15,000 ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆ ಶೀಘ್ರ ಭರ್ತಿ; ಗೃಹ ಸಚಿವ ಪರಮೇಶ್ವರ್

Date:

  • ಪೊಲೀಸ್ ಇಲಾಖೆಗೆ ಬಲ ತುಂಬಲು ಮುಂದಾದ ಸರ್ಕಾರ
  • ಹೊಸ ನೇಮಕಾತಿ ಆರಂಭಿಸಲು ಸೂಚನೆ ನೀಡಿದ ಗೃಹ ಸಚಿವ

ರಾಜ್ಯ ಪೊಲೀಸ್ ಪಡೆಗೆ ಬಲ ತುಂಬವ ಸಲುವಾಗಿ ಶೀಘ್ರವೇ 15,000 ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯ ಪೊಲೀಸ್ ಪಡೆ ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಬೇಕಿದೆ. ಇರುವ ಸಿಬ್ಬಂದಿಗೆ ಹೊಣೆಯ ಜೊತೆಗೆ ಒತ್ತಡವೂ ಹೆಚ್ಚಿದೆ. ಹೀಗಾಗಿ ಹೊಸ ಸಿಬ್ಬಂದಿ ನೇಮಕ ಮಾಡಬೇಕಿದೆ. ಈ ಸಂಬಂಧ ಇಲಾಖೆ ಪ್ರಮುಖರು ಹಾಗೂ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.

ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ 15,000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಇದರಿಂದ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ” ಎಂದು ಪರಮೇಶ್ವರ್ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?:ಕೊಪ್ಪಳ | ಬಿಜೆಪಿ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ…

ಇದೇ ವೇಳೆ ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದೆಂದು ಎಂದು ತಿಳಿಸಿದ ಅವರು, “7ನೇ ವೇತನ ಆಯೋಗ ಜಾರಿ ಮಾಡಿದಲ್ಲಿ ಪ್ರತ್ಯೇಕವಾಗಿ ಔರಾದ್ಕರ್ ವರದಿ ಜಾರಿ ಮಾಡುವ ಅಗತ್ಯ ಬರುವುದಿಲ್ಲ” ಎಂದು ತಿಳಿಸಿದರು.

ಇನ್ನು ಪಿಎಸ್‌ಐ ನೇಮಕಾತಿ ಹಗರಣದ ವಿಚಾರವಾಗಿ ಮಾಹಿತಿ ನೀಡಿದ ಗೃಹ ಸಚಿವ ಪರಮೇಶ್ವರ್, “ಈ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ಅದನ್ನು ಇನ್ನಷ್ಟು ಚುರುಕುಗೊಳಿಸುತ್ತೇವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....

ನೇಹಾ ಕೊಲೆ | ನಿರಂಜನ್ ಮನೆಗೆ ಸಚಿವ ಎಚ್‌ ಕೆ ಪಾಟೀಲ್ ಭೇಟಿ, ನಿರಂಜನ್‌ ಜೊತೆ ಸಿಎಂ ಮಾತು

ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...