ಕೇರಳ ಅಧಿವೇಶನ | ಮೀನು, ತರಕಾರಿ ಬೆಲೆ ಏರಿಕೆಗೆ ಖಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

Date:

ಕೇರಳದಲ್ಲಿ ವಿಧಾನಭಾ ಅಧಿಕವೇಶ ನಡೆಯುತ್ತಿದ್ದು, ಬೆಲೆ ಏರಿಕೆ ತಡೆಯುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿವೆ. ಹಣದುಬ್ಬರವು ರಾಷ್ಟ್ರೀಯ ಸಮಸ್ಯೆಯಾಗಿದ್ದು, ಮಾರುಕಟ್ಟೆಯ ಮಧ್ಯಪ್ರವೇಶದಿಂದಾಗಿ ಹಣದುಬ್ಬರವನ್ನು ಕಡಿಮೆ ಮಾಡಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ.ಆರ್ ಅನಿಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

- Advertisement -

ಆಹಾರ ಉತ್ಪನ್ನಗಳ ಬೆಲೆಯೇರಿಕೆ ತನ್ನ ಗಮನಕ್ಕೆ ಬಂದಿಲ್ಲ ಎಂದು ಸಚಿವ ಅನಿಲ್ ವಿಧಾನಸಭೆಯಲ್ಲಿ ಹೇಳಿದ್ದು ಪ್ರತಿಪಕ್ಷಗಳನ್ನು ಕೆರಳಿಸಿತು. ಕಾಂಗ್ರೆಸ್ ಮುಖಂಡ, ವಿಪಕ್ಷ ನಾಯಕ ವಿ.ಡಿ ಸತೀಶನ್ ಅವರು ಎಲ್‌ಡಿಎಫ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್‌ಡಿಎಫ್ ಸರ್ಕಾರವು ಬೆಲೆ ಏರಿಕೆ ಸಮಸ್ಯೆಯ ಗಂಭೀರತೆಯನ್ನು ಯಾಕೆ ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇತ್ತೀಚಿನ ದಿನಗಳಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿರುವುದರಿಂದ ಮಲಯಾಳಿಗಳು ಬೆಂಡೆಕಾಯಿ, ನುಗ್ಗೆ ಕಾಯಿ ಮತ್ತು ಟೊಮೇಟೊ ಖರೀದಿಸುವುದು ಕಷ್ಟವಾಗಿದೆ” ಎಂದು ಕಾಂಗ್ರೆಸ್‌ ಶಾಸಕ ರೋಜಿ ಎಂ ಜಾನ್ ಆರೋಪಿಸಿದ್ದಾರೆ.

”ತರಕಾರಿ, ಮೀನು, ಮಾಂಸ, ಮೊಟ್ಟೆ ಬೆಲೆ ದುಪ್ಪಟ್ಟಾಗಿದೆ. ಜನ ಮಾರುಕಟ್ಟೆಗೆ ಹೋಗುವುದೇ ಕಷ್ಟವಾಗಿದೆ. ಎಲ್‌ಡಿಎಫ್ ಸರ್ಕಾರ ಕೋಳಿ ಮಾಂಸವನ್ನು ಪ್ರತಿ ಕಿ.ಲೋ.ಗೆ 85 ರೂ.ನಂತೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಆ ಭರವಸೆಯನ್ನು ಸರ್ಕಾರ ಪೂರೈಸಿಲ್ಲ. ವಾಸ್ತವವಾಗಿ, ಜನರು ಈ ಬೆಲೆಯಲ್ಲಿ ಕೋಳಿ ಕಾಲನ್ನೂ ಪಡೆಯಲು ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆ ನಿಯಂತ್ರಿಸಲು ಮಾರುಕಟ್ಟೆ ಮಧ್ಯಸ್ಥಿಕೆಗಾಗಿ ರಾಜ್ಯ ಸರ್ಕಾರವು ಯಾವುದಾರರೂ ರೀತಿಯಲ್ಲಿ ಹಣಕಾಸಿನ ಪ್ರಯೋಜನಗಳನ್ನು ಒದಗಿಸುತ್ತಿದೆಯೇ ಎಂದು ತಿಳಿದುಕೊಳ್ಳಲು ನಾನು ಉತ್ಸುಕನಾಗಿದ್ದೇನೆ” ಎಂದು ಕಿಡಿಕಾರಿದ್ದಾರೆ.

“ಎಲ್‌ಡಿಎಫ್ ಆಡಳಿತದಲ್ಲಿ ಹಣದುಬ್ಬರವು 50% ರಿಂದ 200%ವರೆಗೆ ಏರಿಕೆಯಾಗಿದೆ. ಹಣದುಬ್ಬರ ಕುರಿತು ಪ್ರತಿಪಕ್ಷಗಳ ಪ್ರಸ್ತಾಪವಾದಾಗ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಪಡಿತರ ಅಂಗಡಿಗಳಿಂದ ಅಕ್ಕಿ ವಿತರಿಸುವ ಬಗ್ಗೆ ಉತ್ತರ ನೀಡಿರುವುದು ದುರದೃಷ್ಟಕರ. ನಾವು ತರಕಾರಿಗಳು ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳ ಏರುತ್ತಿರುವ ಬಗ್ಗೆ ವಿವಿಧ ಮಾರುಕಟ್ಟೆಗಳಿಂದ ಮಾಹಿತಿ ಸಂಗ್ರಹಿಸಿದ್ದೇವೆ,” ಎಂದು ವಿಪಕ್ಷ ನಾಯಕ ಸತೀಶನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...