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು. ಈಗ ರಾಜ್ಯ ಸರಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ. ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ/ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು. ಈ ಸೇವೆಗಳು ಮೊಬೈಲಿನಲ್ಲಿ ಕೂಡ ಸಿಗಲಿವೆ” ಎಂದು ವಿವರಿಸಿದ್ದಾರೆ.

“ಏಕಗವಾಕ್ಷಿ ವ್ಯವಸ್ಥೆಯಡಿ `ಕರ್ನಾಟಕ ಉದ್ಯೋಗ ಮಿತ್ರ’ದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ (ಎಬಿಸಿ) ನೀಡಲಾಗುವುದು. ಹೀಗಾಗಿ ಉದ್ಯಮಿಗಳು ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಮತ್ತು ಇತರೆ ಸಿದ್ಧತೆ ಆರಂಭಿಸಬಹುದು. ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ. ಈ ಪೋರ್ಟಲ್ಲಿನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡ ನಕಾಶೆಗೆ ಅನುಮೋದನೆ ಮುಂತಾದ ಕೆಐಎಡಿಬಿ ಸೇವೆಗಳೂ ಸಿಗಲಿವೆ” ಎಂ‌ದಿದ್ದಾರೆ.

“ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನೂ ಒದಗಿಸಲಾಗುವುದು. ಹೀಗಾಗಿ ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಅನುಕೂಲವಾಗಲಿದೆ. ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿದೆ. ಹಾಗೆಯೇ, ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹನಾ ಭತ್ಯೆ, ರಿಯಾಯಿತಿ ಮತ್ತು ವಿನಾಯಿತಿಗಳನ್ನು `ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್’ ಮೂಲಕ ತಿಳಿದುಕೊಳ್ಳಬಹುದು” ಎಂದು ಮಾಹಿತಿ ನೀಡಿದ್ದಾರೆ.

“ಹೂಡಿಕೆಯ ವಿಚಾರದಲ್ಲಿ ನೆರೆಹೊರೆ ರಾಜ್ಯಗಳಿಂದ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಕೈಗಾರಿಕಾ ಯೋಜನೆಗಳ ವಿಚಾರದಲ್ಲಿ ಉಳಿದ ಪ್ರಕ್ರಿಯೆಗಳು ಸುಲಭವೂ ತ್ವರಿತವೂ ಆಗಿರಲೇಬೇಕು. ಇಲ್ಲದಿದ್ದರೆ, ಅವಕಾಶಗಳು ಬೇರೆಯವರ ಪಾಲಾಗುತ್ತವೆ. ಏಕಗವಾಕ್ಷಿ ವ್ಯವಸ್ಥೆ ತರುತ್ತೇವೆಂದು ಮಾತು ಕೊಟ್ಟಿದ್ದೆವು. ಅದು ಈಗ ಈಡೇರಿದೆ. ಇದು ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ದಾಪುಗಾಲು” ಎಂದು ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ನಕಲಿ ಔಷಧಿ ದಂಧೆಯ ಕಿಂಗ್‌ ಪಿನ್ ಪ್ರಶಾಂತ್‌ಗೆ 14 ದಿನ ನ್ಯಾಯಾಂಗ ಬಂಧನ

ನಕಲಿ ಔಷಧಿ ತಯಾರಿಕೆ ಮತ್ತು ಸರಬರಾಜು ದಂಧೆಯ ಮುಖ್ಯ ಸೂತ್ರಧಾರ (ಕಿಂಗ್...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ; ಏನಿದು ಜಿಎಸ್‌ಟಿ ಕೌನ್ಸಿಲ್?

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ...